Udayavni Special

ಮಂಗಳೂರು ವಿ.ವಿ. ಪದವಿ ಫಲಿತಾಂಶ; ಸರ್ವರ್‌ ಸಮಸ್ಯೆ ನಿವಾರಣೆ


Team Udayavani, Nov 21, 2020, 7:50 AM IST

ಮಂಗಳೂರು ವಿ.ವಿ. ಪದವಿ ಫಲಿತಾಂಶ; ಸರ್ವರ್‌ ಸಮಸ್ಯೆ ನಿವಾರಣೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅಂತಿಮ ಪದವಿ ಪರೀಕ್ಷಾ ಫಲಿತಾಂಶ ಪ್ರಕಟನೆಯಲ್ಲಿ ಉಂಟಾಗಿದ್ದ ಗೊಂದಲವು ಶೇ. 99ರಷ್ಟು ನಿವಾರಣೆಯಾಗಿದೆ. ಶನಿವಾರ ಮಧ್ಯಾಹ್ನದೊಳಗೆ ಎಲ್ಲ ವಿದ್ಯಾರ್ಥಿಗಳಿಗೆ ಫಲಿತಾಂಶ ದೊರಕುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿ.ವಿ. ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ವಿ.ವಿ.ಯ ಅಂತಿಮ ಪದವಿ ಫಲಿತಾಂಶ ಕಳೆದ ರವಿವಾರ ಮತ್ತು ಸೋಮವಾರ ಪ್ರಕಟಿಸಲಾಗಿತ್ತು. ಆದರೆ ಸರ್ವರ್‌ ಸಮಸ್ಯೆಯಿಂದಾಗಿ ಕೆಲವೇ ವಿದ್ಯಾರ್ಥಿಗಳು ಫಲಿತಾಂಶ ಪಡೆದರೆ, ಬಹುತೇಕರಿಗೆ ಫಲಿತಾಂಶ ಲಭ್ಯವಾಗಿರಲಿಲ್ಲ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು. ವಿ.ವಿ. ಸಂಬಂಧಪಟ್ಟವರು ಸಮಸ್ಯೆ ನಿವಾರಣೆಗೆ ಪ್ರಯತ್ನ ಪಡುತ್ತಿದ್ದು, ಈಗಾಗಲೇ ಶೇ. 99ರಷ್ಟು ನಿವಾರಣೆಯಾಗಿದೆ. ವಿದ್ಯಾರ್ಥಿಗಳ ಗೊಂದಲ ಪರಿಹರಿಸಿ ಫಲಿತಾಂಶ ಒದಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿ.ವಿ. ಕುಲಸಚಿವ (ಪರೀಕ್ಷಾಂಗ) ಪ್ರೊ| ಪಿ. ಎಲ್‌. ಧರ್ಮ ತಿಳಿಸಿದ್ದಾರೆ.

ದಾಖಲಾತಿ ನ. 30ರ ವರೆಗೆ ವಿಸ್ತರಣೆ
ಫಲಿತಾಂಶ ಪ್ರಕಟನೆಯಲ್ಲಿ ಉಂಟಾದ ಗೊಂದಲದ ಕಾರಣ ದಿಂದಾಗಿ ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪ್ರಕ್ರಿಯೆಯನ್ನು ವಿವಿ ಮುಂದೂಡಿದೆ.

ಸ್ನಾತಕೋತ್ತರ ಪದವಿ ಸೇರ್ಪಡೆಗೆ ದಾಖಲಾತಿ ಪ್ರಕ್ರಿಯೆಗೆ ಕೊನೆಯ ದಿನಾಂಕವನ್ನು ನ. 21ಕ್ಕೆ ನಿಗದಿ ಪಡಿಸಲಾಗಿತ್ತು. ಆದರೆ ಸರ್ವರ್‌ ಸಮಸ್ಯೆ ಯಿಂದಾಗಿ ಬಹುತೇಕ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯ ವಾಗದ ಕಾರಣ ನ. 30ರ ವರೆಗೆ ದಾಖಲಾತಿ ಅವಧಿಯನ್ನು ವಿಸ್ತರಿಸಲಾಗಿದೆ. ಮಂಗಳೂರು ವಿ.ವಿ.ಯ ಸ್ನಾತಕೋತ್ತರ ವಿಭಾಗಗಳು/ವಿ.ವಿ. ಕಾಲೇಜು ಮಂಗಳೂರು/ವಿ.ವಿ. ಸಂಧ್ಯಾ ಕಾಲೇಜು ಮಂಗಳೂರು/ ಫೀಲ್ಡ್‌  ಮಾರ್ಷಲ್‌ ಕೆ.ಎಂ. ಕಾರ್ಯಪ್ಪಕಾಲೇಜು ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿವಿಯ ಸಂಯೋಜಿತ ಕಾಲೇಜುಗಳು ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತ ಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿಗೆ ನ. 30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಪಿ.ಜಿ. ಡಿಪ್ಲೊಮಾ ಮತ್ತು ಸರ್ಟಿಫಿಕೆಟ್‌ ಕಾರ್ಯಕ್ರಮಗಳ ಭರ್ತಿ ಮಾಡಿದ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರವೇಶ ಪರೀಕ್ಷೆ ಹಾಗೂ ಇನ್ನಿತರ ಮಾಹಿತಿಗಳನ್ನು ಮಂಗಳೂರು ವಿ.ವಿ. ವೆಬ್‌ಸೈಟ್‌ www.mangaloreuniversity.ac.in ನಲ್ಲಿ ಪಡೆಯಬಹುದು ಎಂದು ಕುಲಸಚಿವರು ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

vinay

ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದ ನ್ಯಾಯಾಲಯ

prabhu-chwan

ಮಂಡ್ಯ: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ನಡೆಸಿರುವುದು ಅಮಾನವೀಯ: ಚವ್ಹಾಣ್

figher

‘ವಾರ್’ ಮುಗಿಸಿದ ಬಳಿಕ ‘ಫೈಟರ್’ ಆಗಲು ಮುಂದಾದ ಹೃತಿಕ್

abbakka

ಮಂಸೋರೆ ನಿರ್ದೇಶನದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಘರ್ಜಿಸಲಿದ್ದಾಳೆ ‘ಅಬ್ಬಕ್ಕ’

ರೆಪೋ ದರ ಯಥಾಸ್ಥಿತಿ: ಮೊದಲ ಬಾರಿ 45,000 ಗಡಿ ತಲುಪಿದ ಸೆನ್ಸಕ್ಸ್, ನಿಫ್ಟಿ ಹೊಸ ದಾಖಲೆ

ರೆಪೋ ದರ ಯಥಾಸ್ಥಿತಿ: ಮೊದಲ ಬಾರಿ 45,000 ಗಡಿ ತಲುಪಿದ ಸೆನ್ಸಕ್ಸ್, ನಿಫ್ಟಿ ಹೊಸ ದಾಖಲೆ

ಭಾರತ- ಆಸ್ಟ್ರೇಲಿಯಾ ನಡುವಿನ ಬಾರ್ಡರ್ – ಗಾವಸ್ಕರ್ ಸರಣಿಗಿದೆ ರೋಚಕ ಇತಿಹಾಸ

ಭಾರತ- ಆಸ್ಟ್ರೇಲಿಯಾ ನಡುವಿನ ಬಾರ್ಡರ್ – ಗವಾಸ್ಕರ್ ಸರಣಿಗಿದೆ ರೋಚಕ ಇತಿಹಾಸ!

ಬೇಡಿಕೆ ಈಡೇರಿಸಿ: ಡಿಸೆಂಬರ್ 8ರಂದು ರೈತಸಂಘಟನೆಗಳಿಂದ ಭಾರತ್ ಬಂದ್ ಗೆ ಕರೆ

ಬೇಡಿಕೆ ಈಡೇರಿಸಿ: ಡಿಸೆಂಬರ್ 8ರಂದು ರೈತಸಂಘಟನೆಗಳಿಂದ ಭಾರತ್ ಬಂದ್ ಗೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

haleyangadi-2

ಹಳೆಯಂಗಡಿ: ಕಾರು ಪಲ್ಟಿ; ಚಾಲಕ ಅಪಾಯದಿಂದ ಪಾರು

ರಸ್ತೆ ದಾಟುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದ ಕಾರು: ಬಾಲಕನಿಗೆ ಗಂಭೀರ ಗಾಯ

ರಸ್ತೆ ದಾಟುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದ ಕಾರು: ಬಾಲಕನಿಗೆ ಗಂಭೀರ ಗಾಯ

ರಾಜ್ಯದಲ್ಲಿ ಕೂಡಲೇ ಗೋಹತ್ಯೆ ನಿಷೇಧವಾಗಬೇಕು: ಪೇಜಾವರ ಶ್ರೀ ಆಗ್ರಹ

ರಾಜ್ಯದಲ್ಲಿ ಕೂಡಲೇ ಗೋಹತ್ಯೆ ನಿಷೇಧವಾಗಬೇಕು: ಪೇಜಾವರ ಶ್ರೀ ಆಗ್ರಹ

ಅವಶೇಷ ಮೇಲೆತ್ತದಿದ್ದರೆ ಮತ್ತೆ ಅಪಾಯ!

ಅವಶೇಷ ಮೇಲೆತ್ತದಿದ್ದರೆ ಮತ್ತೆ ಅಪಾಯ!

ಮಂಗಳೂರು ವಿವಾದಾತ್ಮಕ ಗೋಡೆ ಬರಹ ಪ್ರಕರಣ: ಓರ್ವ ಆರೋಪಿಯ ಬಂಧನ

ಮಂಗಳೂರು ವಿವಾದಾತ್ಮಕ ಗೋಡೆ ಬರಹ ಪ್ರಕರಣ: ಓರ್ವನ ವಿಚಾರಣೆ

MUST WATCH

udayavani youtube

ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ

udayavani youtube

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಉಗ್ರಪರ ಗೋಡೆ ಬರಹ ಪ್ರಕರಣದ ಆರೋಪಿಗಳ ಶೀಘ್ರ ಬಂಧನ: ಗೃಹ ಸಚಿವ ಬೊಮ್ಮಾಯಿ

udayavani youtube

Meal of Bakasur | ತುಳುನಾಡಿನ 14ಖಾದ್ಯಗಳನ್ನು ಉಣಬಡಿಸುವ ಬಕಾಸುರನ ಬಾಡೂಟ | FishCampus

ಹೊಸ ಸೇರ್ಪಡೆ

vinay

ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದ ನ್ಯಾಯಾಲಯ

jinke

ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

prabhu-chwan

ಮಂಡ್ಯ: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ನಡೆಸಿರುವುದು ಅಮಾನವೀಯ: ಚವ್ಹಾಣ್

figher

‘ವಾರ್’ ಮುಗಿಸಿದ ಬಳಿಕ ‘ಫೈಟರ್’ ಆಗಲು ಮುಂದಾದ ಹೃತಿಕ್

abbakka

ಮಂಸೋರೆ ನಿರ್ದೇಶನದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಘರ್ಜಿಸಲಿದ್ದಾಳೆ ‘ಅಬ್ಬಕ್ಕ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.