
ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ
Team Udayavani, Nov 30, 2022, 8:13 AM IST

ಮಂಗಳೂರು : ಯಕ್ಷಗಾನ ಮತ್ತು ತಾಳ-ಮದ್ದಳೆ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ಅವರು ಬುಧವಾರ ನಿಧನರಾಗಿದ್ದಾರೆ.
ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬ್ಳೆ ಸುಂದರ್ ರಾವ್. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯನಿರ್ವಹಿಸಿದ್ದರು, ಅಲ್ಲದೆ 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಗೂ ಕುಂಬಳೆ ಸುಂದರ್ ರಾವ್ ಪಾತ್ರರಾಗಿದ್ದರು.
ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸುಂದರ್ ರಾವ್ ಅವರು ಪತ್ನಿ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಗುರುವಾರ ನೆರವೇರಲಿದೆ.
ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫಾಝಿಲ್ ಹತ್ಯೆ ಸಮರ್ಥಿಸಿ ಹೇಳಿಕೆ: ಶರಣ್ ಬಂಧನಕ್ಕೆ ಫಾಝಿಲ್ ತಂದೆ ಆಗ್ರಹ

ಕೊಲೆಗೆ ಪ್ರೇರಣೆ ನೀಡುವವರನ್ನು ಗಡೀಪಾರು ಮಾಡಿ: ಶಾಸಕ ಖಾದರ್

ನಾಳೆಯಿಂದ ಗುತ್ತಿಗೆ ಕಾರ್ಮಿಕರ ಮುಷ್ಕರ: ನೀರು ಸರಬರಾಜು, ಸ್ವಚ್ಛತೆ ಸೇವೆ ವ್ಯತ್ಯಯ ಸಾಧ್ಯತೆ

ಅಂಚೆ ಇಲಾಖೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅವಿಭಜಿತ ದ.ಕ. ಜಿಲ್ಲೆಯಲ್ಲಿ 273 ಹುದ್ದೆ

ಮಂಗಳೂರು: ಬೀಡಿ ಕಮಿಷನ್ 2.25 ರೂ. ಏರಿಕೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಾಲಿ- ಮಾಜಿ ಸಿಎಂ ಗಳು ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ: ಎಚ್.ವಿಶ್ವನಾಥ ಅಸಮಾಧಾನ

ಕಿರಿಕ್ ಪಾರ್ಟಿ-2 ಯಾವಾಗ?: ಅಭಿಮಾನಿಗಳ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿದ ರಕ್ಷಿತ್

“ಮಾಹಿತಿ ಯುದ್ಧ ನಡೆಸುತ್ತಿದೆ..” ಬಿಬಿಸಿ ಡಾಕ್ಯುಮೆಂಟರಿ ಪ್ರಕರಣದಲ್ಲಿ ಭಾರತದ ಬೆಂಬಲಕ್ಕೆ ನಿಂತ ರಷ್ಯಾ

ಪಕ್ಷ ಸಂಘಟನೆಗೆ ಒತ್ತು ನೀಡಿ: ಧ್ರುವ

150ಕ್ಕೂ ಅಧಿಕ ಮಂದಿ ಜೆಡಿಎಸ್ ಸೇರ್ಪಡೆ