ರಾಜ್ಯದೆಲ್ಲೆಡೆ ಭಾಷಾ ಪ್ರಾಧ್ಯಾಪಕರು ಕಂಗಾಲು!


Team Udayavani, Aug 25, 2021, 8:20 AM IST

ರಾಜ್ಯದೆಲ್ಲೆಡೆ ಭಾಷಾ ಪ್ರಾಧ್ಯಾಪಕರು ಕಂಗಾಲು!

ಮಂಗಳೂರು: ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಯಾಗುತ್ತಿದ್ದಂತೆ ರಾಜ್ಯಾದ್ಯಂತ ತಾತ್ಕಾಲಿಕ ನೆಲೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಿಂದಿ, ಸಂಸ್ಕೃತ ಸೇರಿದಂತೆ ಭಾಷಾ ಪ್ರಾಧ್ಯಾಪಕರು ಕಂಗಾಲಾಗಿದ್ದಾರೆ.

ಹೊಸ ಶಿಕ್ಷಣ ನೀತಿ  ಮಾರ್ಗಸೂಚಿ ಪ್ರಕಾರ ಪದವಿಯಲ್ಲಿ 2 ಭಾಷೆಗಳ ಪೈಕಿ ಒಂದನ್ನು (ಕನ್ನಡ) ಅನಿವಾರ್ಯಗೊಳಿಸಿ ಮತ್ತೂಂದು ಭಾಷೆಯಾಗಿ ಇತರ ಯಾವುದಾದರೂ ಒಂದನ್ನು ಅಧ್ಯಯನ ಮಾಡಲು ಅವಕಾಶ ನೀಡಲಾಗಿದೆ. ಮತ್ತೂಂದು ಭಾಷೆಯಾಗಿ ವಿದ್ಯಾರ್ಥಿಗಳು ಬಹುತೇಕ ಇಂಗ್ಲಿಷನ್ನು ಆಯ್ಕೆ ಮಾಡುವುದರಿಂದಾಗಿ ಹಿಂದಿ, ಸಂಸ್ಕೃತ ಸೇರಿದಂತೆ ಇತರ ಭಾಷೆಗಳ ಅಧ್ಯಯನಕ್ಕೆ ಅವಕಾಶ ಇಲ್ಲವಾಗಿದೆ. ರಾಜ್ಯಾದ್ಯಂತ ತಾತ್ಕಾಲಿಕ ನೆಲೆಯಲ್ಲಿ ಇರುವ ಸಾವಿರಾರು ಪ್ರಾಧ್ಯಾಪಕರು ಕೆಲಸ ಕಳಕೊಳ್ಳುವ ಆತಂಕ ಎದುರಾಗಿದೆ.

ವಿದ್ಯಾರ್ಥಿಗಳ ಇಚ್ಛೆಗೆ/ಅಗತ್ಯಕ್ಕೆ ತಕ್ಕಂತೆ ರಾಷ್ಟ್ರೀಯ ಭಾವೈಕ್ಯವನ್ನು ಪ್ರತಿ ಬಿಂಬಿಸುವ ಭಾಷೆಗಳನ್ನು ಓದುವ  ನಿಯಮ ಮಾಡುವುದು ವೈಜ್ಞಾನಿಕ  ಹಾಗೂ ನ್ಯಾಯೋಚಿತ. ರಾಷ್ಟ್ರೀಯ  ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತವಾ ಗಿದ್ದು ಯಾವುದೇ ವಿಷಯವನ್ನು ಹಾಗೂ ಯಾವುದೇ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಲು ಆತ ಸ್ವತಂತ್ರನಾಗಿರು ತ್ತಾನೆ ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಆದರೆ ಪ್ರಸ್ತುತ ಹೊಸ ನೀತಿಯಲ್ಲಿ ಇದಕ್ಕೆ ಅವಕಾಶ ಇಲ್ಲದಿರುವುದು ವಿದ್ಯಾರ್ಥಿಗಳಿಗೆ ಸಂಕಟ

ಸೃಷ್ಟಿಸಿದರೆ, ಭಾಷಾ ಪ್ರಾಧ್ಯಾಪಕರು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಸರಕಾರ ಮಧ್ಯಪ್ರವೇಶಿಸಿ ಸೂಕ್ತ ಸ್ಪಂದನೆ ನೀಡುವಂತೆ ಆಗ್ರಹಿಸಿ ಸಂಸದ ನಳಿನ್‌ ಕುಮಾರ್‌ , ಸಚಿವರಾದ ಅಂಗಾರ, ಸುನಿಲ್‌ ಕುಮಾರ್‌ ಸೇರಿದಂತೆ ಹಲವು ಜನನಾಯಕರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿದೆ.

ತುಳುವಿಗೂ ಆತಂಕ! :

ಕನ್ನಡದ ಜತೆಗೆ ಒಂದು ಭಾಷೆಯನ್ನು ಮಾತ್ರ ಕಲಿಯಲು ನೂತನ ಶಿಕ್ಷಣ ನೀತಿಯಲ್ಲಿ ಅವಕಾಶ ನೀಡಿರುವುದರಿಂದ ಹಿಂದಿಯ ಜತೆಗೆ ತುಳು, ಉರ್ದು, ಕೊಂಕಣಿ, ಕೊಡವ ಭಾಷೆಗಳನ್ನು ಕೂಡ ಅಧ್ಯಯನ ಮಾಡಲು ಅವಕಾಶ ಇಲ್ಲ. ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ತುಳು, ಕೊಂಕಣಿ, ಉರ್ದು ಕಲಿಕೆಗೆ ಇಲ್ಲಿಯವರೆಗೆ ಉತ್ತಮ ಅವಕಾಶ ಲಭಿಸುತ್ತಿತ್ತು. ಆದರೆ ಇನ್ನು ಮುಂದೆ ಇದಕ್ಕೂ ಅವಕಾಶ ಇಲ್ಲವಾದರೆ ಸ್ಥಳೀಯ ಭಾಷಾ ಕಲಿಕೆಗೆ ಬಹುದೊಡ್ಡ ಹೊಡೆತ ಬಿದ್ದಂತಾಗಲಿದೆ.

2 ಭಾಷೆ ಬೋಧನೆಗೆ ಅವಕಾಶ ಸಿಗಲಿ :

ಪ್ರಸ್ತುತ ಇರುವಂತೆ, ಇನ್ನು ಮುಂದೆಯೂ ಯಾವುದಾದರೂ ಎರಡು ಭಾಷೆಗಳ ಬೋಧನೆ ಮತ್ತು ಅಧ್ಯಯನಕ್ಕೆ ಅವಕಾಶ ಕೊಡಬೇಕು. ಒಂದು ಭಾಷೆ ಅನಿವಾರ್ಯವಾದರೆ, ಮತ್ತೂಂದು ಆಯ್ಕೆಯಾಗಿ ಇಂಗ್ಲಿಷ್‌ ಅನ್ನು ವಿದ್ಯಾರ್ಥಿಗಳು ಪರಿಗಣಿಸುತ್ತಾರೆ. ಇದರಿಂದ ಹಿಂದಿ ಸೇರಿದಂತೆ ಇತರ ಭಾಷೆಯ ಅಧ್ಯಾಪಕರು ಬೀದಿಗೆ ಬೀಳಲಿದ್ದಾರೆ. – ಡಾ| ಎಸ್‌.ಎ. ಮಂಜುನಾಥ್‌,  ಅಧ್ಯಕ್ಷರು, ಹಿಂದಿ ಪ್ರಾಧ್ಯಾಪಕರ ರಾಜ್ಯ ಸಂಘ

ಕೆಲಸ ಕಳೆದುಕೊಳ್ಳುವ ಆತಂಕ :

ಹೊಸ ಶಿಕ್ಷಣ ನೀತಿಯಿಂದ ಸಂಸ್ಕೃತ, ಹಿಂದಿ ಸೇರಿದಂತೆ ವಿವಿಧ ಭಾಷೆಗಳಿಗೆ ಹೊಡೆತ ಬೀಳಲಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಈ ಭಾಷೆಗಳು ಮೌಲ್ಯ ಕಳೆದುಕೊಳ್ಳುವ ಅಪಾಯ ಎದುರಾಗಲಿದೆ. ನೂರಾರು ಪ್ರಾಧ್ಯಾಪಕರು ಮುಂದೆ ಕೆಲಸ ಕಳೆದುಕೊಳ್ಳುವ ಜತೆಗೆ ಸಂಶೋಧನೆ, ಅನುವಾದ ಕ್ಷೇತ್ರಕ್ಕೆ ಸಮಸ್ಯೆಯಾಗಲಿದೆ.– ಡಾ| ಸಿ. ಶಿವಕುಮಾರಸ್ವಾಮಿ,  ಅಧ್ಯಕ್ಷರು, ಸಂಸ್ಕೃತ ಪ್ರಾಧ್ಯಾಪಕರ ರಾಜ್ಯ ಸಂಘ

 

-ದಿನೇಶ್‌ ಇರಾ

 

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.