ಕಾಮತ್‌ ಕ್ಷೇತ್ರ ಕಾಳಜಿಗೆ ಮಹೇಂದ್ರ ಕುಮಾರ್‌ ಸಿಂಗ್‌ ಮೆಚ್ಚುಗೆ


Team Udayavani, May 5, 2018, 9:00 AM IST

Vedavyas-Kamath-4-5.jpg

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್‌ ಅವರಿಗೆ ತಮ್ಮ ಕ್ಷೇತ್ರದ ಬಗ್ಗೆ ಇರುವ ಕಾಳಜಿ ಹಾಗೂ ನಗರದ ಅಭಿವೃದ್ಧಿ ಬಗ್ಗೆ ಇರುವ ಕನಸುಗಳ ಕುರಿತಂತೆ ಉತ್ತರ ಪ್ರದೇಶದ ಸಚಿವ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಡಾ| ಮಹೇಂದ್ರ ಕುಮಾರ್‌ ಸಿಂಗ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರದಲ್ಲಿ ವೇದವ್ಯಾಸ್‌ ಕಾಮತ್‌ ಪರ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರನ್ನು ಸುಂದರ ಹಾಗೂ ಅಭಿವೃದ್ಧಿ ನಗರವನ್ನಾಗಿಸಲು ವೇದವ್ಯಾಸ ಕಾಮತ್‌ ಅವರಿಂದ ಸಾಧ್ಯ. ನಗರವನ್ನು ಅಭಿವೃದ್ಧಿಪಡಿಸುವ ಬಗೆಗೆ ಅವರ ಚಿಂತನೆಗಳು ಗಮನಿಸಿದಾಗ ನಮಗೆ ಹೆಮ್ಮೆಯಾಗುತ್ತದೆ ಎಂದರು.

ಭವ್ಯ ನಗರ ರೂಪಿಸುವ ಕನಸು
ಈ ಸಂದರ್ಭದಲ್ಲಿ ಮಾತನಾಡಿದ ವೇದವ್ಯಾಸ ಕಾಮತ್‌, ‘ಎಲ್ಲರ ಜತೆ ಸೇರಿ, ಚರ್ಚಿಸಿ ಈ ನಗರವನ್ನು ಭವ್ಯ ನಗರಿಯನ್ನಾಗಿ ರೂಪಿಸಬೇಕೆಂಬುದು ನನ್ನ ಆಶಯ. ನಿಮ್ಮೆಲ್ಲರ ಕಷ್ಟ ಸುಖಗಳಿಗೆ ಸ್ಪಂದಿಸಲೆಂದೇ ನಾನು ಈ ಬಾರಿ ಚುನಾವಣೆಗೆ ನಿಂತಿದ್ದೇನೆ. ಈಗ ಶಾಸಕರಾಗಿದ್ದವರು ಏನು ಮಾಡಿದ್ದಾರೆ ಎನ್ನುವುದು ನಿಮಗಷ್ಟೇ ಅಲ್ಲ, ಇಡೀ ಕ್ಷೇತ್ರದ ಜನರಿಗೆ ತಿಳಿದಿದೆ. ಮಂಗಳೂರು ನಗರ ದೇಶದ ಅತ್ಯುತ್ತಮ ನಗರಗಳಲ್ಲಿ ಒಂದಾಗಬೇಕೆಂಬುದು ನನ್ನ ಕನಸು. ಕೇಂದ್ರ ಸರಕಾರ ಈಗಾಗಲೇ ಸ್ಮಾರ್ಟ್‌ ಸಿಟಿ ಎಂದು ಘೋಷಣೆ ಮಾಡಿ, ಹಣಕಾಸು ನೆರವನ್ನು ನೀಡಿದ್ದರೂ ಇದುವರೆಗೆ ಒಂದೇ ಒಂದು ಕೆಲಸ ಆರಂಭಿಸಿಲ್ಲ. ಶಾಸಕರಾಗಿ ಅತ್ತ ರಾಜ್ಯ ಸರಕಾರದಿಂದಲೂ ಹಣ ತರಲಿಲ್ಲ. ಕೇಂದ್ರ ಸರಕಾರದಿಂದ ಬಂದ ಹಣವನ್ನು ಸದ್ಬಳಕೆ ಮಾಡಿಕೊಳ್ಳಲಿಲ್ಲ. ಹೀಗಾಗಿ, ರಾಜ್ಯ ಕಾಂಗ್ರೆಸ್‌ ಸರಕಾರದ ದುರಾಡಳಿತದ ವಿರುದ್ಧ ಬೇಸತ್ತಿರುವ ನಾಡಿನ ಜನರು ಈ ಬಾರಿ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಬೇಕೆಂದು’ ಅವರು ಜನತೆಯಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

ಬಿಸಿಯೂಟ ದತ್ತಾಂಶಕಾರರ 20 ತಿಂಗಳ ಹಸಿವಿಗಿಲ್ಲ ಪರಿಹಾರ!

ಬಿಸಿಯೂಟ ದತ್ತಾಂಶಕಾರರ 20 ತಿಂಗಳ ಹಸಿವಿಗಿಲ್ಲ ಪರಿಹಾರ!

ಸುಲಭವಲ್ಲ ತಿಮ್ಮಪ್ಪನ ದರ್ಶನ ಭಾಗ್ಯ

ಸುಲಭವಲ್ಲ ತಿಮ್ಮಪ್ಪನ ದರ್ಶನ ಭಾಗ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

ಇ – ಶ್ರಮ ಪೋರ್ಟಲ್‌: ಹೆಸರು ನೋಂದಣಿಗೆ ಸೂಚನೆ

ಇ – ಶ್ರಮ ಪೋರ್ಟಲ್‌: ಹೆಸರು ನೋಂದಣಿಗೆ ಸೂಚನೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್‌ ದಿನ ಆಚರಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್‌ ದಿನ ಆಚರಣೆ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.