
ಫಾಝಿಲ್ ಹತ್ಯೆ: 21 ಮಂದಿ ಪೊಲೀಸ್ ವಶಕ್ಕೆ: ಆರೋಪಿಗಳ ಪತ್ತೆಗೆ ಐದು ಪೊಲೀಸ್ ತಂಡ ರಚನೆ
ಶಾಂತಿಯುತವಾಗಿ ನಡೆದ ಫಾಝಿಲ್ ಅಂತ್ಯಕ್ರಿಯೆ
Team Udayavani, Jul 30, 2022, 7:30 AM IST

ಮಂಗಳೂರು: ಸುರತ್ಕಲ್‌ನ ಮಂಗಳ ಪೇಟೆಯ ಮುಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ.
ಎಡಿಜಿಪಿ ಆಲೋಕ್ ಕುಮಾರ್ ಸ್ವತಃ ತನಿಖೆಯ ಉಸ್ತುವಾರಿ ವಹಿಸಿದ್ದು, ಶೀಘ್ರವಾಗಿ ಅಪರಾಧಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈಗಾಗಲೇ ಸುರತ್ಕಲ್, ಬಜಪೆ, ಪಣಂಬೂರು, ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳ ಪತ್ತೆಗೆ ಐದು ತಂಡಗಳನ್ನು ರಚಿಸ ಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಹಿಂದೆ ಜಿಲ್ಲೆಯಲ್ಲಿ ಡಿಸಿಪಿಯಾಗಿದ್ದ, ಈಗ ಹಾಸನ ಎಸ್‌ಪಿ ಆಗಿರುವ ಹರಿರಾಂ ಶಂಕರ್ ಅವರನ್ನೂ ಕರೆಯಿಸಲಾಗಿದೆ. ಗುರುವಾರ ರಾತ್ರಿ ಹತ್ಯೆ ನಡೆದ ಸಮಯದಲ್ಲಿ ಅಲ್ಲಿ ಯಾವೆಲ್ಲ ಮೊಬೈಲ್‌ಗಳು ಸಕ್ರಿಯ ವಾಗಿದ್ದವು, ಯಾರು ಯಾರಿಗೆ ಕರೆ ಮಾಡಿದ್ದರು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ.
ಇನ್ನೊಂದೆಡೆ ಫಾಝಿಲ್‌ಗೆ ಯಾರೊಂದಿಗಾದರೂ ದ್ವೇಷವಿತ್ತೇ, ಯಾವ ಕಾರಣಕ್ಕೆ ಕೊಲೆ ನಡೆದಿದೆ ಇತ್ಯಾದಿ ಸಹಿತ ಹಲವು ಆಯಾಮಗಳಲ್ಲಿ ತನಿಖೆ ನಡೆದಿದೆ. ಸಂಬಂಧಿಸಿದ ಎಲ್ಲ ಕಡೆಯ ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಕೊಲೆಯ ಹಿಂದೆ ಕೆಲವು ಸಮಾಜ ಘಾತಕ ಶಕ್ತಿಗಳು ಇರುವುದು ಕಂಡು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತನಿಖೆ ತೀವ್ರ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿಲ್ಲ. ಎಲ್ಲ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ. ಪ್ರವೀಣ್ ಹತ್ಯೆ ಹಿಂದೆ ಇರುವವರ ಬಗ್ಗೆ ವಿಚಾರಣೆ ಮುಂದುವರಿದಿದೆ. ಸಾರ್ವ ಜನಿಕರೂ ಸರಕಾರ, ಪೊಲೀಸರ ಮೇಲೆ ವಿಶ್ವಾಸವಿಟ್ಟು ಸಹಕರಿಸಬೇಕು ಎಂದು ವಿನಂತಿಸಿದರು.
ಪ್ರವೀಣ್ ಹತ್ಯೆಗೂ ಇದಕ್ಕೂ ಏನಾದರೂ ಸಂಬಂಧ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಈಗಾಗಲೇ ಈ ನಿರ್ಧಾರಕ್ಕೆ ಬರಲಾಗದು ಎಂದರು.
ದ.ಕ.ದಲ್ಲಿ 8 ದಿನಗಳಲ್ಲಿ 3 ಹತ್ಯೆ ನಡೆದಿರುವುದರಿಂದ ಜಿಲ್ಲೆ ಮತ್ತೆ ಸುದ್ದಿಯಾಗಿದೆ. ಈ ಪ್ರಕರಣ ಪೊಲೀಸರಿಗೆ ಸವಾಲಾಗಿದೆ. ಆದರೆ ಅದನ್ನು ಭೇದಿಸಿ ಆರೋಪಿಗಳನ್ನು ಹಿಡಿಯುತ್ತೇವೆ. ನಗರ ಮತ್ತು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿ ಸಿದ್ದು, ಕಾನೂನು ಸುವ್ಯವಸ್ಥೆಯನ್ನು ಉತ್ತಮವಾಗಿ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಅನುÏ ಕುಮಾರ್, ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಶೀಘ್ರ ಬಂಧನ: ಎಡಿಜಿಪಿ
ಸುರತ್ಕಲ್: ಫಾಝಿಲ್ ಹತ್ಯೆ ನಡೆದ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಎಡಿಜಿಪಿ ಆಲೋಕ್ ಕುಮಾರ್, ಫಾಝಿಲ್ ಅಂತ್ಯಸಂಸ್ಕಾರ ಶಾಂತಿಯುತವಾಗಿ ನಡೆದಿದ್ದು, ಫಾಝಿಲ್ ಕುಟುಂಬದವರು ಸಂಪೂರ್ಣ ಸಹಕಾರ ನೀಡಿದ್ದಾರೆ. ಸಾರ್ವಜನಿಕರು, ಸಮುದಾಯದವರೂ ಸಹಕರಿಸಿದ್ದಾರೆ. ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಷ್ಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಅಥವಾ ಬಂಧಿಸಲಾಗಿದೆ ಎಂಬ ಪ್ರಶ್ನೆಗೆ, ಸುರತ್ಕಲ್ ಕೊಲೆ ಪ್ರಕರಣದಲ್ಲಿ ವಾಹನ ಸಂಖ್ಯೆ, ಸಿಸಿ ಟಿವಿ ಆಧಾರದಲ್ಲಿ ಸಾಕ್ಷ್ಯ ಕಲೆ ಹಾಕುತ್ತಿದ್ದೇವೆ. ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುವುದು ತನಿಖೆಯ ಭಾಗ. ಆದರೆ ಯಾರನ್ನೂ ಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ನಡೆಯಲಿದೆ “ಶ್ವಾನ’ಗಳ ಸರ್ವೇ; ಪಾಲಿಕೆ ನಿರ್ಧಾರ

ಮಂಗಳೂರು, ಉಡುಪಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಪ್ರಿನ್ಸೆಸ್ ಮಿರಾಲ್ ತೈಲ ತೆರವು : ಪ್ರತಿಕೂಲ ಹವಾಮಾನದಿಂದ ಅಡ್ಡಿ

ಪೊಲೀಸರಿಗೆ ಸವಾಲಾದ ನಗದು ಪತ್ತೆ ಪ್ರಕರಣಗಳು: ಕರಾವಳಿಯ ಹವಾಲಾ ಜಾಲಕ್ಕೆ ಮಂಗಳೂರೇ ಕೇಂದ್ರ?

“ವಿಶ್ವ ಕೊಂಕಣಿ ಸರದಾರ’ನಿಗೆ ಪ್ರತಿಮೆಯ ಗೌರವ: ಉತ್ತರ ಪ್ರದೇಶದಲ್ಲಿ 6.5 ಅಡಿ ಎತ್ತರದ ಪ್ರತಿಮೆ ನಿರ್ಮಾಣ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
