ಮಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿಲ್ಲ: ಸಚಿವ ಶ್ರೀರಾಮುಲು
Team Udayavani, Feb 6, 2020, 4:21 PM IST
ಮಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿಲ್ಲ. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 10 ಬೆಡ್ ಮೀಸಲಿಡಲಾಗಿದೆ. ವಾಹನಗಳಲ್ಲಿ ಎಲ್ಇಡಿ ಬ್ಯಾನರ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಅವರು ಮಂಗಳೂರಿನಲ್ಲಿ ಗುರುವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಇಡೀ ರಾಜ್ಯದಲ್ಲಿ ಕೊರೊನಾ ವೈರಸ್ ಆತಂಕ ಭಯ ಸೃಷ್ಟಿ ಮಾಡಿದೆ. ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಬಂದರು, ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡುತ್ತಿದ್ದೇವೆ ಎಂದರು.
ಸಚಿವ ಸಂಪುಟ ವಿಸ್ತರಣೆಯ ಕುರಿತು ಅವರು ಮಾತನಾಡುತ್ತಾ ಸದ್ಯಕ್ಕೆ 3 ಮಂದಿ ಉಪಮುಖ್ಯಮಂತ್ರಿ ಇದ್ದಾರೆ, ಮುಂದಿನ ದಿನಗಳಲ್ಲಿ ಪಕ್ಷ ತೀರ್ಮಾನ ಮಾಡಿದಂತಾಗುತ್ತದೆ. ಬಹಳಷ್ಟು ಮಂದಿಗೆ ಸಚಿವರಾಗಲು ಆಸಕ್ತಿ ಇದೆ, ಆದರೆ ಅವಕಾಶ ಬರುವವರೆಗೆ ಕಾಯಬೇಕು ಅಷ್ಟೇ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ