ಮಂಗಳೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆ
Team Udayavani, Sep 16, 2017, 12:58 PM IST
ಮಂಗಳೂರು: ಧಾರಾಕಾರ ಮಳೆಯಿಂದಾಗಿ ಮಂಗಳೂರು ನಗರದ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಶುಕ್ರವಾರ ರಾತ್ರಿಯಿಂದ ನಿರಂತರವಾಗಿ ಪುತ್ತೂರು, ಬೆಳ್ತಂಗಡಿ, ಮಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಅಂಗಡಿಗೆ ನೀರು ನುಗ್ಗಿದೆ ಎಂದು ವರದಿ ತಿಳಿಸಿದೆ.
ಮಂಗಳೂರಿನಲ್ಲಿ ಬಹುತೇಕ ರಸ್ತೆಗಳು ಜಲಾವೃತಗೊಂಡಿದೆ. ವಾಹನ ಸಂಚಾರರು ಪರದಾಡುವಂತಾಗಿದೆ. ಸುರತ್ಕಲ್, ವಾಮಂಜೂರು, ಉಡುಪಿ, ಕುಂದಾಪುರ, ಪುಂಜಾಲಕಟ್ಟೆ, ವಗ್ಗ, ಕಾವಳಕಟ್ಟೆಯಲ್ಲಿಯೂ ಮಳೆ ಸುರಿಯುತ್ತಿದೆ.