“ವಾಹನದ ಮೂಲ ದಾಖಲೆ ಜತೆಗಿರಿಸಿಕೊಳ್ಳಿ’

ಪೊಲೀಸ್‌ ಫೋನ್‌ ಇನ್‌ ಕಾರ್ಯಕ್ರಮ

Team Udayavani, Nov 30, 2019, 4:20 AM IST

zx-15

ಮಹಾನಗರ: ದೇಶಾದ್ಯಂತ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಜಾರಿಗೆ ಬಂದಿದ್ದು, ಪ್ರತಿಯೊಬ್ಬ ವಾಹನ ಸವಾರರು ವಾಹನದ ಮೂಲ ದಾಖಲೆಯನ್ನೇ ಜತೆಗೆ ಇರಿಸಿಕೊಳ್ಳ ಬೇಕು. ಯಾವುದೇ ಕಾರಣಕ್ಕೂ ನಕಲಿ ಪ್ರತಿಗಳನ್ನು ತಪಾಸಣೆ ವೇಳೆ ಪರಿಗಣಿಸಲಾಗುವುದಿಲ್ಲ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ| ಹರ್ಷಾ ಪಿ.ಎಸ್‌. ಅವರು ಹೇಳಿದರು.

ಶುಕ್ರವಾರ ತಮ್ಮ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ನಾಗರಿಕರೊಬ್ಬರ ಪ್ರಶ್ನೆಗೆ ಅವರು ಉತ್ತರಿಸಿ ಮಾತನಾಡಿದರು. ವಾಹನ ತಪಾಸಣೆಯ ಸಂದರ್ಭ ಟ್ರಾಫಿಕ್‌ ಪೊಲೀಸರು, ಅಧಿಕಾರಿಗಳು ವಾಹನದ ಮೂಲ ದಾಖಲೆಗಳನ್ನೇ ಕೇಳುತ್ತಿದ್ದಾರೆ. ನಕಲಿ ಪ್ರತಿಗಳನ್ನು ನೀಡಿ ದರೂ ಪರಿಗಣಿಸದೆ ದಂಡ ವಿಧಿಸುತ್ತಾರೆ. ಇದರಿಂದ ವಾಹನ ಸವಾರರಿಗೆ ತೊಂದರೆ ಯಾಗುತ್ತಿದ್ದು, ಮೂಲ ದಾಖಲೆ ಹಾಜರು ಪಡಿಸಲು ಸಮಯ ನೀಡಬೇಕು ಎಂದು ನಗರದ ನಾಗರಿಕರೊಬ್ಬರು ಕರೆ ಮಾಡಿ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಪೊಲೀಸ್‌ ಆಯು ಕ್ತರು, ಮೋಟಾರ ವಾಹನ ತಿದ್ದುಪಡಿ ಕಾಯ್ದೆ ಪ್ರಕಾರ ತಪಾಸಣೆ ವೇಳೆ ಮೂಲ ದಾಖಲೆಯನ್ನೇ ನೀಡಬೇಕು. ನಕಲಿ ಪ್ರತಿಗಳನ್ನು ಪರಿಗಣಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಇದನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು ಎಂದರು.

“ಮೈ ಬೀಟ್‌ ಮೈ ಪ್ರೈಡ್‌’ ಗ್ರೂಪ್‌ಗ್ಳಲ್ಲಿ ಸಾಮಾನ್ಯ ಸಂದೇಶ ಹರಿದಾಡುವ ಬದಲು ಜನರಲ್ಲಿ ಜಾಗೃತಿ ಮೂಡಿಸುವ‌ ಸಂದೇಶ ಹಾಕಬೇಕು. ಶಾಂತಿ ಕದಡುವ ಸಂದೇಶ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಸಾರ್ವಜನಿಕರೊಬ್ಬರ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು ನಗರದಲ್ಲಿ “ಮೈ ಬೀಟ್‌ ಮೈ ಪ್ರೈಡ್‌’ ಗ್ರೂಪ್‌ನಲ್ಲಿ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪ್ರಸ್ತುತ 756 ಗ್ರೂಪ್‌ಗ್ಳಿದ್ದು, ಈಗಾಗಲೇ 48,000 ಮಂದಿ ಸದಸ್ಯರಾಗಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀಟ್‌ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.

ಕದ್ರಿಯ ನಾಗರಿಕರೊಬ್ಬರು ಕರೆ ಮಾಡಿ ತೇಜಸ್ವಿನಿ ಆಸ್ಪತ್ರೆ- ಕದ್ರಿ ರಸ್ತೆಯ ಎರಡು ಕಡೆಗಳಲ್ಲಿ ವಾಹನ ಪಾರ್ಕಿಂಗ್‌ ಮಾಡುತ್ತಿದ್ದಾರೆ. ಇದರಿಂದ ತೊಂದರೆಯಾಗುತ್ತಿದೆ ಎಂದರು. ಇದಕ್ಕೆ ಉತ್ತರಿಸಿದ ಆಯುಕ್ತರು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸ್ಟೇಟ್‌ಬ್ಯಾಂಕ್‌ನಿಂದ ಬಿಕರ್ನಕಟ್ಟೆ ಮುಖೇನ ಪಡೀಲ್‌ಗೆ ಹೋಗುವ ಬಸ್‌ಗಳು ಸಮಯ ಪರಿಪಾಲನೆ ಮಾಡುತ್ತಿಲ್ಲ. ರಾತ್ರಿ 8.30ರ ಬಳಿಕ ಬಸ್‌ ಸಂಚಾರವೇ ಇಲ್ಲ ಎಂದು ಪಡೀಲ್‌ ನಿವಾಸಿಯೊಬ್ಬರು ದೂರಿದರು. ಈ ಬಗ್ಗೆ ಬಸ್‌ ಮಾಲಕರ ಸಂಘದ ಗಮನಕ್ಕೆ ತರಲಾಗುಲುದು ಎಂದು ಆಯುಕ್ತರು ವಿವರಿಸಿದರು.

ಹಿರಿಯ ನಾಗರಿಕರಿಗೆ ತೊಂದರೆ
ನಗರದಲ್ಲಿ ಬಸ್‌ಗಳ ಮೆಟ್ಟಿಲುಗಳು ಎತ್ತರವಾಗಿದ್ದು ಇದರಿಂದ ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ದೂರು ನೀಡಿದರು. ಇದಕ್ಕೆ ಬಸ್‌ ಕೆನರಾ ಬಸ್‌ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌ ಉತ್ತರಿಸಿ ಸಾರಿಗೆ ನಿಯಮ ಪ್ರಕಾರವೇ ಬಸ್‌ಗಳ ಮೆಟ್ಟಿಲು ನಿರ್ಮಿಸಲಾಗುತ್ತಿದೆ. ಮೆಟ್ಟಿಲುಗಳು ತೀರಾ ಕೆಳ ಮಟ್ಟದಲ್ಲಿ ಇದ್ದರೆ ನಗರದ ರಸ್ತೆಗಳಲ್ಲಿ ಕೆಲವು ಬಾರಿ ಹಂಪ್‌ಗ್ಳಿಗೆ ತಗುಲುತ್ತಿವೆ ಎಂದರು.

ನಗರದ ಹಲವೆಡೆ ಸರ್ವಿಸ್‌ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್‌ ಮಾಡುವುದರಿಂದ ತೊಂದರೆಯಾಗುತ್ತಿದೆ ಎಂದು ನಂತೂ ರಿನ ವ್ಯಕ್ತಿಯೊಬ್ಬರು ದೂರಿದರು. ಇದಕ್ಕೆ ಉತ್ತರಿಸಿದ ಆಯುಕ್ತರು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಲಾ ಗುವುದು ಎಂದರು.

ಕೊಟ್ಟಾರ ಚೌಕಿಯ ನಿವಾಸಿ ಕರೆ ಮಾಡಿ, ಫ್ಲೈಓವರ್‌ ಕೆಳಗಡೆ ವಾಹನ ಪಾರ್ಕಿಂಗ್‌ಗೆ ಅವಕಾಶ ನೀಡುತ್ತಿಲ್ಲ ಎಂದರು. ಕೊಟ್ಟಾರ ಫ್ಲೈಓವರ್‌ ಕೆಳಗಡೆ ರಾಮಕೃಷ್ಣ ಮಿಷನ್‌ ವತಿಯಿಂದ ಇಂಟರ್‌ಲಾಕ್‌ ಹಾಕಿ ಸೌಂದರೀಕರಣ ಮಾಡಲಾಗಿದ್ದು ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಿಕೊಳ್ಳ ಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿ ವ್ಯವಸ್ಥೆ ಮಾಡಲಾಗುವುದು ಎಂದು ಆಯುಕ್ತರು ತಿಳಿಸಿದರು.

ಇದು 126ನೇ ಫೋನ್‌ ಇನ್‌ ಕಾರ್ಯ ಕ್ರಮ ಆಗಿದ್ದು, ಒಟ್ಟು 14 ಕರೆಗಳು ಬಂದವು.
ಡಿಸಿಪಿಗಳಾದ ಅರುಣಾಂಶುಗಿರಿ, ಲಕ್ಷ್ಮೀಗಣೇಶ್‌, ಎಸಿಪಿ ಮಂಜುನಾಥ ಶೆಟ್ಟಿ, ಟ್ರಾಫಿಕ್‌ ಇನ್‌ಸ್ಪೆಕ್ಟರ್‌ಗಳಾದ ಅಮಾನುಲ್ಲಾ, ಗೋಪಾಲಕೃಷ್ಣ ಭಟ್‌, ಸಬ್‌ ಇನ್‌ಸ್ಪೆಕ್ಟರ್‌ ಸುಕುಮಾರನ್‌, ಸಿಸಿಆರ್‌ಬಿ ಇನ್‌ಸ್ಪೆಕ್ಟರ್‌ ಭಜಂತ್ರಿ, ಎಎಸ್‌ಐ ಬಾಲಕೃಷ್ಣ, ಹೆಡ್‌ಕಾನ್‌ಸ್ಟೆಬಲ್‌ ಪುರುಷೋತ್ತಮ ಉಪಸ್ಥಿತರಿದ್ದರು.

ಜಂಟಿ ಕಾರ್ಯಾಚರಣೆಗೆ ಸಿದ್ಧತೆ
ನಗರದ ಹಲವೆಡೆ ಬೀದಿ ವ್ಯಾಪಾರಿಗಳು ಫುಟ್‌ಪಾತ್‌, ರಸ್ತೆ ಅತಿಕ್ರಮಿಸಿ ವ್ಯಾಪಾರ ಮಾಡುತ್ತಿರುವ ಬಗ್ಗೆ ಫೋನ್‌ ಇನ್‌ ಕಾರ್ಯಕ್ರಮಕ್ಕೆ ದೂರುಗಳು ಬಂದಿದ್ದು, ಇದನ್ನು ಮನಪಾ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಆ ಬಳಿಕ ಜಂಟಿ ಕಾರ್ಯಾಚರಣೆ ನಡೆಸಿ ಅತಿಕ್ರಮಣ ತೆರವು ಮಾಡಲಾಗುವುದು. ಇದಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳ ಸಹಕಾರ ಮುಖ್ಯ ಎಂದು ಆಯುಕ್ತರು ತಿಳಿಸಿದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.