ಕೆಪಿಸಿಸಿ ಮಹಿಳಾ ಅಧ್ಯಕ್ಷತೆ ದ.ಕ.ಕ್ಕೆ?

Team Udayavani, Oct 31, 2018, 8:46 AM IST

congress.png

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ಶಾಲೆಟ್‌ ಪಿಂಟೋ ಸಹಿತ ಮೂವರು ಅಂತಿಮ ರೇಸ್‌ನಲ್ಲಿದ್ದಾರೆ. ಪಟ್ಟ ಈ ಬಾರಿ ಜಿಲ್ಲೆಗೆ ಒಲಿಯುವುದೇ ಎನ್ನುವ ಲೆಕ್ಕಾಚಾರ ಕಾಂಗ್ರೆಸ್‌ ವಲಯದಲ್ಲಿ ನಡೆಯುತ್ತಿದೆ. 

ಈ ಸ್ಥಾನ ಇಲ್ಲಿಯವರೆಗೆ ಜಿಲ್ಲೆಗೆ ಲಭಿಸಿಲ್ಲ. ಹೀಗಾಗಿ ಜಿಲ್ಲೆಗೆ ನೀಡಬೇಕು ಎನ್ನುವ ಒತ್ತಾಯ ಒಂದೆಡೆಯಾದರೆ, ಮತ್ತೂಂದೆಡೆ ಸ್ಥಾನದ ಆಕಾಂಕ್ಷಿಯಾದ ಶಾಲೆಟ್‌ ಕೂಡ ಪ್ರಯತ್ನಿಸುತ್ತಿದ್ದಾರೆ.

ಪ್ರಸ್ತುತ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್‌ ಶಾಸಕಿಯಾಗಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಡಿ ಈ ಹುದ್ದೆಗೆ ಹೊಸ ನೇಮಕಾತಿ ಆಗಬೇಕಿದೆ. ಎಐಸಿಸಿ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭಿಸಿದ್ದು, 70ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ 15 ಮಂದಿಯನ್ನು ಎಐಸಿಸಿ ಮಹಿಳಾ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ಸುಶ್ಮಿತಾ ದೇವ್‌ ಅವರು ಕಳೆದ ವಾರ ಹೊಸದಿಲ್ಲಿಯಲ್ಲಿ ಸಂದರ್ಶನ ನಡೆಸಿದ್ದಾರೆ.

ಅಂತಿಮವಾಗಿ ಶಾಲೆಟ್‌ ಪಿಂಟೋ, ಪುಷ್ಪಾ ಅಮರನಾಥ್‌, ಡಾ| ನಾಗಲಕ್ಷ್ಮೀ, ಶಾರದಾ ಗೌಡ, ಭಾರತಿ ಶಂಕರ್‌ ಅವರನ್ನು ಆಯ್ಕೆ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರಿಗೆ ಪಟ್ಟಿ ಕಳುಹಿಸಿದ್ದರು. ರಾಹುಲ್‌ ಗಾಂಧಿಯವರು ಕಳೆದ ಶನಿವಾರ ಈ ಐದು ಮಂದಿಯ ಸಂದರ್ಶನ ನಡೆಸಿದ್ದು, ಅಂತಿಮ ಪಟ್ಟಿಯನ್ನು ಎಐಸಿಸಿ ರಾಜ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಎಐಸಿಸಿ ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರಿಗೆ ಕಳುಹಿಸಿದ್ದಾರೆ. ಇವರು ರಾಜ್ಯ ನಾಯಕರ ಜತೆ ಸಮಾಲೋಚನೆ ನಡೆಸಿ ಓರ್ವರನ್ನು ಆಯ್ಕೆ ಮಾಡುವರು. ಈ ಪೈಕಿ ಶಾಲೆಟ್‌ ಪಿಂಟೋ ಸೇರಿದಂತೆ ಮೈಸೂರು ಜಿ.ಪಂ. ಮಾಜಿ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ದಂತ ವೈದ್ಯೆ ಡಾ| ನಾಗಲಕ್ಷ್ಮೀ ಅವರ ಹೆಸರು ಮುಂಚೂಣಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ. ಈ ಮೂವರೂ ರಾಜ್ಯದ ಪ್ರಭಾವಿ ನಾಯಕರ ಮೂಲಕ ಪಕ್ಷದ ವರಿಷ್ಠರಿಗೆ ಒತ್ತಡ ತರಲಾಗುತ್ತಿದೆ ಎನ್ನಲಾಗಿದೆ. ಶಾರದಾ ಗೌಡ, ಭಾರತಿ ಶಂಕರ್‌ ಕೂಡ ಪ್ರಯತ್ನನಿರತರಾಗಿದ್ದಾರೆ. ಉಪಚುನಾವಣೆ ಮುಗಿದ ಮೇಲೆ ಹೊಸಬರ ಆಯ್ಕೆ ನಡೆಯುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

ಪ್ರಶ್ನೆಪತ್ರಿಕೆ ಸೋರಿಕೆಗೆ ಬುಲ್ಡೋಜರ್‌ ಕ್ರಮ? ತಪ್ಪಿತಸ್ಥರಿಗೆ ಭಾರೀ ದಂಡ

ಪ್ರಶ್ನೆಪತ್ರಿಕೆ ಸೋರಿಕೆಗೆ ಬುಲ್ಡೋಜರ್‌ ಕ್ರಮ? ತಪ್ಪಿತಸ್ಥರಿಗೆ ಭಾರೀ ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಕರಾವಳಿಯಲ್ಲಿ ಇಂದು, ನಾಳೆ “ರೆಡ್‌ ಅಲರ್ಟ್‌’

Heavy Rain ಕರಾವಳಿಯಲ್ಲಿ ಇಂದು, ನಾಳೆ “ರೆಡ್‌ ಅಲರ್ಟ್‌’

ಯೋಗದಿಂದ ಮನಸ್ಸು, ಆರೋಗ್ಯಕ್ಕೆ ಸುಯೋಗ: ಶಾಸಕ ವೇದವ್ಯಾಸ ಕಾಮತ್‌

ಯೋಗದಿಂದ ಮನಸ್ಸು, ಆರೋಗ್ಯಕ್ಕೆ ಸುಯೋಗ: ಶಾಸಕ ವೇದವ್ಯಾಸ ಕಾಮತ್‌

ಪ್ರತಿಯೊಬ್ಬರಲ್ಲೂ ಯೋಧನ ಮನಃಸ್ಥಿತಿ ಅಗತ್ಯ: ಬ್ರಿಜೇಶ್‌ ಚೌಟ

ಪ್ರತಿಯೊಬ್ಬರಲ್ಲೂ ಯೋಧನ ಮನಃಸ್ಥಿತಿ ಅಗತ್ಯ: ಬ್ರಿಜೇಶ್‌ ಚೌಟ

Music, ನೃತ್ಯ ಪರೀಕ್ಷೆ: 10 ದಿನಗಳಲ್ಲಿ ವರದಿ ನೀಡಲು ಕುಲಪತಿ ಸೂಚನೆMusic, ನೃತ್ಯ ಪರೀಕ್ಷೆ: 10 ದಿನಗಳಲ್ಲಿ ವರದಿ ನೀಡಲು ಕುಲಪತಿ ಸೂಚನೆ

Music, ನೃತ್ಯ ಪರೀಕ್ಷೆ: 10 ದಿನಗಳಲ್ಲಿ ವರದಿ ನೀಡಲು ಕುಲಪತಿ ಸೂಚನೆ

“ಆರಾಟ’ ಕನ್ನಡ ಸಿನೆಮಾ ಬಿಡುಗಡೆ: “ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನೆಮಾ'”ಆರಾಟ’ ಕನ್ನಡ ಸಿನೆಮಾ ಬಿಡುಗಡೆ: “ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನೆಮಾ’

“ಆರಾಟ’ ಕನ್ನಡ ಸಿನೆಮಾ ಬಿಡುಗಡೆ: “ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನೆಮಾ’

MUST WATCH

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

udayavani youtube

ತರಂಗ ಯುಗಾದಿ ಧಮಾಕ-2024 | ಅದೃಷ್ಟಶಾಲಿಗಳ ಆಯ್ಕೆ

udayavani youtube

ಹಾಸ್ಟೆಲ್ ಗಳ ಸಮಸ್ಯೆ ಬಗೆಹರಿಸಿ: ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

ಹೊಸ ಸೇರ್ಪಡೆ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.