ಅಮೃತ ಗ್ರಾಮ ಪಂಚಾಯತ್‌ ಯೋಜನೆಗೆ ಚಾಲನೆ:ಮಂಗಳೂರು,ಮೂಡುಬಿದಿರೆ ತಾ|:ಏಳು ಗ್ರಾ.ಪಂಗಳಲ್ಲಿ ಜಾರಿ

Team Udayavani, Sep 24, 2021, 3:30 AM IST

ಅಮೃತ ಗ್ರಾಮ ಪಂಚಾಯತ್‌ ಯೋಜನೆಗೆ ಚಾಲನೆ:ಮಂಗಳೂರು,ಮೂಡುಬಿದಿರೆ ತಾ|:ಏಳು ಗ್ರಾ.ಪಂಗಳಲ್ಲಿ ಜಾರಿ

ಮಹಾನಗರ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನೆಪಿಗಾಗಿ ಮುಖ್ಯಮಂತ್ರಿಯವರು ಘೋಷಿಸಿರುವ ಅಮೃತ ಗ್ರಾಮ ಪಂಚಾಯತ್‌ ಯೋಜನೆಗೆ ಚಾಲನೆ ದೊರಕಿದ್ದು, ಮಂಗಳೂರು ತಾಲೂಕಿನಲ್ಲಿ ಆಯ್ಕೆಯಾ ಗಿರುವ ಐದು ಗ್ರಾ.ಪಂ., ಮೂಡುಬಿದಿರೆಯ 2 ಗ್ರಾ.ಪಂ.ಗಳಲ್ಲಿ ಇದು ಆನುಷ್ಠಾನಗೊಳ್ಳುತ್ತಿದೆ.

ಮೂಡುಬಿದಿರೆ ತಾಲೂಕಿನ ಬೆಳುವಾಯಿ, ತೆಂಕಮಿಜಾರು, ಮಂಗಳೂರು ತಾಲೂಕಿನ ಬಡಗ ಎಡಪದವು, ಗಂಜೀಮಠ, ಮುನ್ನೂರು, ಹಳೆಯಂಗಡಿ, ಪೆರ್ಮುದೆ ಗ್ರಾ.ಪಂ.ಗಳನ್ನು ಅಮೃತ ಗ್ರಾ.ಪಂ. ಯೋಜನೆಗೆ ಆಯ್ಕೆ ಮಾಡಲಾಗಿದೆ. ಜಿಲ್ಲೆಯ ಒಟ್ಟು 223 ಗ್ರಾ.ಪಂ.ಗಳಲ್ಲಿ 27 ಗ್ರಾ.ಪಂ.ಗಳು ಆಯ್ಕೆಗೊಂಡಿವೆ.

ಅಮೃತ ಗಾ.ಪಂ. ಯೋಜನೆ:

ದೇಶದ 75ನೇ ಸ್ವಾತಂತ್ರ್ಯೋತ್ಸವದ ಸವಿನೆನೆಪಿಗಾಗಿ ಆ. 15ರಂದು ಧ್ವಜಾರೋಹಣ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ 750 ಗ್ರಾ.ಪಂ.ಗಳಲ್ಲಿ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಅಮೃತ ಗ್ರಾ.ಪಂ. ಯೋಜನೆಯನ್ನು ಘೋಷಿಸಿದ್ದು, ಸೆ. 23ರಂದು ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಯೋಜನೆಯಲ್ಲಿ ಏನಿದೆ ? :

ಬೀದಿ-ದೀಪಗಳ ಅಳವಡಿಕೆ, ಪ್ರತಿ ಮನೆಗೆ ಕುಡಿಯುವ ನೀರಿನ ನಳ್ಳಿ ಸಂಪರ್ಕ, ಶೇ. 100ರಷ್ಟು ಘನತ್ಯಾಜ್ಯ ವಿಂಗಡಣೆ, ವಿಲೇವಾರಿ, ತ್ಯಾಜ್ಯ ನೀರು ವೈಜ್ಞಾನಿಕವಾಗಿ ನಿರ್ವಹಿಸುವುದು, ಗ್ರಾ.ಪಂ. ಕಟ್ಟಡಗಳಿಗೆ ಸೌರ ವಿದ್ಯುತ್‌ ಅಳವಡಿಕೆ, ಅಮೃತ ಉದ್ಯಾನವನಗಳ ನಿರ್ಮಾಣ, ಗ್ರಾ.ಪಂ. ಗ್ರಂಥಾಲಯಗಳ ಡಿಜಿಟಲೀಕರಣ, ಶಾಲೆಗಳು, ಅಂಗನವಾಡಿಗಳಿಗೆ ಕುಡಿಯುವ ನೀರು, ಶೌಚಾಲಯ, ಶಾಲೆಗಳಲ್ಲಿ ಆಟದ ಮೈದಾನ, ಆವರಣ ಗೋಡೆ ನಿರ್ಮಾಣ, ಕೆರೆ, ಕಲ್ಯಾಣಿಗಳ ಪುನಶ್ಚೇತನ ಕಾರ್ಯಕ್ರಮಗಳು ಅಮೃತ ಗ್ರಾ.ಪಂ. ಯೋಜನೆಯಲ್ಲಿ ಒಳಗೊಂಡಿದೆ. ಜಲಜೀವನ್‌ ಮಿಷನ್‌, ಸ್ವತ್ಛ ಭಾರತ್‌ ಮಿಷನ್‌, ನರೇಗಾ, ಗ್ರಾ.ಪಂ. ಸ್ವಂತ ಅನುದಾನ, 15ನೇ ಹಣಕಾಸು, ಯೋಜನೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಶಾಲಾ ಕಟ್ಟಡದ ಅನುದಾನಗಳನ್ನು ಬಳಸಿಕೊಂಡು ಅನುಷ್ಠಾನಗೊಳಿಸಲಾಗುತ್ತದೆ.

ಅನುಷ್ಟಾನ:

ಅಮೃತ ಗ್ರಾ.ಪಂ.ಯೋಜನೆಯಲ್ಲಿ ಆಯ್ಕೆಗೊಂಡ ಗ್ರಾ.ಪ.ಗಳು ಕಾರ್ಯಕ್ರಮಗಳ ಪಟ್ಟಿ ತಯಾರಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಗ್ರಾಮಸಭೆಯಲ್ಲಿ ಅನುಮೋದನೆ ಪಡೆಯಲಾಗುತ್ತದೆ. ಕ್ರಿಯಾ ಯೋಜನೆಯನ್ನು ತಾಲೂಕು ಪಂಚಾಯತ್‌ ಪರಿಶೀಲನೆ ನಡೆಸಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಸಲ್ಲಿಸುತ್ತದೆ. ಜಿಲ್ಲಾ ಪಂಚಾಯತ್‌ ಕ್ರಿಯಾ ಯೋಜನೆಗೆ ಅನುಮೋದನೆ ನೀಡುತ್ತದೆ ಮತ್ತು ಯೋಜನೆ ಪ್ರಗತಿಯನ್ನು ಪರಿಶೀಲಿಸುತ್ತದೆ. ಕಾಮಗಾರಿಗಳ ಅನುಷ್ಠಾನದ ಸಂಪೂರ್ಣ ಜವಾಬ್ದಾರಿ ತಾಲೂಕು ಪಂಚಾಯತ್‌ನದ್ದಾಗಿದೆ. ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಗ್ರಾ.ಪಂ.ಗೆ 25 ಲಕ್ಷ ರೂ. ಸರಕಾರದಿಂದ ನೀಡಲಾಗುತ್ತದೆ.

ಬಂಟ್ವಾಳ ತಾಲೂಕಿನ ಸಂಗಬೆಟ್ಟು, ಇರ್ವತ್ತೂರು, ಪಿಲಾತಬೆಟ್ಟು, ಕಡೇಶ್ವಾಲ್ಯ, ಬಾಳೆಪುಣಿ, ಇಡಿRದು, ಬೆಳ್ತಂಗಡಿಯ ಮಡಂತ್ಯಾರು, ಕೊಕ್ಕಡ, ಧರ್ಮಸ್ಥಳ, ಉಜಿರೆ, ಹೊಸಂಗಡಿ, ಅಳದಂಗಡಿ, ಕಡಬದ ಸವಣೂರು, ಅಲಂಕಾರು, ಪುತ್ತೂರಿನ ಉಪ್ಪಿನಂಗಡಿ, ಆರ್ಯಾಪು, ಕಬಕ, ಸುಳ್ಯದ ಅರಂತೋಡು, ಮಂಡೆಕೋಲು, ಮರ್ಕಂಜ ಗ್ರಾಂ.ಪಂ.ಗಳು ಜಿಲ್ಲೆಯಲ್ಲಿ ಆಯ್ಕೆಗೊಂಡಿರುವ ಇತರ ಗ್ರಾ.ಪಂ.ಗಳು.

ಅಮೃತ ಗ್ರಾಮೀಣ  ವಸತಿ ಯೋಜನೆ:

ಅಮೃತ ಗ್ರಾ.ಪಂ. ಯೋಜನೆಯಲ್ಲಿ ಆಯ್ಕೆಯಾಗಿರುವ ಗ್ರಾ.ಪಂ.ಗಳಲ್ಲಿ ವಸತಿ ರಹಿತ ರಿಗೆ, ನಿವೇಶನ ರಹಿತರಿಗೆ ವಸತಿ, ನಿವೇಶನಗಳನ್ನು ನೀಡುವ ಅಮೃತ ಗ್ರಾಮೀಣ ವಸತಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಮಂಗಳೂರು ತಾಲೂಕಿ ನಲ್ಲಿ ಬಡಗ ಎಡಪದವಿನಲ್ಲಿ 181, ಗಂಜಿಮಠದಲ್ಲಿ 228, ಮುನ್ನೂರಿನಲ್ಲಿ 388, ಹಳೆಯಂಗಡಿಯಲ್ಲಿ 269, ಪೆರ್ಮುದೆಯಲ್ಲಿ 392 ನಿವೇಶನ ರಹಿತರನ್ನು ಗುರುತಿಸಲಾಗಿದೆ. ಮೂಡುಬಿದಿರೆ ತಾಲೂಕಿನಲ್ಲಿ ಬೆಳುವಾಯಿಯಲ್ಲಿ 148, ತೆಂಕ ಮಿಜಾರಿನಲ್ಲಿ 159 ನಿವೇಶನ ರಹಿತರನ್ನು ಗುರುತಿಸಲಾಗಿದೆ. ಮುನ್ನೂರಿನಲ್ಲಿ 5, ಹಳೆಯಂಗಡಿಯಲ್ಲಿ 16, ಬೆಳುವಾಯಿಯಲ್ಲಿ 45 ಹಾಗೂ ತೆಂಕಮಿಜಾರಿನಲ್ಲಿ 2 ವಸತಿ ರಹಿತರು ಇದ್ದು ಇನ್ನುಳಿದ ಗ್ರಾ,ಪಂ.ಗಳಲ್ಲಿ ವಸತಿ ರಹಿತರಿಲ್ಲ. ಇವರೆಲ್ಲರಿಗೂ ನಿವೇಶನ, ಮನೆಗಳನ್ನು ನೀಡುವ ಗುರಿಯನ್ನು ಇರಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.