“ವಿಶ್ವಕರ್ಮರಿಗೆ ಕುಲದೇವಿ ದೇವಸ್ಥಾನ ನಿರ್ಮಾಣ ಕಷ್ಟವಲ್ಲ ‘

  ಕುಕ್ಕಟ್ಟೆ ದೇವಸ್ಥಾನ ಜೀಣೋದ್ಧಾರ: ಸಮಾಲೋಚನ ಸಭೆ

Team Udayavani, May 6, 2019, 6:15 AM IST

0405PCR8PH

ಕಾಣಿಯೂರು: ದೇವಸ್ಥಾನ ಗಳನ್ನು ನಿರ್ಮಿಸಿದ ವಿಶ್ವಕರ್ಮರಾದ ನಮಗೆ ನಮ್ಮದೇ ಆದ ಕುಲದೇವಿ ದೇವಸ್ಥಾನ ನಿರ್ಮಿಸುವುದು ಕಷ್ಟ ಆಗಲಿ ಕ್ಕಿಲ್ಲ. ಆದರೆ ನಮ್ಮ ಪ್ರಯತ್ನಗಳು, ಸಮರ್ಪಣ ಭಾವ ಅತೀ ಅಗತ್ಯ ಎಂದು ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣ ಸಂಘದ ಗೌರವಾಧ್ಯಕ್ಷ ನಲ್ಕ ಗೋಪಾಲಕೃಷ್ಣ ಆಚಾರ್‌ ಹೇಳಿದರು.

ಅವರು ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ನಿಧಿ ಸಂಚಯನ ಮತ್ತು ಮುಂದಿನ ಕೆಲಸ ಕಾರ್ಯಗಳ ಬಗ್ಗೆ ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆದ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

50 ಸೆಂಟ್ಸ್‌ ಜಾಗ ಹಸ್ತಾಂತರ
ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಜೀರ್ಣೋ ದ್ಧಾರ ಸಮಿತಿ ಗೌರವಾಧ್ಯಕ್ಷ ಬಾಲ ಕೃಷ್ಣ ಆಚಾರ್ಯ ಮರೋಳಿ ಮಾತನಾಡಿ, ಪೂರ್ವ ದೇವಸ್ಥಾನ ನಿರ್ಮಾಣಕರ್ತರಾದ ಜನಾರ್ದನ ಆಚಾರ್ಯ ಕುಕ್ಕಟ್ಟೆ ಅವರು ದೇವಸ್ಥಾನ ನಿರ್ಮಾಣಕ್ಕಾಗಿ ಸುಮಾರು 50 ಸೆಂಟ್ಸ್‌ ಜಾಗವನ್ನು ದೇವಸ್ಥಾನದ ಸಮಿತಿಗೆ ಹಸ್ತಾಂತರ ಮಾಡಿದ್ದಾರೆ ಎಂದರು.

ಸರ್ವರ ಸಹಕಾರ ಅಗತ್ಯ
ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣ ಸಂಘದ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು ಮಾತನಾಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳ ಗಡಿಭಾಗದಲ್ಲಿರುವ ದೇವಸ್ಥಾನವು ಈ ಭಾಗದ ವಿಶ್ವಕರ್ಮ ಸಮುದಾಯದ ಪಾಲಿಗೆ ಒಂದು ಸುಂದರ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿ ರೂಪುಗೊಳ್ಳಲಿದೆ. ಸರ್ವರ ಸಹಕಾರ ಅಗತ್ಯ ಎಂದರು.

ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಧನಂಜಯ ಆಚಾರ್ಯ ಏನೆಕಲ್ಲು ಮಾತನಾಡಿ, ಊರಿನ ಜನರ ಸಹಕಾರದೊಂದಿಗೆ ಜೀರ್ಣೋದ್ಧಾರದ ಮಹತ್ಕಾರ್ಯಕ್ಕೆ ಇಳಿದಿದ್ದೇವೆ. ಶೀಘ್ರದಲ್ಲಿ ನಡೆಯಲಿರುವ ನಿಧಿ ಕುಂಭ ಸ್ಥಾಪನೆಗೆ ಸಮಾಜದ ಬಂಧುಗಳು ಸಹಕಾರ ನೀಡಬೇಕೆಂದು ಹೇಳಿದರು.

ಗುರು ಸೇವಾ ಪರಿಷತ್‌ ಪುತ್ತೂರು ವಲಯಾಧ್ಯಕ್ಷ ಪುರುಷೋತ್ತಮ ಆಚಾರ್ಯ ಕೊಕ್ಕಡ, ಪುತ್ತೂರು ವಿಶ್ವ ಬ್ರಾಹ್ಮಣ ಸೇವಾ ಸಂಘದ ಕಾರ್ಯ ದರ್ಶಿ ಶ್ರೀಧರ ಆಚಾರ್ಯ ಕೊಕ್ಕಡ, ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ಉದಯಕುಮಾರ್‌ ಆಚಾರ್ಯ, ಜಿಲ್ಲಾ ವಿಶ್ವಕರ್ಮ ಹಿತ ರಕ್ಷಣಾ ಸಂಘದ ಕಾರ್ಯಾಧ್ಯಕ್ಷೆ ಪ್ರಭಾ ಹರೀಶ್‌ ಆಚಾರ್ಯ ಮಾತನಾಡಿದರು.

ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ ಇಳಂತಿಲ, ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಸುರೇಶ್‌ ಆಚಾರ್ಯ ಕಾಣಿಯೂರು, ವಿಶ್ವಕರ್ಮ ಯುವ ಮಿಲನದ ಅಧ್ಯಕ್ಷ ವಸಂತ ಆಚಾರ್ಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಪಾಲ್ತಾಡಿ, ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ವಾಣಿ ನವೀನ್‌ ಆಚಾರ್ಯ, ಜಿಲ್ಲಾ ವಿಶ್ವಕರ್ಮ ಹಿತರಕ್ಷಣ ಸಂಘದ ಗೌರವ ಸಲಹೆಗಾರ ಪ್ರಭಾಕರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸಂಜೀವ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿಯ ಸ್ಥಾಪಕಾಧ್ಯಕ್ಷೆ ಉಷಾ ಸದಾನಂದ ಆಚಾರ್ಯ ಉಪಸ್ಥಿತರಿದ್ದರು.

ಬಾಲಕೃಷ್ಣ ಪುರೋಹಿತ್‌ ಕುಕ್ಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ ವಂದಿಸಿದರು.

2.5 ಕೋಟಿ ರೂ.ಗೂ ಅಧಿಕ ಸಂಪನ್ಮೂಲ
ಬಾಲಕೃಷ್ಣ ಪುರೋಹಿತ್‌ ಕುಕ್ಕಟ್ಟೆ ಅವರು ಪ್ರಸ್ತಾವನೆಗೈದು, ದೇವಸ್ಥಾನವು ಸುಮಾರು 252 ವರ್ಷಗಳ ಇತಿಹಾಸ ಹೊಂದಿದೆ. 53 ವರ್ಷಗಳ ಹಿಂದೆ ಕುಕ್ಕಟ್ಟೆ ಜನಾರ್ದನ ಆಚಾರ್ಯರು ಸ್ಥಾಪಿಸಿದ ದೇವಸ್ಥಾನವು ಜೀರ್ಣಾವಸ್ಥೆ ತಲುಪಿರುವುದರಿಂದ ಊರಿನವರ ಹಾಗೂ ಸಮಾಜದ ಬಂಧುಗಳ ಅಪೇಕ್ಷೆಯಂತೆ ಅಷ್ಟಮಂಗಲ ಪ್ರಶ್ನೆಯ ಮೂಲಕ ಚಿಂತನೆ ನಡೆಸಿ ಆ ಮೂಲಕ ದೇವಸ್ಥಾನ ಜೀರ್ಣೋದ್ಧಾರ ಮಾಡುವ ತೀರ್ಮಾನಕ್ಕೆ ಬಂದಿದ್ದೇವೆ. ಅಂದಾಜು ರೂ 2.5 ಕೋಟಿ ರೂ.ಗಿಂತಲೂ ಅಧಿಕ ಸಂಪನ್ಮೂಲ ಕ್ರೋಡೀಕರಿಸುವ ಅಗತ್ಯವಿದೆ ಎಂದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.