ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಸಂಶೋಧನೆಗೆ ವಿಪುಲ ಅವಕಾಶ: ಡಾ| ಮಣಿ


Team Udayavani, Mar 30, 2017, 4:31 PM IST

mani.jpg

ದರ್ಬೆ : ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಸಂಶೋಧನೆಗೆ ವಿಪುಲ ಅವಕಾಶಗಳಿವೆ. ನಾವು ಅಧ್ಯಯನ ಮಾಡುವ ವಿಷಯದಲ್ಲಿ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಸದಾ ಉತ್ಸುಕ ರಾಗಿರಬೇಕು ಎಂದು ಚೆನ್ನೈ ಮೆಥಮ್ಯಾಟಿಕಲ್‌ ಇನ್‌ಸ್ಟಿಟ್ಯೂಟ್‌ನ ಭೌತಶಾಸ್ತ್ರದ ಹಂಗಾಮಿ ಪ್ರಾಧ್ಯಾಪಕ ಡಾ| ಎಚ್‌.ಎಸ್‌. ಮಣಿ ಅವರು ಹೇಳಿದರು.

ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗವು ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಸಂಶೋಧನ ಮಂಡಳಿ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನ ಮಂಡಳಿಯ ಪ್ರಾಯೋಜಕತ್ವದಲ್ಲಿ ಕ್ವಾಂಟಮ್‌ ಕ್ಷೇತ್ರ ಸಿದ್ಧಾಂತ ಮತ್ತು ಅನ್ವಯಗಳು ಕುರಿತು ಆಯೋಜಿಸಿದ ರಾಷ್ಟ್ರೀಯ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು.

ವಿಜ್ಞಾನ ಕ್ಷೇತ್ರದಲ್ಲಿ ಭೌತಶಾಸ್ತ್ರವು ಪ್ರಮುಖ ಆಸಕ್ತಿದಾಯಕ ವಿಷಯವಾಗಿದೆ. ಲೀನಿಯರ್‌ ವೆಕ್ಟರ್‌ ಸ್ಪೇಸ್‌ ಮತ್ತು ಸಿಂಪಲ್‌ ಹಾರ್ಮೋನಿಕ್‌ ಮೋಶನ್‌ ಪರಿಕಲ್ಪನೆಗಳ ಕುರಿತು ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸಬೇಕು. ಪ್ರಯೋಗಗಳನ್ನು ತೀರಾ ಯಾಂತ್ರಿಕ ವಾಗಿ ಮಾಡುವ ಬದಲಿಗೆ ಅದರ ಹಿಂದಿನ ಪರಿಕಲ್ಪನೆ ಮತ್ತು ನಿಯಮಗಳ ಕುರಿತು ಸರಿಯಾಗಿ ತಿಳಿದುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಹೊಸ ವಿಷಯ ಅರಿಯಲು ಅನುಕೂಲ
ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ| ಕೆ.ಬಿ. ವಿಜಯ ಕುಮಾರ್‌ ಮಾತನಾಡಿ, ಸ್ನಾತಕೋತ್ತರ ಕೇಂದ್ರಗಳಲ್ಲಿ ಇಂತಹ ಕಾರ್ಯಾಗಾರಗಳನ್ನು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳು ಬಹಳಷ್ಟು ಹೊಸ ಹೊಸ ವಿಷಯಗಳನ್ನು ಅರಿತುಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಧನಾತ್ಮಕತೆ ಮುಖ್ಯ
ಗೌರವ ಅತಿಥಿಯಾಗಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೊ ನೊರೊನ್ಹ ಮಾತನಾಡಿ, ಅಧ್ಯಯನ ಮತ್ತು ಸಂಶೋ ಧನೆಗಳ ಮೂಲಕ ಗಳಿಸುವ ಜ್ಞಾನವನ್ನು ಸಮಾಜದ ಒಳಿತಿಗೆ ಅಳವಡಿಸಬೇಕು. ವಿವಿಯಲ್ಲಿ ವಿವಿಧ ಕ್ಷೇತ್ರಗಳ ಕುರಿತು ಜ್ಞಾನ ಸಂಪಾದನೆ ಮಾಡುವುದು ಮುಖ್ಯವಾಗಿರದೆ, ಅದನ್ನು ಧನಾತ್ಮಕ ವಾಗಿ ಬಳಸುವುದು ಮುಖ್ಯವಾಗಿರುತ್ತದೆ ಎಂದು ಹೇಳಿದರು.

ದೃಢ ಸಂಕಲ್ಪ ಬೇಕು
ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ಹಾಗೂ ಕ್ಯಾಂಪಸ್‌ ನಿರ್ದೇಶಕರಾದ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೆರೊ ಮಾತನಾಡಿ, ವಿಜ್ಞಾನ ಕ್ಷೇತ್ರದಲ್ಲಿ ಪ್ರಖ್ಯಾತಿಯನ್ನು ಗಳಿಸಲು ಸತತ ಅಧ್ಯಯನ ಮತ್ತು ಪರಿಶ್ರಮ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ದೃಢ ಸಂಕಲ್ಪವನ್ನು ಹೊಂದಿರಬೇಕು ಎಂದು ಹೇಳಿದರು.

ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕ ಡಾ| ಇ. ದೀಪಕ್‌ ಡಿ’ಸಿಲ್ವ ಸ್ವಾಗತಿಸಿ, ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಎ.ಪಿ. ರಾಧಾಕೃಷ್ಣ ವಂದಿಸಿದರು. ವಿದ್ಯಾರ್ಥಿನಿ ಜೋಯ್ಲಿನ್‌ ಎಂ. ರೋಡ್ರಿಗಸ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.