ಉಕ್ಕಿನ ನಿರ್ಧಾರದಿಂದ ಇಂದು ಜೀವನ ನೆಮ್ಮದಿ

Team Udayavani, Nov 1, 2018, 11:19 AM IST

1-november-5.gif

ಪುತ್ತೂರು: ಭಾರತದ ಅಖಂಡತೆಯ ಕಲ್ಪನೆ ಹೊತ್ತು ನಿಂತ ಧೀಮಂತ ವ್ಯಕ್ತಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌. ಇಂದು ನಾವು ನೆಮ್ಮದಿಯ ಜೀವನ ನಡೆಸಲು ಅಂದು ಅವರು ಕೈಗೊಂಡ ಉಕ್ಕಿನ ನಿರ್ಧಾರಗಳೇ ಕಾರಣ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 143ನೇ ಜಯಂತಿ ಅಂಗವಾಗಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ರಾಷ್ಟ್ರೀಯ ಏಕತಾ ಓಟ ಸಂಚಾಲನ ಸಮಿತಿಯಿಂದ ಅ. 31ರಂದು ನಡೆದ ರಾಷ್ಟ್ರೀಯ ಏಕತಾ ಓಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ನಮ್ಮ ನೆಮ್ಮದಿಯ ಜೀವನಕ್ಕಾಗಿ ಶ್ರಮಿಸಿದ ಸರ್ದಾರ್‌ ಪಟೇಲರು ನಿತ್ಯ ನಿರಂತರ ನಮ್ಮ ಕಣ್ಣ ಮುಂದಿರಬೇಕು ಎನ್ನುವ ಉದ್ದೇಶದಿಂದ ಬೃಹತ್‌ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ರೈತರು, ಶ್ರಮ ಜೀವಿಗಳಿಂದ ಸಂಗ್ರಹಿಸಿದ ಕಬ್ಬಿಣ ಗಳಿಂದ ಅವರ ಪುತ್ಥಳಿಯನ್ನು ರಚಿಸಲಾಗಿದೆ ಎಂದರು.

ಪಟೇಲ್‌ ನೆನಪಿಗೆ ಏಕತಾ ಓಟ
ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ದೇಶದ ಏಕತೆಗೆ ಶ್ರಮಿಸಿದ ಸರ್ದಾರ್‌ ವಲ್ಲಭ ಬಾಯ್‌ ಪಟೇಲ್‌ ಅವರು ಯಾವುದೇ ಕ್ರಾಂತಿಯಿಲ್ಲದೆ ದೇಶವನ್ನು ಒಗ್ಗೂಡಿಸಿದ್ದಾರೆ. ದೇಶದ ಅಖಂಡತೆಗಾಗಿ ಅವರು ಸಲ್ಲಿಸಿದ ಸೇವೆಯನ್ನು ದೇಶದ ಪ್ರಜೆಗಳಿಗೆ ನೆನೆಪಿಸುವ ಉದ್ದೇಶದಿಂದ ಏಕತಾ ಓಟ ಆಯೋಜಿಸಲಾಗಿದೆ ಎಂದರು.

ಆಂಜನೇಯ ಮಂತ್ರಾಲಯದ ಬಳಿಯಿಂದ ಹೊರಟ ರಾಷ್ಟ್ರೀಯ ಏಕತಾ ಓಟಕ್ಕೆ ಕ್ಯಾಂಪ್ಕೋ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ ಅವರು ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮುಖ್ಯ ರಸ್ತೆಯ ಮೂಲಕ ಸಾಗಿ ದರ್ಬೆ ವೃತ್ತದ ಬಳಿ ಸಮಾಪನಗೊಂಡಿತು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸದಸ್ಯೆ ಶಯನಾ ಜಯಾನಂದ, ತಾ.ಪಂ. ಸದಸ್ಯ ಶಿವರಂಜನ್‌, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಮುಕುಂದ, ಹರೀಶ್‌ ಬಿಜತ್ರೆ, ಜಿ.ಪಂ. ಮಾಜಿ ಸದಸ್ಯ ಕೇಶವ ಗೌಡ ಬಜತ್ತೂರು, ನಗರಸಭೆ ಸದಸ್ಯರಾದ ಪಿ.ಜಿ. ಜಗನ್ನಿವಾಸ ರಾವ್‌, ಭಾಮಿ ಅಶೋಕ್‌ ಶೆಣೈ, ಪೂರ್ಣಿಮಾ, ವಿದ್ಯಾ ಗೌರಿ, ಮೋಹಿನಿ, ಇಂದಿರಾ ಪುರುಷೋತ್ತಮ, ಲೀಲಾವತಿ, ಮಮತಾ ರಂಜನ್‌, ದೀಕ್ಷಾ ಪೈ, ಗೌರಿ ಬನ್ನೂರು, ರೋಟರಿ ಕ್ಲಬ್‌ ಅಧ್ಯಕ್ಷ ವಾಮನ ಪೈ, ತಾ.ಪಂ. ಮಾಜಿ ಅಧ್ಯಕ್ಷ ಜಯಾನಂದ ಕೋಡಿಂಬಾಡಿ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶಂಭು ಭಟ್‌, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಜೀವಂಧರ್‌ ಜೈನ್‌, ಕಾರ್ಯದರ್ಶಿ ರಾಮದಾಸ ಹಾರಾಡಿ, ಅನೀಶ್‌ ಬಡೆಕ್ಕಿಲ, ಪೂವಪ್ಪ ದೇಂತಡ್ಕ, ನವೀನ್‌ ಪಟ್ನೂರು, ಅಜಿತ್‌ ರೈ ಹೊಸಮನೆ, ರತ್ನಾಕರ ಪ್ರಭು, ರಾಮಚಂದ್ರ ಪೂಜಾರಿ ಉಪಸ್ಥಿತರಿದ್ದರು. ಹಾಗೆಯೇ ಪ್ರಗತಿ ಸ್ಟಡಿ ಸೆಂಟರ್‌ನ ವಿದ್ಯಾರ್ಥಿಗಳು, ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು ಏಕತಾ ಓಟದಲ್ಲಿ ಪಾಲ್ಗೊಂಡಿದ್ದರು. ಯುವ ಮೋರ್ಚಾ ಅಧ್ಯಕ್ಷ ಸುನೀಲ್‌ ದಡ್ಡು ಸ್ವಾಗತಿಸಿದರು. ಉಪಾಧ್ಯಕ್ಷ ಸಂತೋಷ್‌ ರೈ ಕೈಕಾರ ನಿರೂಪಿಸಿ, ಕಾರ್ಯದರ್ಶಿ ಯುವರಾಜ ಪೆರಿಯತ್ತೋಡಿ ವಂದಿಸಿದರು.

ಅಖಂಡ ಭಾರತ ನಿರ್ಮಾಣ
560 ರಾಜ್ಯಗಳನ್ನು ಒಟ್ಟುಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಿದ್ದಾರೆ. ಅವರ ಹುಟ್ಟುಹಬ್ಬ ದೇಶದ ಜನತೆಗೆ ಏಕತೆಯ ಸಂದೇಶ ನೀಡುವಂತಾಗಬೇಕು. ಉಕ್ಕಿನ ಮನಸ್ಸಿನ ವ್ಯಕ್ತಿಯಾಗಿರುವ ಪಟೇಲ್‌ ಉಕ್ಕಿನ ವ್ಯಕ್ತಿಯಾಗಿ ಜಗತ್ತಿಗೆ ಪರಿಚಯಿಸಲ್ಪಟ್ಟಿದ್ದಾರೆ. ದೇಶದ ಏಕತೆಗಾಗಿ ತನ್ನ ಸರ್ವಸ್ವವನ್ನು ಮುಡಿಪಾಗಿಟ್ಟವರು. ಸ್ವಾತಂತ್ರ್ಯ  ಹೋರಾಟದಲ್ಲಿ ಭಾಗವಹಿಸಿ, ಪ್ರಥಮ ಗೃಹ ಸಚಿವರಾಗಿ, ಉಪ ಪ್ರಧಾನಿ ಯಾಗಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು ಎಂದು ಶಾಸಕರು ಹೇಳಿದರು. 

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.