ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ

"ಭಾಷೆ ಸಾಹಿತ್ಯದ ಮೂಲಕ ಸಾಕಾರಗೊಳ್ಳುತ್ತದೆ'

Team Udayavani, Dec 11, 2022, 4:45 AM IST

ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ

ಅರಂತೋಡು: ಭಾಷೆಯು ಸಾಹಿತ್ಯದ ಮೂಲಕ ಸಾಕಾರಗೊಳ್ಳುತ್ತದೆ ಎಂದು ಹಿರಿಯ ವಿಮರ್ಶಕ ಎಸ್‌.ಆರ್‌. ವಿಜಯಶಂಕರ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸುಳ್ಯ ಘಟಕ, ಸಮ್ಮೇಳನ ಸ್ವಾಗತ ಸಮಿತಿಯ ಆಶ್ರಯದಲ್ಲಿ ಸಂಪಾಜೆ ಗ್ರಾಮದ ಗೂನಡ್ಕ ಬೀಜದಕಟ್ಟೆಯ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯವು ಸಮಾನತೆ, ಸ್ವಾತಂತ್ರ್ಯದ ಮೌಲ್ಯ ಮತ್ತು ಮಹತ್ವವನ್ನು ಪ್ರತಿಪಾದಿಸಿದ್ದು, ಸಾಹಿತ್ಯ ನಮಗೆ ಸಮಾನತೆ ಮತ್ತು ಸ್ವಾತಂತ್ರ್ಯದ ಮಹತ್ವವನ್ನು ಕಲಿಸಿದೆ ಎಂದರು.
ಭಾಷೆ ಎಲ್ಲದಕ್ಕೂ ಮೂಲ. ಆದುದರಿಂದ ಭಾಷೆ, ಸಾಹಿತ್ಯ, ಸಂಸ್ಕೃತಿಯ ಮಧ್ಯೆ ಅವಿನಾಭಾವ ಸಂಬಂಧ ಇದೆ. ಭಾಷೆಯು ಔಚಿತ್ಯ ಮತ್ತು ಔನತ್ಯವನ್ನು ಸಾಧಿಸಲು ಸಾಹಿತ್ಯ ಮತ್ತು ಸಂಸ್ಕೃತಿ ಸಹಾಯಕ. ಸಾಹಿತ್ಯ ಯಾವುದು ಬೇಕು, ಬೇಡ ಎಂಬುದನ್ನು ಹೇಳುತ್ತದೆ ಎಂದು ಅವರು ಹೇಳಿದರು.

ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಶಿಕ್ಷಕ ಕೆ.ಆರ್‌. ಗಂಗಾಧರ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು.

ಮಡಿಕೇರಿ ಆಕಾಶವಾಣಿಯ ಸುಬ್ರಾಯ ಸಂಪಾಜೆ ಹೊಸ ಕೃತಿಗಳನ್ನು ಬಿಡುಗಡೆ ಮಾಡಿದರು. ರಾಷ್ಟ್ರ ಧ್ವಜಾರೋಹಣವನ್ನು ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಜಿ.ಕೆ. ಹಮೀದ್‌, ಪರಿಷತ್‌ನ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್‌ ಮತ್ತು ಕನ್ನಡ ಧ್ವಜಾರೋಹಣವನ್ನು ಕಸಾಪ ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲ್‌ ನೆರವೇರಿಸಿದರು. ವಸ್ತು ಪ್ರದರ್ಶನವನ್ನು ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಪುಸ್ತಕ ಪ್ರದರ್ಶನವನ್ನು ತಹಶೀಲ್ದಾರ್‌ ಅನಿತಾಲಕ್ಷ್ಮೀ ಉದ್ಘಾಟಿಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ರಾಮ್‌ ಸುಳ್ಳಿ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಸ್ಮರಣಸಂಚಿಕೆ ಸಂಪಾದಕ ಸಂಜೀವ ಕುದ್ಪಾಜೆ ಸ್ಮರಣ ಸಂಚಿಕೆಯ ಬಗ್ಗೆ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂ.ಪಿ. ಶ್ರೀನಾಥ್‌ ಸಮ್ಮೇಳನದ ಬಗ್ಗೆ ಆಶಯನುಡಿ ವ್ಯಕ್ತಪಡಿಸಿದರು.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಚಂದ್ರಶೇಖರ ಪೇರಾಲ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಪೂವಪ್ಪ ಕಣಿಯೂರು ನಿಕಟಪೂರ್ವ ಅಧ್ಯಕ್ಷರ ನೆಲೆಯಲ್ಲಿ ಮಾತನಾಡಿದರು. ಸಮ್ಮೇಳನ ಸಂಘಟನ ಸಮಿತಿಯ ಪೋಷಕಾಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿ ದಾಮೋದರ ಮಾಸ್ತರ್‌, ಸಾಹಿತ್ಯ ಪರಿಷತ್‌ ಕೋಶಾಧಿಕಾರಿ ದಯಾನಂದ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್‌ ಬೀಜದಕಟ್ಟೆ ಸಾcಗತಿಸಿ, ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಬೇಬಿ ವಿದ್ಯಾ ನಿರೂಪಿಸಿ ದರು. ಚಿದಾನಂದ ಯು.ಎಸ್‌. ನಿರ್ವಹಿಸಿದರು. ಅರಂತೋಡು ನೆಹರು ಸ್ಮಾರಕ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆ, ರೈತಗೀತೆ ಹಾಡಿದರು.

ಕನ್ನಡ ಉಳಿಸಿ ಬೆಳೆಸುವ ಕೆಲಸ ಮಾಡಬೇಕು
ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್‌. ಅಂಗಾರ ಅವರು ಹಿಂಗಾರ ಅರಳಿಸುವ ಮೂಲಕ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ, ಕನ್ನಡ ಉಳಿಸಿ ಬೆಳೆಸುವ ಕೆಲಸ ಮಾಡಬೇಕು. ಅದಕ್ಕೆ ಸಾಹಿತ್ಯ ಸಮ್ಮೇಳನಗಳು ಪೂರಕವಾಗಿವೆ. ನಮ್ಮಲ್ಲಿ ಕನ್ನಡಾಭಿಮಾನ ಹೆಚ್ಚಬೇಕು. ನಮ್ಮ ನಾಡು, ನುಡಿ, ಧಾರ್ಮಿಕ ಸಂಸ್ಕೃತಿಯನ್ನು ಉಳಿಸುವ ಕೆಲಸ ನಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ಸರಕಾರ ಗಮನ ಹರಿಸುತ್ತಿದೆ ಎಂದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.