ಕೃಷ್ಣಾಪುರ ಕೇಸ್: ಎರಡು ದಿನ ಸೆಕ್ಷನ್ 144 ಜಾರಿ, ಮದ್ಯ ಮಾರಾಟ ನಿಷೇಧ, ಪೊಲೀಸ್ ಸರ್ಪಗಾವಲು

Team Udayavani, Dec 25, 2022, 8:38 AM IST

ಕೃಷ್ಣಾಪುರ ಕೇಸ್: ಎರಡು ದಿನ ಸೆಕ್ಷನ್ 144 ಜಾರಿ, ಬಿಗಿ ಪೊಲೀಸ್ ಭದ್ರತೆ

ಮಂಗಳೂರು: ಸುರತ್ಕಲ್ ನ ಕೃಷ್ಣಾಪುರ ಐದನೇ ಬ್ಲಾಕ್‌ ನ ಫ್ಯಾನ್ಸಿ ಸ್ಟೋರ್‌ ಮಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅಲ್ಲದೆ ಮಂಗಳವಾರ ಬೆಳಿಗ್ಗೆಯವರಿಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ.

ರವಿವಾರ ಬೆಳಗ್ಗೆ 6 ರಿಂದ ಡಿ.27ರ ಬೆಳಗ್ಗೆ 6 ರವರೆಗೆ ಸುರತ್ಕಲ್, ಪಣಂಬೂರು, ಬಜಪೆ, ಕಾವೂರು ಠಾಣಾ ವ್ಯಾಪ್ತಿಗಳಲ್ಲಿ ಸೆಕ್ಷನ್‌144 ನಂತೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಲಾಗಿದೆ.

ಮದ್ಯ ಮಾರಾಟ ನಿಷೇಧ: ಅಲ್ಲದೆ ಈ ಸಮಯದಲ್ಲಿ ನಗರ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ರಾತ್ರಿ ಸಂಚಾರ ನಿಷೇಧ: ಮುಂಜಾಗೃತಾ ಕ್ರಮವಾಗಿ ದಿನಾಂಕ 25 ಮತ್ತು 26ರಂದು ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಠಾಣಾ ವ್ಯಾಪ್ತಿಯ ಎಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ಕರ್ತವ್ಯದ ಪಾಳಿಯನ್ನು ಸಂಜೆ 6 ಗಂಟೆಯ ಒಳಗಾಗಿ ಬದಲಾಯಿಸುವಂತೆ ಮತ್ತು ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಸಿಬ್ಬಂದಿಯವರು ರಸ್ತೆಯಲ್ಲಿ ಸಂಚರಿಸಬಾರದು ಎಂದು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

ಏನಿದು ಘಟನೆ?: ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್‌ (42) ಅವರಿಗೆ ಶನಿವಾರ ರಾತ್ರಿ ದುಷ್ಕರ್ಮಿಗಳಿಬ್ಬರು ಚೂರಿಯಿಂದ ಇರಿದಿದ್ದು, ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾತ್ರಿ 8.30ರ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಇಬ್ಬರು ಯುವಕರು ಅಂಗಡಿಗೆ ಬಂದಿದ್ದರು. ಓರ್ವ ಮಾಸ್ಕ್ ಧರಿಸಿದ್ದು, ಇನ್ನೋರ್ವ ಟವೆಲನ್ನು ಮುಖಕ್ಕೆ ಕಟ್ಟಿಕೊಂಡಿದ್ದ ಎನ್ನಲಾಗಿದೆ. ಕೃತ್ಯ ನಡೆಸಿ ದೂರದಲ್ಲಿ ನಿಲ್ಲಿಸಿದ್ದ ಬೈಕಿನಲ್ಲಿ ಪರಾರಿಯಾದರು.

ಇದನ್ನೂ ಓದಿ:ಬ್ಯಾಕ್‌ಅಪ್‌ ಆಟಗಾರರಿಗೆ ಮಣೆ ಹಾಕಿದ ಆರ್‌ಸಿಬಿ

ಜಲೀಲ್ ಬೊಬ್ಬೆ ಹಾಕಿ ಸಮೀಪದ ಅಂಗಡಿಯತ್ತ ಓಡುತ್ತಾ ಬರುತ್ತಿದ್ದಾಗಲೇ ಕುಸಿದು ಬಿದ್ದರು. ಕೂಡಲೇ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಕೆಲವೇ ಹೊತ್ತಿನಲ್ಲಿ ಅವರು ಮೃತಪಟ್ಟರು.

ಕೃಷ್ಣಾಪುರ 9ನೇ ಬ್ಲಾಕ್‌ ನಿವಾಸಿಯಾಗಿದ್ದ ಜಲೀಲ್‌ ಪತ್ನಿಯನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಇಂದಿನಿಂದ ಶೈಕ್ಷಣಿಕ ವರ್ಷ; ತೆರೆದುಕೊಳ್ಳಲಿದೆ ಶಾಲೆ…

ಇಂದಿನಿಂದ ಶೈಕ್ಷಣಿಕ ವರ್ಷ; ತೆರೆದುಕೊಳ್ಳಲಿದೆ ಶಾಲೆ…

ಉಪ್ಪುಂದ: ಉದ್ಯೋಗ ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ಉಪ್ಪುಂದ: ಉದ್ಯೋಗ ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ

COMED K

Comed-K ಮುಕ್ತಾಯ: ಪರೀಕ್ಷೆ ಬರೆದ 78 ಸಾವಿರ ವಿದ್ಯಾರ್ಥಿಗಳು

ಕರಾವಳಿಯ ದೇಗುಲಗಳಲ್ಲಿ ಭಕ್ತ ಸಾಗರ… ಬೀಚ್‌ಗಳಲ್ಲೂ ಭಾರೀ ಜನ

ಕರಾವಳಿಯ ದೇಗುಲಗಳಲ್ಲಿ ಭಕ್ತ ಸಾಗರ… ಬೀಚ್‌ಗಳಲ್ಲೂ ಭಾರೀ ಜನ

BRIJ BHUSHAN

BJP ಸಂಸದ ಬ್ರಿಜ್‌ಭೂಷಣ್‌ಸಿಂಗ್‌ ಬಂಧನಕ್ಕೆ ಆಗ್ರಹ

SUICIDE

ರೈತರ ಆತ್ಮಹತ್ಯೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ: ಪ್ರಕಾಶ್‌ ಕಮ್ಮರಡಿ

ಸಾವರ್ಕರ್‌ ತ್ಯಾಗ, ದಿಟ್ಟತನ ಸ್ಮರಿಸಿದ ಮೋದಿ

ಸಾವರ್ಕರ್‌ ತ್ಯಾಗ, ದಿಟ್ಟತನ ಸ್ಮರಿಸಿದ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ಶೈಕ್ಷಣಿಕ ವರ್ಷ; ತೆರೆದುಕೊಳ್ಳಲಿದೆ ಶಾಲೆ…

ಇಂದಿನಿಂದ ಶೈಕ್ಷಣಿಕ ವರ್ಷ; ತೆರೆದುಕೊಳ್ಳಲಿದೆ ಶಾಲೆ…

ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ… ಮೂವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ… ಮೂವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ: ಹಾರಾಟದಲ್ಲಿ ವ್ಯತ್ಯಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ: ಹಾರಾಟದಲ್ಲಿ ವ್ಯತ್ಯಯ

1-sasad

Mangaluru Airport 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

ನಗರದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಉಪಟಳ

ನಗರದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಉಪಟಳ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ