ಮಂಗಳೂರು: ಸಪ್ತ ಸಾಧಕರಿಗೆ “ವಿಶ್ವಕೊಂಕಣಿ ಪುರಸ್ಕಾರ’ ಪ್ರದಾನ

Team Udayavani, Feb 10, 2023, 6:12 AM IST

ಮಂಗಳೂರು: ಸಪ್ತ ಸಾಧಕರಿಗೆ “ವಿಶ್ವಕೊಂಕಣಿ ಪುರಸ್ಕಾರ’ ಪ್ರದಾನ

ಮಂಗಳೂರು: ಕೊಂಕಣಿ ಸಾಹಿತ್ಯ, ಸಮಾಜ ಸೇವೆ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ 7 ಮಂದಿಗೆ ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ “ವಿಶ್ವ ಕೊಂಕಣಿ ಪುರಸ್ಕಾರ’ವನ್ನು ಗುರುವಾರ ಪ್ರದಾನಿಸಲಾಯಿತು. ಮಾನವ ಅಧಿಕಾರ, ಬಳಕೆದಾರರ ಹಕ್ಕುಗಳ ರಕ್ಷಣೆ, ಅರಿವು ಕ್ಷೇತ್ರಗಳಲ್ಲಿ ಸೇವೆಗೈದ ಡಾ| ರವೀಂದ್ರನಾಥ ಶಾನ್‌ಭಾಗ್‌ ಪುರಸ್ಕಾರವನ್ನು ಪ್ರದಾನಿಸಿ ಬಸ್ತಿ ವಾಮನ ಶೆಣೈ ಅವರ ಸ್ಮರಣೆ ಮಾಡಿದರು.

ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನವನ್ನು ಲೇಖಕ, ಅನುವಾದಕ ಮಾಣಿಕ್‌ ರಾವ್‌ ಗವಣೇಕರ್‌, ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರವನ್ನು ಗೋವಾದ ಲೇಖಕಿ ಡಾ| ಜಯಂತಿ ನಾಯ್ಕ ಹಾಗೂ ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರವನ್ನು ಮುಂಬಯಿಯ ಕವಿ, ಲೇಖಕ ವಲ್ಲಿ ಕ್ವಾಡ್ರಸ್‌ ಅವರಿಗೆ ಪ್ರದಾನಿಸಲಾಯಿತು.

ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರವನ್ನು (ಮಹಿಳಾ ವಿಭಾಗ) ರೋಗ ಪೀಡಿತರ ಶುಶ್ರೂಷೆಗಾಗಿ ಸುಶೇಗ್‌ ಜೀವಿತ್‌ ನ್ಯೂರೋ ಕೇರ್‌ ಸ್ಥಾಪಿಸಿರುವ ಡಾ| ಲವಿನಾ ಎಂ. ನೊರೊನ್ಹಾ ಅವರಿಗೆ ಹಾಗೂ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರವನ್ನು (ಪುರುಷರ ವಿಭಾಗ) ವೆನ್ಲಾಕ್ ಮತ್ತು ಲೇಡಿಗೋಷನ್‌ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ತುರ್ತು ನಿಗಾ ಕೇಂದ್ರ ಸ್ಥಾಪಿಸಲು ಕಾರಣರಾಗಿರುವ ಡಾ| ಬಿ. ಶಾಂತಾರಾಮ ಬಾಳಿಗಾ ಅವರಿಗೆ, ಡಾ| ಪಿ. ದಯಾನಂದ ಪೈ ವಿಶ್ವ ಕೊಂಕಣಿ ಪುರಸ್ಕಾರವನ್ನು ಗೋವಾದ ರಂಗಕರ್ಮಿ ಅಜಿತ್‌ ಗಣಪತ್‌ ಶೆನ್ವಿ ಕೇರ್ಕರ್‌ ಹಾಗೂ ಕೊಂಕಣಿ ಸಾಹಿತ್ಯ ಕೃತಿಗಳನ್ನು ಆಂಗ್ಲ ಭಾಷೆಗೆ ಅನುವಾದಿಸುವ ಕೋಲ್ಕತಾದ ವಿದ್ಯಾ ಪೈ ಅವರಿಗೆ ಪ್ರದಾನಿಸಲಾಯಿತು.

ಉದ್ಯಮಿ ಉಲ್ಲಾಸ ಕಾಮತ್‌ ಮಾತನಾಡಿ, ಗೋವಾದಲ್ಲಿ ವಿಶ್ವ ಕೊಂಕಣಿ ಸಮ್ಮೇಳನ ಸಹಿತ ಬಹು ಆಯಾಮದಲ್ಲಿ ವಿಶೇಷ ಪ್ರೋತ್ಸಾಹ ನೀಡುವ ಬಗ್ಗೆ ಗೋವಾ ಮುಖ್ಯಮಂತ್ರಿ ಉಲ್ಲೇಖೀಸಿರುವುದು ಕೊಂಕಣಿಗರ ಪಾಲಿಗೆ ಹೆಮ್ಮೆ ಎಂದರು. ಬಸ್ತಿ ವಾಮನ ಶೆಣೈ ನೇತೃತ್ವದಲ್ಲಿ ಪ್ರಾರಂಭವಾದ ಕೊಂಕಣಿ ಭಾಸ್‌ ಆನಿ ಸಂಸ್ಕೃತಿ ಪ್ರತಿಷ್ಠಾನವು ಭಾಷೆ, ಸಾಹಿತ್ಯ, ಸಂಸ್ಕೃತಿಯ ಸರ್ವಾಂಗೀಣ ಬೆಳವಣಿಗೆಯಲ್ಲಿ ನಿರತವಾಗಿರುವುದು ಶ್ಲಾಘನೀಯ ಎಂದರು.

ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಸ್ವಾಗತಿಸಿ, ಕಾರ್ಯದರ್ಶಿ ಗಿರಿಧರ್‌ ಕಾಮತ್‌ ವಂದಿಸಿದರು. ಸುಚಿತ್ರಾ ಎಸ್‌. ಶೆಣೈ ಪ್ರಶಸ್ತಿಪತ್ರ ವಾಚಿಸಿದರು. ಸ್ಮಿತಾ ಶೆಣೈ ನಿರೂಪಿಸಿದರು.

ಟಾಪ್ ನ್ಯೂಸ್

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.