ಜಿಲ್ಲಾಡಳಿತದಿಂದ ಇನ್ನೂ ಅಂತಿಮಗೊಳ್ಳದ ಯುಗಪುರುಷರ ಹೆಸರು

ಮಂಗಳೂರು ಅಂ.ವಿಮಾನ ನಿಲ್ದಾಣ ಮರು ನಾಮಕರಣ

Team Udayavani, Feb 14, 2020, 5:18 AM IST

1302MLR18-AIRPORT

ವಿಶೇಷ ವರದಿ-ಮಹಾನಗರ: ಮಂಗಳೂರು ಸಹಿತ ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ಮರು ನಾಮಕರಣ ಮಾಡುವ ರಾಜ್ಯ ಸರಕಾರಕ್ಕೆ ಪ್ರಸ್ತಾವಕ್ಕೆ ದ.ಕ. ಜಿಲ್ಲಾಡಳಿತ ಇನ್ನೂ ಯಾವುದೇ ಹೆಸರು ಅಂತಿಮಗೊಳಿಸಲಿಲ್ಲ.

ರಾಜ್ಯದ ಐದು ವಿಮಾನ ನಿಲ್ದಾಣಗಳ ಹೆಸರು ಮರು ನಾಮಕರಣಕ್ಕೆ ತಿಂಗಳ ಹಿಂದೆ ರಾಜ್ಯ ಸರಕಾರ ಪ್ರಸ್ತಾವ ಮಾಡಿತ್ತು. ಅದರಂತೆ ಬೆಳಗಾವಿ, ಮಂಗಳೂರು, ಕಲಬುರ್ಗಿ, ಮೈಸೂರು ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಐತಿಹಾಸಿಕ ವ್ಯಕ್ತಿಗಳ ಹೆಸರು ನಾಮಕರಣ ಮಾಡಿ ಗೌರವ ಸಲ್ಲಿಸಲು ನಿರ್ಧರಿಸಿತ್ತು. ಜತೆಗೆ ಐತಿಹಾಸಿಕ ವ್ಯಕ್ತಿಗಳ ಹೆಸರು, ಸಾಧನೆ ಇನ್ನಿತರ ಸಮಗ್ರ ಮಾಹಿತಿ ಸಲ್ಲಿಸುವಂತೆ ಜಿಲ್ಲಾಡಳಿತಗಳಿಗೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸೂಚನೆ ನೀಡಿತ್ತು.

ಯಾವುದೇ ಸಭೆ ನಡೆದಿಲ್ಲ
ವಿಮಾನ ನಿಲ್ದಾಣಕ್ಕೆ ಯಾವುದೇ ಹೆಸರು ಅಂತಿಮಗೊಳಿಸುವ ಮುನ್ನ ಆಸಕ್ತ ಪ್ರಾಯೋಜಕರು, ಸಂಘಟನೆಯ ಪ್ರಮುಖರ ಜತೆ ಜಿಲ್ಲಾಡಳಿತ ಸಭೆ ನಡೆ ಸಬೇಕು. ಸಭೆಯಲ್ಲಿ ಪ್ರಮುಖರು ಅಂತಿಮ ಹೆಸರನ್ನು ಜಿಲ್ಲಾಡಳಿತಕ್ಕೆ ನೀಡ ಬೇಕು. ಅನಂತರ ಜಿಲ್ಲಾಡಳಿತವು ಪ್ರಸ್ತಾ ವದಲ್ಲಿ ರುವ ಹೆಸರನ್ನು ಸಂಬಂಧಪಟ್ಟ ಇಲಾಖೆಗೆ ನೀಡಬೇಕು. ಆದರೆ ದ.ಕ. ಜಿಲ್ಲಾಡಳಿತವು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇನ್ನೂ, ಯಾವುದೇ ರೀತಿಯ ಸಭೆ ನಡೆಸಲಿಲ್ಲ. ಹೆಸರು ಕೂಡ ಅಂತಿಮಗೊಳಿಸಲಿಲ್ಲ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರಾವಳಿಯ ವೀರ ಪುರುಷರು ಅಥವಾ ವೀರ ಮಹಿಳೆಯರ ಹೆಸರು ನಾಮಕರಣ ಮಾಡಬೇಕೆಂಬ ಕೂಗು ಈ ಹಿಂದಿನಿಂದಲೂ ಇದೆ. ಬೆಂಗಳೂ ರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅನಂತರದ ರಾಜ್ಯದಲ್ಲಿ 2ನೇ ಅತಿದೊಡ್ಡ ವಿಮಾನ ನಿಲ್ದಾಣ ಮಂಗಳೂರಿನದ್ದಾಗಿದೆ. ಆದರೆ ಬೆಂಗಳೂರಿನಂತೆಯೇ ಮಂಗ ಳೂರು ವಿಮಾನ ನಿಲ್ದಾಣಕ್ಕೂ ಇಲ್ಲಿನ ಯುಗ ಪುರುಷರ ಹೆಸರು ಇಡಬೇಕೆಂಬ ಒತ್ತಾಯ ಇತ್ತು. ಈಗ ಅದಕ್ಕೆ ಮರುಜೀವ ಬಂದಿದೆ.

ಕರಾವಳಿ ಪ್ರದೇಶದ ಕೆಲವು ಸಂಘಟನೆಗಳು ಈ ಪ್ರದೇಶದ ವೀರ ಪುರು ಷರು ಅಥವಾ ವನಿತೆಯರ ಹೆಸರನ್ನಿಡ ಬೇಕೆಂಬ ಬೇಡಿಕೆಯನ್ನಿಟ್ಟಿದ್ದಾರೆ. ಇದಕ್ಕೆ ಪೂರಕವಾ ಗಿಯೇ ಕಳೆದ ವರ್ಷ ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ’ರ ಹೆಸರು ನಾಮಕರಣ ಮಾಡುವಂತೆ ಒತ್ತಾಯ ಕೇಳಿಬಂದಿತ್ತು. ಮಂಗಳೂರು ವಿಮಾನ ನಿಲ್ದಾಣಕ್ಕೆ ಕರಾವಳಿಗೆ ಅಪಾರ ಕೊಡುಗೆ ನೀಡಿರುವ ಮಹನೀ ಯರ ಹೆಸರು ಸೂಚಿಸಬೇಕೆಂಬ ಒತ್ತಾಯ ಈ ಹಿಂದೆಯೂ ಜೋರಾಗಿ ಕೇಳಿ ಬಂದಿತ್ತು. “ವೀರರಾಣಿ ಅಬ್ಬಕ್ಕ’ ಹೆಸರಿಡುವ ಬಗ್ಗೆ ಕಳೆದ ವರ್ಷ ದ.ಕ. ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಈಗಾಗಲೇ ಸಲ್ಲಿಸಲಾಗಿದೆ.

ಇನ್ನೊಂದೆಡೆ, ಮಂಗಳೂರು ವಿಮಾನ ನಿಲ್ದಾಣಕ್ಕೆ “ವೀರ ರಾಣಿ ಅಬ್ಬಕ್ಕ’ನವರ ಹೆಸರಿ ಡುವಂತೆ ಕೇಂದ್ರ ಸರಕಾರಕ್ಕೆ ಶಿಫಾ ರಸು ಮಾಡುವುದಾಗಿ ಸಚಿವ ಯು.ಟಿ. ಖಾದರ್‌ ಅವರು ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದಿದ್ದ ರಾಣಿ ಅಬ್ಬಕ್ಕ ಉತ್ಸವದಲ್ಲಿ ಭರವಸೆ ನೀಡಿದ್ದರು. ಈ ನಡುವೆ, ಮಂಗಳೂರು ವಿಮಾನ ನಿಲ್ದಾಣವನ್ನು ಆರಂಭಿಸಿದ ಕೀರ್ತಿ ಯು.ಎಸ್‌. ಶ್ರೀನಿವಾಸ ಮಲ್ಯ ಅವರಿಗೆ ಸಲ್ಲುತ್ತದೆ. ಇದೇ ಕಾರಣಕ್ಕೆ ವಿಮಾನ ನಿಲ್ದಾ ಣಕ್ಕೆ ಮಲ್ಯರ ಹೆಸರನ್ನು ಇಡಬೇಕೆಂಬ ದೊಡ್ಡ ಮಟ್ಟದ ಬೇಡಿಕೆ ಕೂಡ ಇದೆ.

ಇದರ ಹೊರತಾಗಿಯೂ ಮಂಗಳೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ದಲಿತ ಕುಟುಂಬಗಳು ಜಮೀನು ನೀಡಿರುವ ಹಿನ್ನೆಲೆಯಲ್ಲಿ ಡಾ| ಅಂಬೇಡ್ಕರ್‌ ಅವರ ಹೆಸರು ಇಡಬೇಕೆಂದು ದಲಿತ ಸಂಘಟನೆಗಳು ಬೇಡಿಕೆಯಿಟ್ಟಿವೆ. ಈ ಸಂಬಂಧ ಮಳವೂರು ಗ್ರಾಮಸಭೆಯಲ್ಲಿ ಒಂದು ವರ್ಷದ ಹಿಂದೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಪ್ರಧಾನಿಗೆ ಈಗಾಗಲೇ ಪತ್ರ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ’ರ ಹೆಸರು ನಾಮಕರಣ ಮಾಡಬೇಕು ಎಂದು ಬೆಳ್ತಂಗಡಿ ತಾಲೂಕಿನ ಶಿಬಾಜೆಯ ವಿಜೆತ್‌ ಅವರು ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ 12 ಪುಟಗಳ ಪತ್ರವನ್ನು ಕಳುಹಿಸುವ ಮೂಲಕ ಮನವಿ ಈಗಾಗಲೇ ಮಾಡಿದ್ದಾರೆ.

ಹೆಸರು ಅಂತಿಮಗೊಂಡಿಲ್ಲ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರು ನಾಮಕರಣ ಮಾಡುವ ಸಂಬಂಧ ಈವರೆಗೆ ಯಾವುದೇ ಹೆಸರು ಕೂಡ ಅಂತಿಮಗೊಂಡಿಲ್ಲ. ಸದ್ಯದಲ್ಲಿಯೇ ಸಂಘಟನೆ, ಪ್ರಮುಖರ ಸಭೆ ಕರೆಯುತ್ತೇನೆ. ಬಳಿಕ ಹೆಸರು ಅಂತಿಮಗೊಳಿಸಿ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು.
 - ಸಿಂಧೂ ಬಿ. ರೂಪೇಶ್‌, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.