ಕಿನ್ನಿಗೋಳಿ: ಬೈಕಿಗೆ ಬಸ್ಸು ಢಿಕ್ಕಿ, ಶಾಲಾ ಬಾಲಕ ಸಾವು

Team Udayavani, Jan 3, 2023, 1:36 AM IST

ಕಿನ್ನಿಗೋಳಿ: ಬೈಕಿಗೆ ಬಸ್ಸು ಢಿಕ್ಕಿ, ಶಾಲಾ ಬಾಲಕ ಸಾವು

ಕಿನ್ನಿಗೋಳಿ : ದ್ವಿಚಕ್ರ ವಾಹನಕ್ಕೆ ಬಸ್ಸು ಢಿಕ್ಕಿ ಹೊಡೆದು ದ್ವಿಚಕ್ರ ವಾಹನದ ಹಿಂಬದಿ ಸವಾರ ಬಾಲಕ ಮೃತಪಟ್ಟ ಘಟನೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ.

ಉಲ್ಲಂಜೆ ಶಾಲಾ ಬಳಿಯ ನಿವಾಸಿ ಚರಣ್‌ (14) ಮೃತ ಬಾಲಕ. ಕಟೀಲು ಶಾಲೆಯಲ್ಲಿ 9ನೇ ತರಗತಿ ಕಲಿಯುತ್ತಿದ್ದ ಆತ ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಟೀಲು ಗ್ರಾಮಕರಣಿಕರ ಕಚೇರಿ ಬಳಿ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಅದರಲ್ಲಿ ಉಲ್ಲಂಜೆ ಕಡೆಗೆ ಸಂಚರಿಸುತ್ತಿರುವಾಗ ಉಲ್ಲಂಜೆ ಜುಮಾದಿ ಗುಡ್ಡೆಯ ಬಳಿ ಮುಂಭಾಗದಲ್ಲಿ ಕಿನ್ನಿಗೋಳಿಯಿಂದ ಕಟೀಲು ಕಡೆಗೆ ಬರುತ್ತಿದ್ದ ಬಸ್ಸು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿದೆ.

ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಕುಳಿತಿದ್ದ ಚರಣ್‌ ರಸ್ತೆಗೆ ಎಸೆಯಲ್ಪಟ್ಟು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾನೆ. ಸವಾರ ಎಡ ಬದಿ ಬದಿಗೆ ಎಸೆಯಲ್ಪಟ್ಟ ಕಾರಣ ಬದುಕುಳಿದಿದ್ದಾರೆ. ಇಲ್ಲಿ ಸುಮಾರು ಒಂದು ಗಂಟೆ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಬಾಲಕ ತಂದೆ, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾನೆ. ಮೃತ ಬಾಲಕನ ತಂದೆ ಗಣೇಶ್‌ ಕಿನ್ನಿಗೋಳಿಯ ಮಿಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಮೂಲ್ಕಿ ಸರಕಾರಿ ಅಸ್ಪತ್ರೆಯಲ್ಲಿ ಬಾಲಕನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಸ್ಪತ್ರೆಗೆ ಶಾಸಕ ಉಮಾನಾಥ ಕೋಟ್ಯಾನ್‌ ಮತ್ತಿತರರು ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.