ವಿದ್ಯುತ್‌, ನೀರು: ಚುನಾವಣಾ ಭರವಸೆ ಈಡೇರಿಕೆ : ಪ್ರಮೋದ್‌

Team Udayavani, Feb 3, 2018, 9:00 AM IST

Pramod-2-2.jpg

ಉಡುಪಿ: ಉಡುಪಿಗೆ ನಿರಂತರ ವಿದ್ಯುತ್‌ ಮತ್ತು ನೀರು ಪೂರೈಕೆ ಮಾಡುವುದಾಗಿ ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಭರವಸೆ ನೀಡಿದ್ದೆ. ಅದರಂತೆ ಉಡುಪಿ ತಾಲೂಕಿಗೆ ನಿರಂತರ 24 ಗಂಟೆ ವಿದ್ಯುತ್‌ ಒದಗಿಸಲಾಗಿದೆ. ಇದೀಗ ವಾರಾಹಿಯಿಂದ ಉಡುಪಿಗೆ ಕುಡಿಯುವ ನೀರಿನ ಪೂರೈಕೆ ಯೋಜನೆ ಕಾರ್ಯಗತಗೊಳ್ಳಲಿದ್ದು ಎರಡೂ ಭರವಸೆ ಈಡೇರಿದಂತಾಗಲಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ. ವಾರಾಹಿ ನದಿಯಿಂದ ಉಡುಪಿಗೆ ಕುಡಿಯುವ ನೀರು ಪೂರೈಕೆ ಯೋಜನೆಯ ಅನುಷ್ಠಾನದ ಪೂರ್ವಭಾವಿಯಾಗಿ ಫೆ.2ರಂದು ಉಡುಪಿ ನಗರ ಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಜರಗಿದ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಈಗ ಉಡುಪಿ ನಗರಕ್ಕೆ ಸ್ವರ್ಣಾ ನದಿಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಇದರಿಂದ 365 ದಿನಗಳು ಕೂಡ ನೀರು ಪೂರೈಕೆ ಮಾಡಲು ಅಸಾಧ್ಯವಾಗಿದೆ. ಈ ಹಿಂದೆ ಸ್ವರ್ಣಾ ಎರಡನೇ ಹಂತದ ಯೋಜನೆ ಮಾಡುವ ಸಂದರ್ಭವೇ ಯೋಜನೆಯ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ಇದರಿಂದ ನೀರು ಪೂರೈಕೆ ಪೂರ್ಣಪ್ರಮಾಣದಲ್ಲಿ ಸಾಧ್ಯವಿಲ್ಲ ಎಂಬ ಮಾತು ಕೇಳಿ ಬಂದಿತ್ತು. ಆದರೆ ಕೆಲವು ಜನಪ್ರತಿನಿಧಿಗಳು ಸ್ವರ್ಣೆ ನಮ್ಮ ನದಿ ಎಂಬ ಭಾವನಾತ್ಮಕ ವಿಚಾರ ಮುಂದಿಟ್ಟು ಎರಡನೇ ಯೋಜನೆ ಅನುಷ್ಠಾನಗೊಳಿಸಿದರು. ಆದರೆ ಈಗ ವಾರಾಹಿಯಿಂದ ನೀರು ತರುವುದು ಅನಿವಾರ್ಯವಾಗಿದೆ. ಅಮೃತ್‌ ಯೋಜನೆ ಮತ್ತು ಎಡಿಬಿಯಿಂದ ಕುಡಿಯುವ ನೀರು ಪೂರೈಕೆ ಮತ್ತು ಒಳಚರಂಡಿ ಕಾಮಗಾರಿಗೆ 370 ಕೋ.ರೂ. ಬಿಡುಗಡೆಯಾಗಲಿದೆ ಎಂದು ಸಚಿವರು ಹೇಳಿದರು.

ಅಧಿಕಾರಿಗಳ ನಡುವೆ ಸಮಾಲೋಚನೆ !  
ವಾರಾಹಿಯಿಂದ ಉಡುಪಿಗೆ ನೀರು ತರುವ ಈ ಯೋಜನೆಯ ಸಾಧಕ ಬಾಧಕಗಳ ಕುರಿತು ಸಾರ್ವಜನಿಕ ಅಭಿಪ್ರಾಯ ಪಡೆದು ಆ ವರದಿಯನ್ನು ಸರಕಾರಕ್ಕೆ ಕಳುಹಿಸಿಕೊಡುವ ಉದ್ದೇಶದಿಂದ ಈ ಸಮಾಲೋಚನ ಸಭೆ ಕರೆಯಲಾಗಿತ್ತು. ನಗರಸಭೆಯ ಅಧಿವೇಶನ ಜರಗುವ ಸಭಾಂಗಣದಲ್ಲೇ ಆಯೋಜಿಸಲಾಗಿತ್ತು. ಸೀಮಿತ ಸಂಖ್ಯೆಯ ಆಸನಗಳಿದ್ದವು. ಆದರೆ ಅವುಗಳು ಕೂಡ ಭರ್ತಿಯಾಗಿರಲಿಲ್ಲ.

ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಪೌರಾಯುಕ್ತ ಮಂಜುನಾಥಯ್ಯ, ನಗರಸಭೆ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು. 

30 ತಿಂಗಳಲ್ಲಿ ಪೂರ್ಣ 
ವಾರಾಹಿಯಿಂದ ಉಡುಪಿ ಸ್ವರ್ಣೆ ಅಣೆಕಟ್ಟಿನವರೆಗೆ ಪೈಪ್‌ ಲೈನ್‌ ಮೂಲಕ ನೀರು ತಂದು ಅಲ್ಲಿ ಶುದ್ಧೀಕರಣ ಮಾಡಿ ವಿತರಣೆ ಮಾಡುವ ಯೋಜನೆ ಇದಾಗಿದ್ದು ಒಟ್ಟು 38 ಕಿ.ಮೀ. ಪೈಪ್‌ಲೈನ್‌ ಅಳವಡಿಸಲಾಗುವುದು. ಅಗತ್ಯ ಇರುವಲ್ಲಿ ಜನರ ಮನವೊಲಿಸಿ ಭೂ ಸ್ವಾಧೀನ ಮಾಡಲಾಗುವುದು. ಬಹುತೇಕ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ಜಿ.ಪಂ. ರಸ್ತೆಗಳ ಪಕ್ಕದಲ್ಲೇ ಪೈಪ್‌ಲೈನ್‌ ಅಳವಡಿಸಲಾಗುವುದು. ಯೋಜನೆಗೆ ಟೆಂಡರ್‌ ಪ್ರಕ್ರಿಯೆ
ನಡೆಯುತ್ತಿದ್ದು ಈ ವರ್ಷದ ಮೇ ತಿಂಗಳಿನಲ್ಲಿ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆ ಇದೆ. ಅನಂತರದ 30 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಕೆಯುಐಡಿಎಫ್ಸಿ ಸಮನ್ವಯಾಧಿಕಾರಿ ಪ್ರಭಾಕರ ಶರ್ಮ ತಿಳಿಸಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.