Kaikamba; ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದಾತನ ಬಂಧನ
Team Udayavani, Jan 20, 2024, 8:48 PM IST
ಕೈಕಂಬ: ಪ್ರಕರಣವೊಂದಕ್ಕೆ ನ್ಯಾಯಾಲಯದಿಂದ 5 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ವಿಟ್ಲ ಕರಪಾಡಿ ಗ್ರಾಮದ ಮುಗೋಳಿ ಮನೆಯ ಫಾರೂಕ್ ಯಾನೆ ಫಾರೂಕ್ ಅಹಮ್ಮದ್ (36 ) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ಕಾಸರಗೋಡು ಜಿಲ್ಲೆಯ ಉಪ್ಪಳದ ಮುಳಿಗದ್ದೆಯಿಂದ ಬಜಪೆ ಪೊಲೀಸ್ ನಿರೀಕ್ಷಕ ಸಂದೀಪ್ ನೇತೃತ್ವದ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಮಾರ್ಗದರ್ಶನದಂತೆ, ಡಿಸಿಪಿಯವರಾದ ಸಿದ್ದಾರ್ಥ ಗೋಯೆಲ್ (ಕಾ.ಮತ್ತು ಸು) ಮತ್ತು ದಿನೇಶ್ ಕುಮಾರ್ (ಅಪರಾಧ ಮತ್ತು ಸಂಚಾರ) ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ಮತ್ತು ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎನ್. ನೇತೃತ್ವದಲ್ಲಿ ಪಿಎಸ್ಐಗಳಾದ ಗುರಪ್ಪ ಕಾಂತಿ, ರೇವಣ ಸಿದ್ದಪ್ಪ ಮತ್ತು ಸಿಬಂದಿ ವರ್ಗದ ಎ.ಎಸ್.ಐ ರಾಮ ಪೂಜಾರಿ, ಎಚ್ಸಿ ಗಳಾದ ಜಗದೀಶ್, ಸುಜನ್ ಪಿಸಿಗಳಾದ ಬಸವರಾಜ್ ಪಾಟೀಲ್, ಕೆಂಚಪ್ಪ ಅವರು ಈ ಪತ್ತೆ ಕಾರ್ಯದಲ್ಲಿ ಭಾಗಿಯಾಗಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ