ಮಂಗಳೂರು ವಿಶ್ವವಿದ್ಯಾನಿಲಯ; ಗೈರುಹಾಜರಾದ ವಿದ್ಯಾರ್ಥಿಗಳಿಗೆ ಡಿ. 21ರಿಂದ ವಿಶೇಷ ಪರೀಕ್ಷೆ

Team Udayavani, Nov 25, 2020, 1:58 AM IST

ಮಂಗಳೂರು ವಿಶ್ವವಿದ್ಯಾನಿಲಯ; ಗೈರುಹಾಜರಾದ ವಿದ್ಯಾರ್ಥಿಗಳಿಗೆ ಡಿ. 21ರಿಂದ ವಿಶೇಷ ಪರೀಕ್ಷೆ

ಸಾಂದರ್ಭಿಕ ಚಿತ್ರ

ಮಂಗಳೂರು: ಸೆಪ್ಟಂಬರ್‌ ಮತ್ತು ಅಕ್ಟೋಬರ್‌ನಲ್ಲಿ ನಡೆದ ಪರೀಕ್ಷೆಗಳಿಗೆ ಕೊರೊನಾ ಹಿನ್ನೆಲೆಯಲ್ಲಿ ಆಗಮಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ. 21ರಿಂದ ವಿಶೇಷ ಪರೀಕ್ಷೆ ನಡೆಸಲಾಗುವುದು ಎಂದು ಮಂಗಳೂರು ವಿ.ವಿ. ಪರೀಕ್ಷಾಂಗ ಕುಲಸಚಿವ ಡಾ| ಪಿ.ಎಲ್‌. ಧರ್ಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉಡುಪಿಯ ಎಂಜಿಎಂ ಕಾಲೇಜು, ಮಂಗಳೂರಿನ ವಿ.ವಿ. ಕಾಲೇಜು ಮತ್ತು ಮಡಿಕೇರಿಯ ಎಫ್ಎಂಕೆಎಂಸಿ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು. ಅಂದು ಶ್ರೀಲಂಕಾದ 6 ಮಂದಿ ವಿದ್ಯಾರ್ಥಿಗಳು ಸೇರಿದಂತೆ 5,000ಕ್ಕೂ ಅಧಿಕ ಮಂದಿ ಪರೀಕ್ಷೆ ಬರೆಯಲಿದ್ದಾರೆ ಎಂದರು.

ಯಶಸ್ವೀ ಪರೀಕ್ಷೆ
ಕೊರೊನಾ ಸವಾಲಿನ ನಡುವೆಯೂ ಮಂಗಳೂರು ವಿ.ವಿ. ತನ್ನ ವ್ಯಾಪ್ತಿಯಲ್ಲಿ ಬರುವ 210 ಕಾಲೇಜುಗಳ ಪೈಕಿ 205 ಕಾಲೇಜುಗಳ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಪರೀಕ್ಷೆಗಳನ್ನು ಆಯೋಜಿಸಿದೆ. ಹಲವಾರು ಕೋರ್ಸ್‌ಗಳ ಫ‌ಲಿತಾಂಶ ಈಗಾಗಲೇ ಪ್ರಕಟವಾಗಿದ್ದು ಬಾಕಿ ಇರುವ ಕೋರ್ಸ್‌ಗಳ ಫ‌ಲಿತಾಂಶವನ್ನು ಶೀಘ್ರದಲ್ಲೇ ಹಂತ ಹಂತವಾಗಿ ಪ್ರಕಟಿಸ
ಲಾಗುವುದು. ಫಿಜಿ, ಲಕ್ಷದ್ವೀಪ, ಮಣಿಪುರ, ಧಾರವಾಡ, ಜಮ್ಮು-ಕಾಶ್ಮೀರದಲ್ಲಿಯೂ ಅಲ್ಲಿನ ವಿ.ವಿ.ಗಳ ಸಹಕಾರದಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು ಎಂದು ಅವರು ವಿವರಿಸಿದರು.

ಹೆಲ್ಪ್ ಡೆಸ್ಕ್
ಫ‌ಲಿತಾಂಶದಲ್ಲಿ ಯಾವುದೇ ರೀತಿಯ ಗೊಂದಲಗಳಿದ್ದರೆ ಅದನ್ನು ಪರಿಹರಿಸುವುದಕ್ಕಾಗಿ ವಿ.ವಿ.ಯು ಹೆಲ್ಪ್ಡೆಸ್ಕ್ ಮೂಲಕ ತ್ವರಿತ ಸೇವೆ ಒದಗಿಸುತ್ತಿದೆ. ಯಾವುದೇ ವಿದ್ಯಾರ್ಥಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಕುಲಸಚಿವರು ತಿಳಿಸಿದರು.

ಏಜೆನ್ಸಿ ಮುಂದುವರಿಸುವುದಿಲ್ಲ
ಮುಂದಿನ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿ.ವಿ.ಯ ಪರೀಕ್ಷೆ, ಫ‌ಲಿತಾಂಶಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ವಿಶ್ವವಿದ್ಯಾನಿಲಯದ ತಂಡವೇ ನಿರ್ವಹಿಸಲಿದೆ. ಖಾಸಗಿಯವರಿಗೆ ಗುತ್ತಿಗೆ ನೀಡುವ ವ್ಯವಸ್ಥೆಯನ್ನು ಮುಂದುವರಿಸದೆ ಇರಲು ನಿರ್ಧರಿಸಲಾಗಿದೆ ಎಂದು ಡಾ| ಧರ್ಮ ತಿಳಿಸಿದರು.

ಕಂಪೆನಿಗೆ ನೋಟಿಸ್
ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಫ‌ಲಿತಾಂಶ ಪ್ರಕಟ ಸಂದರ್ಭ ಈ ಬಾರಿ ಲೋಪಗಳು ತೀರಾ ಕಡಿಮೆ. ಆದರೂ ಇಬ್ಬರು ವಿದ್ಯಾರ್ಥಿಗಳ ಫ‌ಲಿತಾಂಶದಲ್ಲಿ ಉಂಟಾಗಿದ್ದ ಗೊಂದಲವನ್ನು ಗಂಭೀರವಾಗಿ ಪರಿಗಣಿಸಿ ಕುಲಪತಿಯವರು ಕಂಪೆನಿಗೆ ನೋಟಿಸ್‌ ನೀಡಿ ಸ್ಪಷ್ಟೀಕರಣ ಕೇಳಿದ್ದಾರೆ.

ಸಾಫ್ಟ್ವೇರ್‌ನಲ್ಲಿ ಉಂಟಾದ ದೋಷದಿಂದಾಗಿ ಫ‌ಲಿತಾಂಶದಲ್ಲಿ ಪ್ರಮಾದ ಆಗಿರುವುದನ್ನು ಏಜೆನ್ಸಿ ಪಡೆದುಕೊಂಡಿರುವ ಕಂಪೆನಿ ಒಪ್ಪಿಕೊಂಡಿದೆ ಎಂದು ಕುಲಸಚಿವರು ತಿಳಿಸಿದರು.

ದೂರ ಶಿಕ್ಷಣ ಕೇಂದ್ರದ ನಿರ್ದೇಶಕ ಪ್ರೊ| ಸಂಗಪ್ಪ, ಸಹಾಯಕ ಕುಲ ಸಚಿವೆ ಯಶೋದಾ, ವಿಶೇಷ ಅಧಿಕಾರಿ ಡಾ| ರಮೇಶ್‌, ತಾಂತ್ರಿಕ ಸಮಿತಿಯ ಸದಸ್ಯ ಡಾ| ರವಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.