ಮಂಗಳೂರು ಅನುಮಾನಸ್ಪದ ಬ್ಯಾಗ್ ಪತ್ತೆ ಪ್ರಕರಣ: ಪರಿಸ್ಥಿತಿ ನಮ್ಮ ಹತೋಟಿಯಲ್ಲಿದೆ: ಡಾ. ಹರ್ಷ
Team Udayavani, Jan 20, 2020, 1:56 PM IST
ಮಂಗಳೂರು: ಅನುಮಾನಸ್ಪದ ಬ್ಯಾಗ್ ಪತ್ತೆಯಾದ ಸ್ಥಳಕ್ಕೆ ಜನರು ಹೋಗದಂತೆ ಸೂಚಿಸಲಾಗಿದೆ. ಪರಿಸ್ಥಿತಿ ಶಾಂತವಾಗಿದೆ. ಬ್ಯಾಗ್ ಪತ್ತೆ ಪ್ರಕರಣದ ಕುರಿತು ನಾವು ತನಿಖೆ ಮಾಡುತ್ತಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಹೇಳಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ ಪ್ರಕರಣದ ಕುರಿತಂತೆ ಪ್ರತಿಕ್ರಿಯಿಸಿದ ಅವರು ಘಟನೆಯ ಕುರಿತಂತೆ ಮಂಗಳೂರು ಪೊಲೀಸ್ ಕಂಟ್ರೊಲ್ ರೂಮ್ ಗೆ ಮಾಹಿತಿ ಬಂತು. ಸಿಎಎಸ್‌ಎಫ್ ಅಧಿಕಾರಿಗಳು ಬ್ಯಾಗನ್ನು ಪತ್ತೆ ಹಚ್ಚಿದ್ದಾರೆ. ಕೂಡಲೇ ಕ್ರಮ ಕೈಗೊಂಡಿದ್ದೇವೆ. ಅನುಮಾನಸ್ಪದ ಬ್ಯಾಗನ್ನು ಬೇರೆ ಕಡೆ ಸ್ಥಳಾಂತರಿಸಿದ್ದೇವೆ. ಪರಿಸ್ಥಿತಿ ನಮ್ಮ ಹತೋಟಿಯಲ್ಲಿದೆಎಂದು ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಅನುಮಾನಸ್ಪದ ಬ್ಯಾಗ್ ಒಂದು ಪತ್ತೆಯಾಗಿ ಹಲವು ಅನುಮಾನಗಳಿಗೆ ಕಾರಣವಾಗಿದೆ.