ಕೈಗೂಡಿಲ್ಲ ಮರಕ್ಕಡ-ಕಟ್ಟತ್ತಾರು ಕಿಂಡಿ ಅಣೆಕಟ್ಟು ಯೋಜನೆ

Team Udayavani, Jan 15, 2019, 4:56 AM IST

15-january-3.jpg

ಕಾಣಿಯೂರು: ಕಾಣಿಯೂರು ಗ್ರಾ.ಪಂ.ವ್ಯಾಪ್ತಿಯ ಕಾೖಮಣ ಗ್ರಾಮದ ಮರಕ್ಕಡ-ಕಟ್ಟತ್ತಾರು ಎನ್ನುವಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಬೇಕೆನ್ನುವ ಈ ಭಾಗದ ಜನತೆಯ ಬೇಡಿಕೆ ಇನ್ನೂ ಈಡೇರಿಲ್ಲ.

ಈ ಭಾಗದ ಜನತೆ ನಿರಂತರವಾಗಿ ಕಳೆದ 28 ವರ್ಷದಿಂದ ಮನವಿ ಸಲ್ಲಿಸುತ್ತಲೇ ಬರುತ್ತಿದ್ದಾರೆ. ಆದರೆ ಫ‌ಲಿತಾಂಶ ಶೂನ್ಯ. ಈ ಭಾಗದಲ್ಲಿ ಅಣೆಕಟ್ಟು ನಿರ್ಮಾಣವಾದರೆ ಇಲ್ಲಿನ ಕೃಷಿಕರಿಗೆ ತುಂಬಾ ಅನುಕೂಲವಾಗಲಿದೆ. ನೂರಾರು ಎಕ್ರೆ ಕೃಷಿ ಭೂಮಿ ಹಚ್ಚ ಹಸುರಾಗಿ ಕಂಗೊಳಿಸಲಿದೆ.

ಈ ಹಿಂದೆ ಇಲ್ಲಿ ಜೈನರಸರ ಆಳ್ವಿಕೆ ಸಂದರ್ಭದಲ್ಲಿ ಅವರೇ ಅಣೆಕಟ್ಟು ನಿರ್ಮಿಸಿ ಕೃಷಿಕರಿಗೆ ನೆರವಾಗಿದ್ದರು,ಬಳಿಕ ಭೂ ಮಸೂದೆಯಿಂದ ಅವರ ಆಡಳಿತ ನಿಂತ ಮೇಲೆ ಈ ಅಣೆಕಟ್ಟು ಸರಿಯಾದ ನಿರ್ವಹಣೆ ಇಲ್ಲದೆ ನೀರಿನಲ್ಲಿ ಕೊಚ್ಚಿಹೋಗಿತ್ತು. ಅದರ ಕುರುಹುಗಳಿವೆ.

ನಿರಂತರ ಮನವಿ ಸಲ್ಲಿಕೆ
1991 ಡಿ. 15ರಂದು ಊರಿನವರೇ ಸೇರಿ ಬೆಳಂದೂರು ಮಂಡಲ ಪಂಚಾಯತ್‌ನ ಅಧ್ಯಕ್ಷರ ಮೂಲಕ ಸಂಬಂಧಪಟ್ಟವರಿಗೆ ಮೊದಲ ಮನವಿ ಸಲ್ಲಿಸಿದ್ದರು. ಆ ಬಳಿಕ ಪ್ರತೀ ಬಾರಿಯೂ ಶಾಸಕರಿಗೆ, ಸಂಸದರಿಗೆ ನಿರಂತರ ಮನವಿ ನೀಡಲಾಗುತ್ತಿದ್ದರೂ, ಪ್ರಯೋಜನವಾಗಿಲ್ಲ ಎನ್ನುತ್ತಾರೆ ಈ ಭಾಗದ ಜನತೆ.

ಪ್ರಧಾನಿ ಮೋದಿಗೆ ಮೊರೆ
ಮನವಿ ನೀಡಿ ಯಾವುದೇ ಬೆಳವಣಿಗೆಯಾಗದ್ದನ್ನು ಮನಗಂಡು 2017 ಫೆ. 26ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದ್ದರು. ಈ ಪರಿಣಾಮ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಯವರು ದ.ಕ.ಜಿ.ಪಂ.ಗೆ ಅನುದಾನ ಬಿಡುಗಡೆ ಮಾಡುವಂತೆ ನಿರ್ದೇಶನವನ್ನು ನೀಡಿದ್ದರು.

ಶಾಸಕರಿಗೆ ವಿವರ ಸಲ್ಲಿಕೆ
ಈ ಎಲ್ಲ ಬೆಳವಣಿಗೆಗಳ ಸವಿವರಗಳನ್ನು ಸುಳ್ಯ ಶಾಸಕರಿಗೆ 2017ರಂದೇ ಸಲ್ಲಿಸಿದ್ದು, ಈವರೆಗೂ ಯಾವುದೇ ಸ್ಪಂದನೆ ಇಲ್ಲ ಎನ್ನುತ್ತಾರೆ ಈ ಭಾಗದವರು. ಶಾಸಕರು ಪ್ರಯತ್ನ ಮಾಡಿದರೆ ಇಲ್ಲಿನ ಜನತೆಯ ಬಹುದಿನಗಳ ಬೇಡಿಕೆ ಈಡೇರುವಂತಾಗುತ್ತದೆ ಎನ್ನುತ್ತಾರೆ ಇಲ್ಲಿನ ಕೃಷಿಕರು.

ಪ್ರಸ್ತಾವನೆ ಸಲ್ಲಿಕೆ
ಮರಕ್ಕಡ-ಕಟ್ಟತ್ತಾರು ಕಿಂಡಿ ಅಣೆಕಟ್ಟು ನಿರ್ಮಾಣ ಕುರಿತ ಕಡತಗಳೊಂದಿಗೆ ನೀರಾವರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಂದ ಅನುಮೋದನೆಗೊಂಡು ಅನುದಾನ ಬಿಡುಗಡೆಯಾಗಬೇಕಿದೆ. ಈ ಕುರಿತು ಪ್ರಯತ್ನ ಮಾಡಲಾಗುತ್ತಿದೆ.
-ಎಸ್‌. ಅಂಗಾರ, ಶಾಸಕರು, ಸುಳ್ಯ

ಆಶಾಭಾವನೆ ನಮ್ಮದು
ಕಳೆದ 28 ವರ್ಷಗಳಿಂದ ನಿರಂತರವಾಗಿ ವಿವಿಧ ಸ್ತರಗಳ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಲೇ ಬಂದಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಬೇಡಿಕೆ ಈಡೇರಬಹುದು ಎನ್ನುವ ಆಶಾಭಾವನೆ ನಮ್ಮದು. 
-ಸೀತಾರಾಮ ಗೌಡ ಮುಂಡಾಳ,

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.