‘ಯೋಜನೆಯಡಿ 93 ಲ.ರೂ. ಖರ್ಚು, ಜಿಲ್ಲೆಯಲ್ಲಿ ಪ್ರಥಮ ‘
Team Udayavani, Jul 4, 2017, 3:25 AM IST
ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾ.ಪಂ.ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ ಗ್ರಾ.ಪಂ. ಅಂಬೇಡ್ಕರ್ ಭವನದಲ್ಲಿ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಹಮ್ಮಬ್ಬ ಶೌಖತ್ ಅಲಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ನ ಪ್ರಭಾರ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 93 ಲಕ್ಷ ರೂ. ಖರ್ಚಾಗಿದ್ದು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ.
ಫಲಾನುಭವಿಗಳ ಸಹಕಾರದಿಂದ ಗ್ರಾ.ಪಂ. ಈ ಸಾಧನೆ ಮಾಡಿದೆ ಎಂದರು. ಜಲ ಮರುಪೂರಣ, ಶಾಶ್ವತ ಕಾಮಗಾರಿಗಳಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ಅವಕಾಶವಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಹೆಚ್ಚು ಹೆಚ್ಚು ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವಂತೆ ಹೇಳಿದರು. ಪ್ರತಿಯೊಬ್ಬರು ಉದ್ಯೋಗ ಖಾತರಿಯ ಯೋಜನೆಯ ಅನುದಾನ ಸದ್ಬಳಕೆ ಮಾಡಿಕೊಂಡು ರಾಜ್ಯದಲ್ಲಿ ಹಿರೇಬಂಡಾಡಿ ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಪ್ರಥಮ ಸ್ಥಾನ ಪಡೆಯುವಂತಾಗಲಿ ಎಂದರು. ಭತ್ತದ ಕೃಷಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ಅವಕಾಶ ನೀಡಬೇಕು ಹಾಗೂ ಹಟ್ಟಿ ರಚನೆಗೆ ಇರುವ ಅನುದಾನ ಹೆಚ್ಚಿಸಬೇಕೆಂದು ಉದ್ಯೋಗ ಚೀಟಿದಾರರಾದ ಸುಲೈಮಾನ್, ವಾಮನ ಕೆಮ್ಮಾರ ಒತ್ತಾಯಿಸಿದರು. ಈ ಬಗ್ಗೆ ಸರಕಾರಕ್ಕೆ ಬರೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು.
ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಉಷಾ ಲಕ್ಷ್ಮೀಶ ನಿಡ್ಡೆಂಕಿ, ಎಂಜಿನಿಯರ್ ವಿನೋದ್ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಪಂ. ಸದಸ್ಯರಾದ ನಿತಿನ್ ತಾರಿತ್ತಡಿ, ವಿಶ್ವನಾಥ ಕೆಮ್ಮಾಟೆ, ಸದಾನಂದ ಶೆಟ್ಟಿ ಅಡೆಕ್ಕಾಲ್, ಮುದ್ದ ಅಗರಿತೋಟ, ಮಾಲತಿ ಹರಿನಾರಾಯಣ, ವಸಂತಿ ಶಾಖೆಪುರ, ಚಂದ್ರಾವತಿ ನೆಹರೂತೋಟ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಗ್ರಾ.ಪಂ. ಕಾರ್ಯದರ್ಶಿ ಭವಾನಿ ಸ್ವಾಗತಿಸಿ ವಂದಿಸಿದರು. ಗ್ರಾ.ಪಂ. ಸಿಬಂದಿ ಸೋಮನಾಥ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ ಉದಯ ಚೌಟ ಇನ್ನಿಲ್ಲ
ಅಡಿಕೆ ಎಲೆ ಹಳದಿ ರೋಗ: ಸರಕಾರದ ನಿರ್ಲಕ್ಷ್ಯ: ಹರಿಪ್ರಸಾದ್
ತಾಲೂಕು ಮಟ್ಟದ ಶೈಕ್ಷಣಿಕ ಸೌಲಭ್ಯಗಳ ವಿತರಣೆ: ಮಾತೃಭಾಷಾ ಶಿಕ್ಷಣಕ್ಕೆ ಮಾದರಿ ಶಾಲೆ: ನಾಗೇಶ್
ಪಠ್ಯ ವಿಚಾರದಲ್ಲಿ ರಾಜಕೀಯ ದುರ್ಲಾಭಕ್ಕೆ ಕಾಂಗ್ರೆಸ್ ಯತ್ನ: ಸಚಿವ ನಾಗೇಶ್
ಅಪಘಾತಕ್ಕೀಡಾದರೂ ಪರೀಕ್ಷೆ ಬರೆದು ಗೆದ್ದಳು
MUST WATCH
ಹೊಸ ಸೇರ್ಪಡೆ
ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ ಉದಯ ಚೌಟ ಇನ್ನಿಲ್ಲ
ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ
ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು
ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ
ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ