‘ಅವಕಾಶಗಳನ್ನು ಬಳಸಿ, ಭವಿಷ್ಯ ರೂಪಿಸಿಕೊಳ್ಳಿ’


Team Udayavani, Oct 15, 2018, 11:58 AM IST

15-october-7.gif

ಮೂಡಬಿದಿರೆ: ವಿದ್ಯಾರ್ಥಿಗಳು ಪಠ್ಯಕ್ಕೆ ಮಾತ್ರ ಸೀಮಿತರಾಗಬಾರದು. ಸಾಹಿತ್ಯ, ಕಲೆ, ಕ್ರೀಡಾರಂಗಗಳಲ್ಲೂ ಸಕ್ರಿಯರಾಗಿ ಅತ್ಯುತ್ತಮ ಬದುಕು ರೂಪಿಸಬೇಕು. ಇಂಥ ವಾತಾವರಣ ಆಳ್ವಾಸ್‌ನಲ್ಲಿದೆ. ಕೇರಳದಿಂದ ಬಂದ ವಿದ್ಯಾರ್ಥಿಗಳು ಇಲ್ಲಿ ಸಿಗುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕಣ್ಣೂರು ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಎನ್‌.ಕೆ. ಅಬ್ದುಲ್‌ ಖಾದರ್‌ ತಿಳಿಸಿದರು. ಆಳ್ವಾಸ್‌ ಕಾಲೇಜಿನ ನುಡಿಸಿರಿ ವೇದಿಕೆಯಲ್ಲಿ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಕೇರಳ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ ‘ಆಳ್ವಾಸ್‌ ಕೇರಳೀಯಂ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಇರುವುದು ಒಂದೇ ಸೂರ್ಯ, ಒಂದೇ ಗಾಳಿ, ಒಂದೇ ಭೂಮಿ. ಜಾತಿ, ಧರ್ಮ ಮಾತ್ರ ಬೇರೆ. ಆದರೆ ಈ ಭಾರಿ ಕೇರಳದಲ್ಲಿ ಜಲಪ್ರಳಯ ಸಂಭವಿಸಿದ ದಿನಗಳಲ್ಲಿ ಜಾತಿ, ಧರ್ಮಗಳ ನಡುವಿನ ಅಂತರವೇ ಇಲ್ಲದಾದಂತಾಗಿದೆ. ಮುಸ್ಲಿಮರ ಹಬ್ಬವನ್ನು ಹಿಂದೂ ದೇವಸ್ಥಾನಗಳಲ್ಲಿ ಆಚರಿಸಿದ್ದಾರೆ. ಕಷ್ಟ ಬಂದಾಗ ಜಾತಿ, ಧರ್ಮ, ಮತ ಬೇಧ ಬಿಟ್ಟು ಸಮಾಜ ಸೇವೆಯಲ್ಲಿ ತೊಡಗಿದ್ದನ್ನು ಕೇರಳದಲ್ಲಿ ಕಂಡಿದ್ದೇವೆ. ಪ್ರಕೃತಿ ವಿಕೋಪಕ್ಕೆ ಸಿಲುಕಿದ ಕೇರಳವನ್ನು ಮತ್ತೆ ದೇಶದ ರಮಣೀಯ ಸ್ಥಳವನ್ನಾಗಿ ಮಾಡಬೇಕಾಗಿದೆ ಎಂದು ಹೇಳಿದರು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್‌ ಆಳ್ವ, ಟ್ರಸ್ಟಿ ವಿವೇಕ್‌ ಆಳ್ವ ಮತ್ತು$ಆಳ್ವಾಸ್‌ ವಿದ್ಯಾ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ದೀಪ್ತಿ ಬಾಬು ಸ್ವಾಗತಿಸಿ, ಆಶ್ವತಿ ಜೈನ್‌ ನಿರೂಪಿಸಿದರು. ಊಟೋಪಚಾರದಲ್ಲಿ ಕೇರಳದ ವಿಭಿನ್ನ ಸುಮಾರು 15 ಬಗೆಯ ಖಾದ್ಯಗಳಿದ್ದವು.

ಮೆರವಣಿಗೆ
ಚೆಂಡೆ ಮತ್ತು ಕೇರಳದ ಸಂಪ್ರದಾಯ ಉಡುಗೆ ತೊಟ್ಟು ಮೆರವಣಿಗೆ ಮೂಲಕ ಅತಿಥಿಗಳನ್ನು ಸ್ವಾಗತಿಸಿದರು. ಕೇರಳ ರಾಜ್ಯವನ್ನು ಆಳುತ್ತಿದ್ದ ಮಾವೇಲಿರಾಜನ ವೇಷಧಾರಿಯಾಗಿ ಮೆರವಣಿಗೆಗೆ ಮೆರುಗನ್ನು ತಂದು ಕೊಟ್ಟಿತ್ತು. ಕೇರಳದ ಸಾಂಸ್ಕೃತಿಕ ನೃತ್ಯಗಳನ್ನು ಪ್ರದರ್ಶಿಸಲಾಯಿತು. 

ಟಾಪ್ ನ್ಯೂಸ್

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.