ಬಸ್‌, ರಿಕ್ಷಾ ಸಂಚಾರ ಯಥಾಸ್ಥಿತಿ ಸಾಧ್ಯತೆ

ಕರಾವಳಿಯಲ್ಲಿ ಇಂದು ಕಾರ್ಮಿಕ ಮುಷ್ಕರ

Team Udayavani, Jan 8, 2020, 5:38 AM IST

39

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜ.8ರ ಮುಷ್ಕರಕ್ಕೆ ವಿವಿಧ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ ಖಾಸಗಿ, ಸಿಟಿ ಬಸ್‌ ಮತ್ತು ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಎಂದಿನಂತಿರುವ ನಿರೀಕ್ಷೆಯಿದೆ. ಮುಷ್ಕರ ಕ್ಕಷ್ಟೇ ಬೆಂಬಲ ಎಂದು ಹಲವು ಸಂಘಟನೆಗಳು ಹೇಳಿದ್ದು, ಜನಜೀವನ ಬಾಧಿತವಾಗುವ ಸಾಧ್ಯತೆ ಕಡಿಮೆ.

ಮುಷ್ಕರಕ್ಕೆ ಖಾಸಗಿ ಬಸ್‌ ಮಾಲಕರ ಬೆಂಬಲವಿಲ್ಲ; ಎಂದಿನಂತೆ ಬಸ್‌ ಸಂಚರಿಸಲಿವೆ ಎಂದು ಕೆನರಾ ಬಸ್‌ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌ ಮತ್ತು ಉಡುಪಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸಿಟಿ ಬಸ್‌ಗಳು ಕೂಡ ಎಂದಿನಂತೆ ಸಂಚಾರ ನಡೆಸಲಿವೆ ಎಂದು ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ತಿಳಿಸಿದ್ದಾರೆ. ಕೆಎಸ್ಸಾರ್ಟಿಸಿ ನಿಗಮವು ಎಲ್ಲ ಸಿಬಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ ಎಂದು ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಎಸ್‌.ಎನ್‌. ಅರುಣ್‌ ತಿಳಿಸಿದ್ದಾರೆ. ಜಿಲ್ಲೆಯ ಕೆಲವು ರಿಕ್ಷಾ ಯೂನಿಯನ್‌ಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿ ದ್ದರೂ ಸೇವೆ ಎಂದಿನಂತೆ ಇರಲಿದೆ ಎಂದು ರಿಕ್ಷಾ ಮಾಲಕರು ತಿಳಿಸಿದ್ದಾರೆ.

ಮಂಗಳೂರು: ಪ್ರತಿಭಟನ ಸಭೆ
ಮಂಗಳೂರಿನ ಪುರಭವನದ ಆವರಣದಲ್ಲಿ ಜ.8ರಂದು ಬೆಳಗ್ಗೆ 10.30ರಿಂದ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನ ಸಭೆ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

ವಿವಿಧ ಬ್ಯಾಂಕ್‌ ಸಿಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಬ್ಯಾಂಕಿಂಗ್‌ ಸೇವೆ ವ್ಯತ್ಯಯವಾಗುವ ಸಾಧ್ಯತೆಯಿದೆ. ಎಲ್‌ಐಸಿ ಸೇರಿದಂತೆ ವಿವಿಧ ಸೇವೆಗಳು ಮುಷ್ಕರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಬಂದರು ಶ್ರಮಿಕರ ಸಂಘವು ಮುಷ್ಕರಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ್ದು, ಸೆಂಟ್ರಲ್‌ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದೆ. ಉಳಿದಂತೆ ಹಲವು ಕಾರ್ಮಿಕ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ.

ಉಡುಪಿ: ಮುಷ್ಕರ ಮಾತ್ರ; ಬಂದ್‌ ಇಲ್ಲ
ಉಡುಪಿ ಜಿಲ್ಲೆಯಾದ್ಯಂತ ಬುಧವಾರ ಮೆರವಣಿಗೆ, ಪ್ರತಿಭಟನ ಸಭೆ, ಮುಷ್ಕರ ನಡೆಯಲಿದೆ. ಉಡುಪಿ ನಗರದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆಶ್ರಯದಲ್ಲಿ ಮೆರವಣಿಗೆ ಆಯೋಜಿಸಲಾಗಿದೆ.

ಬಂದ್‌ ಇಲ್ಲ: ಬೊಮ್ಮಾಯಿ
ಸುದ್ದಿಗಾರರ ಜತೆ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಬಂದ್‌ ಇಲ್ಲ. ಕೇವಲ ಮುಷ್ಕರ ಮಾತ್ರ ಎಂದು ಸಿಐಟಿಯು ರಾಜ್ಯಾಧ್ಯಕ್ಷ ಅನಂತಸುಬ್ಬರಾವ್‌ ನನಗೆ ತಿಳಿಸಿದ್ದಾರೆ ಎಂದರು. ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾ ಚರಿಸಲಿವೆ. ಬಂದ್‌ ಸಂಬಂಧಿಸಿ ತೆಗೆದುಕೊಳ್ಳಬೇಕಾದ ಬಂದೋಬಸ್ತ್ನ್ನು ಏರ್ಪಡಿಸಲಾಗಿದೆ ಮತ್ತು ಅಧಿಕಾರಿಗಳ ಜತೆ ಮಾತನಾಡಿದ್ದೇನೆ ಎಂದರು.

ಬಂದ್‌ಗೆ ಬೆಂಬಲ ಇಲ್ಲ
ಜಿಲ್ಲೆಯಲ್ಲಿ ನಡೆಯಲಿರುವ ಮುಷ್ಕರಕ್ಕೆ ಜಿಲ್ಲಾ ವರ್ತಕರ ಸಂಘದ ಬೆಂಬಲವಿದೆ. ಆದರೆ ಬಂದ್‌ಗೆ ಇಲ್ಲ ಎಂದು ಅಧ್ಯಕ್ಷ ಐರೋಡಿ ಸಹನಶೀಲ ಪೈ ಹಾಗೂ ಕಾರ್ಯದರ್ಶಿ ಪಾದೆಮಠ ನಾಗರಾಜ ಅಡಿಗ ತಿಳಿಸಿದ್ದಾರೆ.  ಬಂದ್‌ಗೆ ನಮ್ಮ ಬೆಂಬಲವಿಲ್ಲ. ಮುಷ್ಕರಕ್ಕೆ ಮಾತ್ರ ಬೆಂಬಲ ಎಂದು ಕಮ್ಯುನಿಸ್ಟ್‌ ಪಕ್ಷ ನಾಯಕ ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.