Udayavni Special

ಕಲ್ಲಡ್ಕ ಪ್ರಭಾಕರ ಭಟ್‌ ಅವರ ಬಗ್ಗೆ  ಅವಹೇಳನಕಾರಿ ಹೇಳಿಕೆ


Team Udayavani, Jun 20, 2017, 2:43 PM IST

pratibatane.jpg

ಮಂಗಳೂರು: ಆರ್‌ಎಸ್‌ಎಸ್‌ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ವಿರುದ್ಧ ಮಂಗಳೂರಿನಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು.

ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆ ಸಿದರೆ, ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಕಾರ್ಯಕರ್ತರು ಪಿವಿಎಸ್‌ ವೃತ್ತದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಯುವಾ ಮೋರ್ಚಾ ವತಿಯಿಂದ ನಡೆದ ಪ್ರತಿ ಭಟನೆ ಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್‌ ಪೂಂಜಾ ಮಾತನಾಡಿ, ಸಚಿವ ರೈ ಅವರು ಹಿಂದೂ ಮತ್ತು ಮುಸ್ಲಿಮರನ್ನು ಎತ್ತಿಕಟ್ಟುವ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡು ತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್‌ ಅವರನ್ನು ತಾಕತ್ತಿ ದ್ದರೆ ಅವರು ಬಂಧಿಸಲಿ; ಜಿಲ್ಲೆಯ ಹಿಂದೂ ಯುವಕರು ರೈ ಅವರನ್ನು ಜಿಲ್ಲೆಯಿಂದ ಶಾಶ್ವತ ವಾಗಿ ಓಡಿಸುವ ಕೆಲಸವನ್ನು ಮಾಡುತ್ತಾರೆ ಎಂದರು.

ಸೋಲುವ ಭೀತಿ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿ ಸಚಿವರಿದ್ದಾರೆ. ಅದಕ್ಕಾಗಿ ಹಿಂದೂ- ಮುಸ್ಲಿಮರ ನಡುವೆ ಕೋಮು ವೈಷಮ್ಯ ಹರಡುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಕಲ್ಲಡ್ಕ ದಲ್ಲಿ ನಡೆದ ಘಟನೆಗೆ ಉಸ್ತುವಾರಿ ಸಚಿವರ ಕುಮ್ಮಕ್ಕು ಇದೆ ಎಂಬುದು ಅವರು ಎಸ್ಪಿಯವರಿಗೆ ನೀಡಿರುವ ನಿರ್ದೇಶನಗಳಿಂದ ಸ್ಪಷ್ಟವಾಗುತ್ತದೆ ಎಂದು ಆಪಾದಿಸಿದರು.

ಕಲ್ಲಡ್ಕ ಪ್ರಭಾಕರ ಭಟ್‌ ಅವರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ ಸಚಿವ ರೈ ತತ್‌ಕ್ಷಣ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಮುಂದಿನ ದಿನ  ಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಅವರು ಆಗ್ರಹಿಸಿದರು.

ತಾಳ್ಮೆ ಕೆಡಿಸದಿರಿ
ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ಮತೀಯ ಶಕ್ತಿಗಳಿಂದ ಹಿಂದೂ ಸಮಾಜದ ಮೇಲೆ ದೌರ್ಜನ್ಯ ನಡೆಸುವ ಕೆಲಸ ಆಗುತ್ತಿದೆ. ಹಿಂದೂ ಸಮಾಜದ ತಾಳ್ಮೆ ಬಗ್ಗೆ ಈ ದೇಶದ ಇತಿಹಾಸವೇ ಹೇಳಿದೆ. ಆದಾಗ್ಯೂ ತಾಳ್ಮೆಯನ್ನು ಕೆಡಿಸುವ ಪ್ರಯತ್ನ ಮಾಡದಿರಿ. ಈ ರಾಜ್ಯದಲ್ಲಿ ಈಗಾಗಲೇ ನಿಮ್ಮ ಕೌಂಟ್‌ಡೌನ್‌ ಆರಂಭವಾಗಿದೆ ಎಂದರು.

ಕೊಲೆಯತ್ನ ಪ್ರಕರಣಗಳನ್ನು ಸೆಕ್ಷನ್‌ 307ರಡಿ ದಾಖಲಿಸಲಾಗುತ್ತದೆ. ಆದರೆ ಸಚಿವ ರೈಗೆ ಈ ಬಗ್ಗೆ ಅರಿವಿಲ್ಲದಿರುವುದು ನಾಚಿಕೆಗೇಡು ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್‌ಕ್ಷಣ ರಮಾನಾಥ ರೈ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಬಜರಂಗದಳ ಸಂಚಾಲಕ ಶರಣ್‌ ಪಂಪ್‌ವೆಲ್‌, ವಿವಿಧ ಹಿಂದೂ ಸಂಘಟನೆಗಳ ಮುಖಂಡರಾದ ಸಂದೀಪ್‌ ಶೆಟ್ಟಿ ಮರವೂರು, ರವಿ ಇಳಂತಿಲ, ರಾಮಪ್ರಸಾದ್‌, ಸಂತೋಷ್‌ ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಸದ್ಯದ ಪರಿಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಅಶೋಕ್‌

ಸದ್ಯದ ಪರಿಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಅಶೋಕ್‌

ದೇಶದ ದುಸ್ಥಿತಿಗೆ ಕೇಂದ್ರದ ದುರಾಡಳಿತ ಕಾರಣ: ಡಿಕೆಶಿ

ದೇಶದ ದುಸ್ಥಿತಿಗೆ ಕೇಂದ್ರದ ದುರಾಡಳಿತ ಕಾರಣ: ಡಿಕೆಶಿ

ಸತೀಶ ಜಾರಕಿಹೊಳಿ ಹೇಳಿಕೆ ಶೇಖ್‌ ಮಹಮ್ಮದರ ಲೆಕ್ಕ: ಬೊಮ್ಮಾಯಿ

ಸತೀಶ ಜಾರಕಿಹೊಳಿ ಹೇಳಿಕೆ ಶೇಖ್‌ ಮಹಮ್ಮದರ ಲೆಕ್ಕ: ಬೊಮ್ಮಾಯಿ

ಗ್ರಾಮೀಣ ಭಾಗದಲ್ಲೂ ಕ್ವಾರಂಟೈನ್‌ ವ್ಯವಸ್ಥೆ: ಡಾ.ಕೆ.ಸುಧಾಕರ್‌

ಗ್ರಾಮೀಣ ಭಾಗದಲ್ಲೂ ಕ್ವಾರಂಟೈನ್‌ ವ್ಯವಸ್ಥೆ: ಡಾ.ಕೆ.ಸುಧಾಕರ್‌

ಧಾರವಾಡ: 2 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ: 2 ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿದ್ಯುತ್ ಶಾಕ್ ನಿಂದ ಓರ್ವ ಸಾವು; ಮತ್ತೋರ್ವ ಗಂಭೀರ ಗಾಯ

ವಿದ್ಯುತ್ ಶಾಕ್ ನಿಂದ ಓರ್ವ ಸಾವು; ಮತ್ತೋರ್ವ ಗಂಭೀರ ಗಾಯ

ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಜೂನ್‌ 1ರಿಂದ ದೇವಸ್ಥಾನ ದರ್ಶನಕ್ಕೆ ಅವಕಾಶ : ಇನ್ನೂ ಕೈ ಸೇರದ ಸರಕಾರದ ಆದೇಶ!

ಜೂನ್‌ 1ರಿಂದ ದೇವಸ್ಥಾನ ದರ್ಶನಕ್ಕೆ ಅವಕಾಶ : ಇನ್ನೂ ಕೈ ಸೇರದ ಸರಕಾರದ ಆದೇಶ!

ಉಳ್ಳಾಲ: ಕ್ವಾರಂಟೈನ್ ಕೇಂದ್ರದಲ್ಲಿದ್ದವರ ಬಿಡುಗಡೆ

ಉಳ್ಳಾಲ: ಕ್ವಾರಂಟೈನ್ ಕೇಂದ್ರದಲ್ಲಿದ್ದವರ ಬಿಡುಗಡೆ

ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಸರಕಾರ 2 ತಿಂಗಳ ಸಂಬಳ ನೀಡಿಲ್ಲ: ಖಾದರ್ ಆರೋಪ

ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಸರಕಾರ 2 ತಿಂಗಳ ಸಂಬಳ ನೀಡಿಲ್ಲ: ಖಾದರ್ ಆರೋಪ

MUST WATCH

udayavani youtube

COVID-19 : ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ Homeopathy Medicine | Udayavani

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

ಹೊಸ ಸೇರ್ಪಡೆ

Sleep-Fusion

ಇನ್‌ಲ್ಯಾಂಡ್‌ ಲೆಟರ್‌: ಪ್ರಯಾಣದಲ್ಲಿ ಕನಸಿನ ಸಂಭಾಷಣೆಯಲ್ಲಿ

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಡ್ರಾಪ್ ಬಾಕ್ಸ್‌ : ಹೆಡ್‌ಫೋನ್‌ಗಿಂತ ಒಳ್ಳೆಯ ಗೆಳೆಯನಿಲ್ಲ

ಡ್ರಾಪ್ ಬಾಕ್ಸ್‌ : ಹೆಡ್‌ಫೋನ್‌ಗಿಂತ ಒಳ್ಳೆಯ ಗೆಳೆಯನಿಲ್ಲ

ಮನೋರಂಜನೆ ಅಸ್ತ್ರವಾದ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ನಾನು ನೋಡಿದಂತೆ ಸಿನೆಮಾ : ಮನೋರಂಜನೆ ಅಸ್ತ್ರವಾದ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.