ಮಂಗಳೂರು: ಲಾರಿ ಢಿಕ್ಕಿ ಹೊಡೆದು ಮಹಿಳೆ ಸಾವು

Team Udayavani, Nov 27, 2019, 7:47 PM IST

ಮಂಗಳೂರು: ಲಾರಿ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಸಾವನ್ನಪ್ಪಿರುವ ಘಟನೆ ನಗರದ ಕುಂಟಿಕಾನದಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಪಂಜಿಮೊಗರು ನಿವಾಸಿ ಪ್ರಿಯಾ (43) ಎಂದು ಗುರುತಿಸಲಾಗಿದೆ. ಇವರು ಪಂಜಿಮೊಗರಿನಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದರು.

ಪ್ರಿಯಾ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಹಿಂಬದಿಯಲ್ಲಿ ಬಂದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಪ್ರಿಯಾ ರಸ್ತೆಗುರುಳಿದ್ದು ಈ ವೇಳೆ ಆಕೆಯ ಮೇಲೆ ಲಾರಿ ಹರಿದಿದೆ. ಈ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಿಯಾ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿಯೇ ಮೃತಪಟ್ಟರು.

ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಬಳಿಕ ಆತನನ್ನು ಪೊಲೀಸರು ಕುದುರೇಮುಖ ಬಳಿ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸಂಚಾರಿ (ದಕ್ಷಿಣ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ