ಫೆ.29 ರಿಂದ ಮಾ.1 ವರೆಗೆ ವೀರರಾಣಿ ಅಬ್ಬಕ್ಕ ಉತ್ಸವ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Team Udayavani, Feb 23, 2020, 3:27 PM IST
ಮಂಗಳೂರು: ಫೆ 29 ರಿಂದ ಮಾ.1 ವರೆಗೆ ಎರಡು ದಿನಗಳ ಕಾಲ ಮಂಗಳೂರಿನ ಕೊಣಾಜೆ ಗ್ರಾಮದ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ನಡೆಯಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಭಾನುವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಪ್ರಸಿದ್ಧ ಸಾಹಿತಿ ಉಷಾ ಪಿ ರೈ ಮತ್ತು ರಾಷ್ಟ್ರೀಯ ಕ್ರೀಡಾಪಟು ಶ್ರೀಮಾ ಪ್ರಿಯದರ್ಶಿನಿ ಅವರಿಗೆ 2019-20 ರ ಅಬ್ಬಕ್ಕ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ ಜೆ ರೂಪ ಉಪಸ್ಥಿತರಿದ್ದರು.