ಜಿಲ್ಲೆಯಲ್ಲಿ ನೀರಿನ ಕೊರತೆ: ಶಾಲಾರಂಭಕ್ಕೆ ಸಂಕಷ್ಟ

Team Udayavani, May 16, 2019, 6:00 AM IST

ಸಾಂದರ್ಭಿಕ ಚಿತ್ರ

ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿದ್ದು, ಈ ನಡುವೆ ಪಿಯುಸಿ ತರಗತಿ ಇನ್ನೇನು ಕೆಲವೇ ದಿನ ಗಳಲ್ಲಿ ಆರಂಭವಾಗಲಿದೆ. ನೀರಿನ ಕೊರತೆ ಶಾಲಾರಂಭಕ್ಕೂ ಸಂಕಷ್ಟ ಒಡ್ಡಲಿದೆ.

ಪಿಯುಸಿ ತರಗತಿಗಳು ಮೇ 20ರಿಂದ ಆರಂಭಗೊಳ್ಳಲಿದ್ದು, ಜಿಲ್ಲೆಗೆ ವಿವಿಧ ಭಾಗಗಳ ಸಾವಿರಾರು ವಿದ್ಯಾರ್ಥಿಗಳು ವಿವಿಧ ಕಾಲೇಜುಗಳಿಗೆ ಆಗಮಿಸಲಿದ್ದಾರೆ. ಸದ್ಯ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ಕಾಲೇಜು ಆರಂಭವಾದರೆ ಈ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ. ಈ ಹಿನ್ನೆಲೆಯಲ್ಲಿ ಪಿಯುಸಿ ಡಿಡಿಪಿಐ ಅವರು ಜಿಲ್ಲೆಯ ಕಾಲೇಜುಗಳಲ್ಲಿ ಇರುವ ನೀರಿನ ಸಮಸ್ಯೆಯ ಗಂಭೀರತೆ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.

ಕೆಲವು ಸರಕಾರಿ ಹಾಗೂ ಖಾಸಗಿ ಶಾಲಾ- ಕಾಲೇಜುಗಳಲ್ಲಿ ಸ್ವಂತ ಬಾವಿ, ಕೊಳವೆ ಬಾವಿ ವ್ಯವಸ್ಥೆಗಳಿಲ್ಲದೆ ಇರುವುದರಿಂದ ನಳ್ಳಿ ನೀರನ್ನೇ ಅವಲಂಬಿಸಲಾಗಿದೆ. ಸ್ವಂತ ಬಾವಿ, ಕೊಳವೆ ಬಾವಿ ಇರುವ ಶಾಲಾ ಕಾಲೇಜುಗಳಲ್ಲೂ ನೀರು ಬತ್ತಿಹೋಗುತ್ತಿದೆ.

ಕಾಲೇಜುಗಳು ಮೇ 20ರಂದು ಆರಂಭವಾದರೆ ಕುಡಿಯುವ ನೀರು ಮಾತ್ರವಲ್ಲ ಶೌಚಾಲಯ, ಕೈ ತೊಳೆಯುವುದು ಸೇರಿದಂತೆ ಇನ್ನಿತರ ಬಳಕೆಗಾಗಿ ಸಾವಿರಾರು ಲೀಟರ್‌ ನೀರು ಬೇಕಾಗುತ್ತದೆ. ಈ ಸಮಸ್ಯೆಯನ್ನು ಬಗ್ಗೆ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ದ.ಕ. ಡಿಡಿಪಿಐ ಕುಶಾಲಾರತಿ ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

  • ಮಂಗಳೂರು: ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿದ್ದ ನಳಿನ್‌ ಕುಮಾರ್‌ ಕಟೀಲು ಅವರು ಮೂರನೇ ಬಾರಿಗೆ ಸಂಸತ್‌ ಪ್ರವೇಶಿಸುವ ಮೂಲಕ ಕರಾವಳಿ ಮಾತ್ರವಲ್ಲ ಇಡೀ ರಾಷ್ಟ್ರ...

  • ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದಿನ ಎರಡು ಚುನಾವಣೆಗಳಲ್ಲಿಯೂ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ನಳಿನ್‌...

  • ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದಿಂದ ನಿರಂತರ 3ನೇ ಬಾರಿಗೆ ಗೆಲುವು ಸಾಧಿಸಿರುವ ನಳಿನ್‌ ಕುಮಾರ್‌ ಕಟೀಲು ಅವರಿಗೆ ಈ ಬಾರಿಯ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ...

  • ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಕಾಂಗ್ರೆಸ್‌ ಅಭ್ಯರ್ಥಿ, ಜಿಲ್ಲಾ ಯುವ ಕಾಂಗ್ರೆಸ್‌...

  • ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸುವುದಕ್ಕೆ ಶತಾಯಗತಾಯ ಪ್ರಯತ್ನ ನಡೆಸಿದ್ದರೂ ಯಶಸ್ಸು ಕಾಣದಿರಲು ಕಾರಣಗಳೇನು...

ಹೊಸ ಸೇರ್ಪಡೆ