ಹೊಸ ವೋಲ್ವೋ ಬಸ್‌ ಸೇವೆ ಆರಂಭ

Team Udayavani, Jan 14, 2020, 6:46 AM IST

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದಿಂದ ಮಂಗಳೂರು – ಮೈಸೂರು ಮಾರ್ಗದಲ್ಲಿ ಹೊಸ ವೋಲ್ವೋ ಬಸ್‌ ಮತ್ತು ಮಂಗಳೂರು- ಬೆಂಗಳೂರು ಮಾರ್ಗದಲ್ಲಿ ಹೊಸ ಮಲ್ಟಿ ಆಕ್ಸೆಲ್‌ ವೋಲ್ವೋ ಬಸ್ಸನ್ನು ಜ. 11ರಿಂದ ಪ್ರಾರಂಭಿಸಿದೆ.

ಮಂಗಳೂರು-ಮೈಸೂರು ಬಸ್‌ ಮಂಗಳೂರಿನಿಂದ ಬೆಳಗ್ಗೆ 5.30ಕ್ಕೆ ಹೊರಟು ಪುತ್ತೂರು, ಸುಳ್ಯ, ಮಡಿಕೇರಿ ಮಾರ್ಗವಾಗಿ ಮೈಸೂರಿಗೆ 10.30ಕ್ಕೆ ತಲುಪುವುದು. ಮೈಸೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮಂಗಳೂರಿಗೆ ಮಧ್ಯಾಹ್ನ 12 ಗಂಟೆಗೆ ತಲುಪಲಿದೆ.

ಮಂಗಳೂರು- ಬೆಂಗಳೂರು- ಮಲ್ಟಿ ಆ್ಯಕ್ಸೆಲ್‌ ವೋಲ್ವೋ ಬಸ್‌ ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಪುತ್ತೂರು, ಮಡಿಕೇರಿ, ಮೈಸೂರು ಮಾರ್ಗವಾಗಿ ಬೆಂಗಳೂರಿಗೆ 3 ಗಂಟೆಗೆ ತಲುಪುವುದು. ಮರು ಪ್ರಯಾಣದಲ್ಲಿ ಬೆಂಗಳೂರಿನಿಂದ 11 ಗಂಟೆಗೆ ಹೊರಟು ಮಂಗಳೂರಿಗೆ 6.45ಕ್ಕೆ ತಲುಪಲಿದೆ.

“ಅವತಾರ್‌’ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ