ಭರವಸೆಯಲ್ಲೇ ಕೊಚ್ಚಿ ಹೋದ ಮಡಂತ್ಯಾರು -ಕೊಮಿನಡ್ಕ ರಸ್ತೆ


Team Udayavani, Jul 28, 2017, 8:50 AM IST

Kominadka-Road-27-7.jpg

ಮಳೆಗಾಲದಲ್ಲಿ ರಸ್ತೆ ಹೊಂಡಮಯ, ಪಾದಚಾರಿಗಳದ್ದೂ ಪಾಡು; ತುರ್ತು ಕ್ರಮಕ್ಕೆ ಒತ್ತಾಯ

ಮಡಂತ್ಯಾರು: ಮಡಂತ್ಯಾರು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆಯಾದರೂ ಇಲ್ಲಿ ಮೂಲ ಸೌಕರ್ಯಗಳಲ್ಲಿ ಒಂದಾದ ರಸ್ತೆ ಅಭಿವೃದ್ಧಿ ಮಾತ್ರ ಹಿಂದುಳಿದಿದೆ. ಇದಕ್ಕೆ ಪ್ರಸ್ತುತ ಮಡಂತ್ಯಾರು – ಕೊಮಿನಡ್ಕ ರಸ್ತೆಯನ್ನು ಉದಾಹರಿಸಬಹುದು. ಈ ರಸ್ತೆ ಹದಗೆಟ್ಟು ಹಲವು ವರ್ಷಗಳಾದವು. ಜನರು ಜನಪ್ರತಿನಿಧಿಗಳ ಭರವಸೆಯ ಮಾತಿಗೆ ಬೆಲೆಕೊಟ್ಟು ಇಂದಿಗೂ ಸುಮ್ಮನೆ ಕೂತಿದ್ದಾರೆ. ಈ ಬಾರಿಯ ಮಳೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ರಸ್ತೆ ತುಂಬೆಲ್ಲಾ ಬರೀ ಹೊಂಡಗಳೇ ಕಾಣುತ್ತಿವೆ. ಹಲವು ವರ್ಷಗಳಿಂದ ಭರವಸೆಯ ಮಾತುಗಳು ಕೇಳಿಬರುತ್ತಿವೆ. ಕಳೆದ ಬೇಸಗೆಯಲ್ಲಿ ದುರಸ್ತಿ ಮಾಡಲಾಗುವುದು ಎನ್ನುವ ಭರವಸೆ ಹಾಗೆಯೇ ಉಳಿದು ಹೋಯಿತು. ಮತ್ತೆ ಮಳೆಗಾಲ ಬಂತು. ಮಳೆಯ ನೆಪದಿಂದ ಕೆಲಸ ನಡೆದಿಲ್ಲ. ಈಗ ಮತ್ತೂಂದು ವರ್ಷ ಕಳೆಯುವುದು ನಿಶ್ಚಿತ ಎಂಬುದು ಸ್ಥಳೀಯರ ಅಸಮಾಧಾನ.

ಅನುದಾನ ಕೊರತೆ
ಮಡಂತ್ಯಾರು  – ಕೊಮಿನಡ್ಕ – ಪಾಂಡವರ ಕಲ್ಲು ರಸ್ತೆ ಜಿ.ಪಂ. ರಸ್ತೆಯಾಗಿದ್ದು ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೇರಿ ಪಿಡಬ್ಲ್ಯುಡಿಗೆ ಸೇರ್ಪಡೆಯಾಗಲಿದೆ ಎಂಬ ಮಾಹಿತಿ ಇದೆ. ಆದರೆ ಇದುವರೆಗೆ ಈ ಪ್ರಸ್ತಾವನೆ ಅನುಮೋದನೆಗೊಂಡಿಲ್ಲ. ಇದರ ದುರಸ್ತಿಗೆ ಅನುದಾನದ ಕೊರತೆ ಇದೆ ಎಂದು ಜಿ.ಪಂ. ಕೈಚೆಲ್ಲಿದೆ. ಸದ್ಯ ತೇಪೆ ಹಾಕುವ ಕೆಲಸವನ್ನಾದರೂ ಮಾಡಿ, ಮುಂದೆ ಪೂರ್ಣ ಕಾಮಗಾರಿ ಮಾಡಿ ಎಂದು ಕೇಳುವ ಸ್ಥಿತಿ ಜನತೆಯದ್ದು.

ಬೆಳ್ತಂಗಡಿ ಭಾಗ ಬಾಕಿ 
ಈ ರಸ್ತೆ ಎರಡು ತಾಲೂಕುಗಳ ವ್ಯಾಪ್ತಿಯಲ್ಲಿದೆ. ಬಂಟ್ವಾಳ ತಾ| ವ್ಯಾಪ್ತಿಯಲ್ಲಿ ರಸ್ತೆಯ ಡಾಮರು ಕಾಮಗಾರಿ ಆಗಿದೆ. ಆದರೆ  ಬೆಳ್ತಂಗಡಿ ತಾಲೂಕಿನ ಭಾಗ ಮಾತ್ರ ಬಾಕಿಯಾಗಿದೆ. ಇದಕ್ಕೂ ತಾಲೂಕಿನ ಗಡಿ ಗೊಂದಲವಾಯಿತೆ ಎಂದು ಜನತೆ ಪ್ರಶ್ನಿಸುತ್ತಿದ್ದಾರೆ. 

ಶಾಲೆ, ಪುಣ್ಯಕ್ಷೇತ್ರಗಳ ಹಾದಿ 
ಮಡಂತ್ಯಾರು, ಪುಂಜಾಲಕಟ್ಟೆ, ಬೆಳ್ತಂಗಡಿ, ಉಜಿರೆ ಮೊದಲಾದೆಡೆಯ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಈ ರಸ್ತೆಯನ್ನು ಬಳಸುತ್ತಾರೆ. ಕೆಸರಿನಿಂದ ಕೂಡಿದ ರಸ್ತೆ ನಡೆದುಕೊಂಡು ಹೋಗುವವರಿಗೂ ಅಯೋಗ್ಯವಾಗಿದೆ. ಪಾರೆಂಕಿ, ನಡುಬೊಟ್ಟು, ಮಡವು ಮೊದಲಾದ ಪುಣ್ಯ ಕ್ಷೇತ್ರಗಳಿಗೂ ಇದು ಸಂಪರ್ಕ ರಸ್ತೆಯಾಗಿದೆ. ಶೀಘ್ರ ದುರಸ್ತಿ, ಅಭಿವೃದ್ಧಿ ಅತ್ಯಗತ್ಯವಾಗಿದೆ. ಮುಂದಿನ ಮಳೆಗಾಲದವರೆಗೆ ಮೀನ ಮೇಷ ಎಣಿಸದೆ ಸರಕಾರ, ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಈ ರಸ್ತೆ ಬಳಕೆದಾರರು ಒತ್ತಾಯಿಸಿದ್ದಾರೆ.

ಶಾಸಕ ಬಂಗೇರ ಭರವಸೆ 
ಮಡಂತ್ಯಾರು – ಪಾಂಡವರಕಲ್ಲು ರಸ್ತೆ ಜಿಲ್ಲಾ ಪಂಚಾಯತ್‌ ರಸ್ತೆಯಾಗಿದ್ದು ಪಿಡಬ್ಲ್ಯುಡಿ ಅನುಮೋದನೆಗೆ ಕಳುಹಿಸಲಾಗಿದೆ. ಅನುಮೋದನೆಗೊಂಡ ತತ್‌ಕ್ಷಣ ಕಾಮಗಾರಿ ನಡೆಸಲಾಗುವುದು. ಮಳೆಗಾಲವಾದ ಕಾರಣ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ತಾತ್ಕಾಲಿಕ ವ್ಯವಸ್ಥೆ ಮಾಡುವ ಬಗ್ಗೆ ಸಂಬಂಧಪಟ್ಟವರಿಗೆ ಸೂಚಿಸುತ್ತೇನೆ.
– ಕೆ. ವಸಂತ ಬಂಗೇರ, ಶಾಸಕರು,  ಬೆಳ್ತಂಗಡಿ

— ಪ್ರಮೋದ್‌ ಬಳ್ಳಮಂಜ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.