ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಕಾನೂನು ಸಮರ

Team Udayavani, Sep 11, 2019, 5:39 AM IST

ಮಹಾನಗರ: ಲೋಕಾಯುಕ್ತ ಕಾಯ್ದೆಯ ಪ್ರಕಾರ ಆಸ್ತಿ ಘೋಷಣೆ ಪತ್ರವನ್ನು ಈ ಹಿಂದೆ ಸಲ್ಲಿಸದ ಮಹಾ ನಗರ ಪಾಲಿಕೆಯ ಮಾಜಿ ಸದಸ್ಯರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿ ಸಿದರೆ, ಕಾನೂನು ತೊಡಕು ಎದುರಾಗುವ ಸಾಧ್ಯತೆಯಿದೆ.

ಆಸ್ತಿ ವಿವರ ಸಲ್ಲಿಸದ ಮಹಾನಗರ ಪಾಲಿಕೆ ಮಾಜಿ ಸದಸ್ಯರು ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಂಥವರ ವಿರುದ್ಧ ಕಾನೂನು ಹೋರಾಟಕ್ಕೆ ಸಾಮಾಜಿಕ ಹೋರಾಟಗಾರರು ನಿರ್ಧರಿಸಿದ್ದಾರೆ. ಶಾಸಕರಿಂದ ಹಿಡಿದು ಪಾಲಿಕೆ ಸದಸ್ಯರವರೆಗೆ ಪ್ರತಿ ಜನ ಪ್ರತಿನಿಧಿಯೂ ಪ್ರತಿವರ್ಷ ಲೋಕಾಯುಕ್ತ ಕಾಯ್ದೆ ಪ್ರಕಾರ, ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ.

ಹೀಗಾಗಿ, ಲೋಕಾಯುಕ್ತ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಐದು ವರ್ಷದಲ್ಲಿ ಆಸ್ತಿ ವಿವರ ಸಲ್ಲಿಸದ ಮಾಜಿ ಸದಸ್ಯರ ಮೇಲೆ ಚುನಾವಣೆ ಆಯೋಗ, ಲೋಕಾಯುಕ್ತಕ್ಕೆ ದೂರು ನೀಡಲು ಕೆಲವು ಸಾಮಾಜಿಕ ಕಾರ್ಯಕರ್ತರು ಮುಂದಾಗಿದ್ದಾರೆ. ಜತೆಗೆ, ಮುಂದಿನ ಮನಪಾ ಚುನಾವಣೆಗೆ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ಕೂಡ ತಮ್ಮ ಆಸ್ತಿ ವಿವರವನ್ನು ನಿಗದಿತ ಸಮಯದಲ್ಲಿಯೂ ಚುನಾವಣೆ ಆಯೋಗಕ್ಕೆ ಸಲ್ಲಿಸಬೇಕು.

ಮೂರು ವಾರದ ಗಡುವು; ಅವಕಾಶ
ಲೋಕಾಯುಕ್ತ ಕಾಯ್ದೆಗೆ 2010ರಲ್ಲಿ ತಿದ್ದುಪಡಿ ಮಾಡಲಾಗಿದ್ದು, ತಿದ್ದುಪಡಿ ಪ್ರಕಾರ ರಾಜ್ಯದ ಎಲ್ಲ ಮಹಾನಗರ ಪಾಲಿಕೆ, ನಗರ ಪಾಲಿಕೆ, ಪುರಸಭೆಗೆ ಚುನಾಯಿತರಾಗುವ ಸದಸ್ಯರು ತಮ್ಮ ಆಸ್ತಿ ಘೋಷಣೆ ಪತ್ರವನ್ನು ಲೋಕಾಯುಕ್ತರ ಮುಂದೆ ಮಂಡಿಸಬೇಕಾಗಿತ್ತು. ಆದರೆ, 9 ವರ್ಷಗಳಿಂದ ಇದು ನಡೆದಿಲ್ಲ. ಈ ಸಂಬಂಧ ಬೆಂಗಳೂರಿನ ಸಾಮಾಜಿಕ ಹೋರಾಟಗಾರ ಎಚ್.ಎಂ. ವೆಂಕಟೇಶ್‌ ಅವರು ಲೋಕಾಯುಕ್ತಕ್ಕೆ ಇತ್ತೀಚೆಗೆ ಮನವಿ ಸಲ್ಲಿಸಿದ ಕಾರಣ ವಿಚಾರಣೆ ನಡೆಸಿದ ಲೋಕಾಯುಕ್ತರು, ಎಲ್ಲ ಚುನಾಯಿತ ಸದಸ್ಯರು ತಮ್ಮ ಆಸ್ತಿ ಘೋಷಣೆ ಮಾಡುವಂತೆ ಆ. 28ರಿಂದ ಮೂರು ವಾರಗಳ ಗಡುವು ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಕಾರ್ಯಕರ್ತರನ್ನು ಒಳಗೊಂಡ ನಿಯೋಗವು ಮಂಗಳೂರು ಪಾಲಿಕೆಗೆ ಸೋಮವಾರ ಭೇಟಿ ನೀಡಿ ಮನಪಾ ಉಪಆಯುಕ್ತೆ ಗಾಯತ್ರಿ ನಾಯಕ್‌ ಅವರನ್ನು ಭೇಟಿ ಯಾಗಿ ಲೋಕಾಯುಕ್ತ ಆದೇಶ ಪ್ರತಿಯನ್ನು ನೀಡಿದ್ದಾರೆ. ಈಗಾಗಲೇ ಅವಧಿ ಮುಗಿದಿರುವ 60 ಸದಸ್ಯರ ಗಮನಕ್ಕೂ ಈ ಆದೇಶವನ್ನು ಪಾಲಿ ಸು ವಂತೆ ಪತ್ರ ಬರೆಯುವ ಬಗ್ಗೆ ಮನವಿ ಮಾಡಿದ್ದಾರೆ.

ಒಂದು ವೇಳೆ ಪಾಲಿಸದಿದ್ದರೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇರುವ ಮಾಜಿ ಮನಪಾ ಸದಸ್ಯರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಉಲ್ಲೇಖೀಸಲಾಗಿದೆ.

ಮಾಜಿ ಸದಸ್ಯರೂ ಆಸ್ತಿ ವಿವರ ಸಲ್ಲಿಸಬೇಕು

ಲೋಕಾಯುಕ್ತ ಕಾಯ್ದೆಯ ಪ್ರಕಾರ ಮನಪಾದ ಈ ಹಿಂದಿನ ಸದಸ್ಯರು ಕೂಡ ತಮ್ಮ ಆಸ್ತಿ ಘೋಷಣೆ ಮಾಡಬೇಕಿತ್ತು. ಆದರೆ ಯಾರೂ ಮಾಡಿರಲಿಲ್ಲ. ತತ್‌ಕ್ಷಣವೇ ಅವಧಿ ಮುಗಿದಿರುವ ಸದಸ್ಯರು ನಿಗದಿತ ದಿನದೊಳಗೆ ಆಸ್ತಿ ಘೋಷಣೆ ಮಾಡಬೇಕು. ಇಲ್ಲವಾದರೆ, ಮುಂದಿನ ಚುನಾವಣೆಗೆ ಸ್ಪರ್ಧಿಸುವ ಮಾಜಿ ಕಾರ್ಪೊರೇಟರ್‌ಗಳ ವಿರುದ್ಧ ಲೋಕಾಯುಕ್ತ, ಚುನಾವಣೆ ಆಯೋಗಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ.
– ಎಚ್.ಎಂ. ವೆಂಕಟೇಶ್‌, ಸಾಮಾಜಿಕ ಹೋರಾಟಗಾರರು.

 
ಆಸ್ತಿ ವಿವರ ಸಲ್ಲಿಸಿ

ಲೋಕಾಯುಕ್ತ ಕಾಯ್ದೆ ಪ್ರಕಾರ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆ ಸದಸ್ಯರು ಆಸ್ತಿ ವಿವರ ಸಲ್ಲಿಸಬೇಕು. ಕಾರ್ಪೊರೇಟರ್‌ಗಳು, ಕೌನ್ಸಿಲರ್‌ಗಳು ಮೂರು ವಾರದೊಳಗೆ ತಮ್ಮ ಆಸ್ತಿ ವಿವರ ಸಲ್ಲಿಸಬೇಕು ಎಂದು ಈಗಾಗಲೇ ಆದೇಶ ನೀಡಲಾಗಿದೆ. ಅವಧಿ ಮುಗಿದಿರುವ ಪಾಲಿಕೆ ಸದಸ್ಯರು ಆಸ್ತಿ ವಿವರ ನೀಡುವ ವಿಚಾರದ ಬಗ್ಗೆ ಪರಿಶೀಲಿಸಲಾಗುವುದು.
– ಪಿ. ವಿಶ್ವನಾಥ ಶೆಟ್ಟಿ, ಲೋಕಾಯುಕ್ತ ನ್ಯಾಯಮೂರ್ತಿಗಳು

ದಿನೇಶ್‌ ಇರಾ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ