ಕಂಚಿನಡ್ಕಪದವು ಕಸ ವಿಲೇವಾರಿ ವಿವಾದ: ಇಂದು ಸಜೀಪ ಬಂದ್

Team Udayavani, Mar 19, 2020, 11:10 AM IST

ಕಂಚಿನಡ್ಕಪದವು ಕಸ ವಿಲೇವಾರಿ ವಿವಾದ: ಇಂದು ಸಜೀಪ ಬಂದ್

ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕಪದವುನಲ್ಲಿ ಮಾ. 18ರಂದು ಬಂಟ್ವಾಳ ಪುರಸಭೆಯ ಕಸ ವಿಲೇವಾರಿ ನಡೆಸುವ ವೇಳೆ ನಡೆದ ಬೆಳವಣಿಗೆಯನ್ನು ಖಂಡಿಸಿ ಗುರುವಾರ ಸಜೀಪ ಸಂಪೂರ್ಣ ಬಂದ್ ನಡೆಸಲಾಗುತ್ತಿದೆ.

ಕಸ ವಿಲೇವಾರಿ ನಡೆಸುವುದನ್ನು ಪ್ರತಿಭಟಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದೌರ್ಜನ್ಯ ಪ್ರದರ್ಶಿಸಿದ್ದಾರೆ ಹಾಗೂ ಕಸ ವಿಲೇವಾರಿಯ ವಿಚಾರದಲ್ಲಿ ಪುರಸಭೆಯವರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಸಜೀಪನಡು ಗ್ರಾಮಸ್ಥರು ಸಜೀಪ ಬಂದ್ ಗೆ ಕರೆ ನೀಡಿದ್ದರು.

ಏನಿದು ಘಟನೆ
ಕಂಚಿನಡ್ಕಪದವು ಘಟಕದಲ್ಲಿ ತ್ಯಾಜ್ಯ ವಿಲೇವಾರಿ ನಡೆಸುವ ಕುರಿತು ಕೆಲವು ದಿನಗಳಿಂದ ಸ್ಥಳೀಯರು ಹಾಗೂ ಬಂಟ್ವಾಳ ಪುರಸಭೆಯ ಮಧ್ಯೆ ಪರ – ವಿರೋಧದ ಮಾತುಗಳು ಕೇಳಿಬರುತ್ತಿದ್ದು, ಮಂಗಳೂರು ಸಹಾಯಕ ಕಮಿಷನರ್‌ ನಿರ್ದೇಶನದಂತೆ ಪುರಸಭೆಯವರು ಕಸವನ್ನು ವಿಲೇವಾರಿ ನಡೆಸುವುದಕ್ಕೆ ಇಲ್ಲಿಗೆ ತಂದಿದ್ದರು.

ಬುಧವಾರ ಕಸ ಬರುತ್ತದೆ ಎಂದು ಮಾಹಿತಿ ತಿಳಿದ ಸಜೀಪನಡು ಗ್ರಾಮಸ್ಥರು ಗ್ರಾ.ಪಂ.ಅಧ್ಯಕ್ಷ ಮಹಮ್ಮದ್‌ ನಾಸೀರ್‌ ನೇತೃತ್ವದಲ್ಲಿ ತ್ಯಾಜ್ಯ ಘಟಕದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಹಿನ್ನೆಲೆಯಲ್ಲಿ ಪುರಸಭೆಯವರು ಪೊಲೀಸ್‌ ರಕ್ಷಣೆಯನ್ನೂ ಕೇಳಿದ್ದರು.

ಕಂಚಿನಡ್ಕಪದವು ಕಸ ವಿಲೇವಾರಿ ವಿವಾದ: ಇಂದು ಸಜೀಪ ಬಂದ್

ಕಸದ ವಾಹನ ಕಂಚಿನಡ್ಕಪದವುಗೆ ತೆರಳುತ್ತಿದ್ದಂತೆ ಸ್ಥಳೀಯರು ಗೇಟಿಗೆ ಅಡ್ಡ ಕುಳಿತರು. ಮಹಿಳೆಯರು, ಮಕ್ಕಳು ಸಹಿತ ಸುಮಾರು 100ಕ್ಕೂ ಅಧಿಕ ಮಂದಿ ಸೇರಿದ್ದರು. ಪ್ರಾರಂಭದಲ್ಲಿ ಗ್ರಾಮಸ್ಥರ ಮನವೊಲಿಕೆಗೆ ಪ್ರಯತ್ನಿಸಲಾಯಿತಾದರೂ ಅದು ಫಲ ನೀಡಲಿಲ್ಲ. ತಮ್ಮ ಬೇಡಿಕೆ ಈಡೇರಿಸಿದ ಬಳಿಕವೇ ಕಸ ವಿಲೇವಾರಿ ನಡೆಸಿ ಎಂದು ಪಟ್ಟು ಹಿಡಿದರು.

ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್‌ ಡಿ’ ಸೋಜಾ, ಸಿಐ ಟಿ.ಡಿ.ನಾಗರಾಜ್‌, ಗ್ರಾಮಾಂತರ ಎಸ್‌ಐ ಪ್ರಸನ್ನ ಅವರು ಗ್ರಾಮಸ್ಥರನ್ನು ಮನವೊಲಿಸಲು ಸಾಕಷ್ಟು ಪ್ರಯತ್ನಪಟ್ಟರು. ಪುರಸಭೆಯ ಪರಿಸರ ಎಂಜಿನಿಯರ್‌ ಯಾಸ್ಮಿನ್‌ ಅವರು ಕೂಡ ಸ್ಥಳದಲ್ಲಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದು ಕೊನೆಗೆ ಪೊಲೀಸರು ಗ್ರಾ.ಪಂ.ಅಧ್ಯಕ್ಷ ಮಹಮ್ಮದ್‌ ನಾಸೀರ್‌ ಸಹಿತ ಸುಮಾರು 30ಕ್ಕೂ ಆಧಿಕ ಮಂದಿಯನ್ನು ವಶಕ್ಕೆ ಪಡೆದರು. ಉಳಿದವರನ್ನು ಸ್ಥಳದಿಂದ ಚದುರಿಸಿ, ತ್ಯಾಜ್ಯವನ್ನು ವಿಲೇವಾರಿ ನಡೆಸಲಾಯಿತು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.