Mangaluru:17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
Team Udayavani, Jun 1, 2023, 3:54 PM IST

ಮಂಗಳೂರು: 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ 420 ಕೇಸ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಜೇಸನ್ ಪೀಟರ್ ಡಿ’ಸೋಜ (42) ಎನ್ನುವವನಾಗಿದ್ದು, ಬಂಟ್ವಾಳದ ಮೇರಮಜಲು ಪಕ್ಕಾಲ ಪಡೆ ನಿವಾಸಿಯಾಗಿದ್ದ. ಬಂಧಿತ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೂ ಸಿಗದೇ ತಲೆ ಮರೆಸಿಕೊಂಡಿದ್ದ. ನ್ಯಾಯಾಲಯವು LPC(long pending case) ಪ್ರಕರಣ ಎಂದು ವಾರಂಟ್ ಹೊರಡಿಸಿತ್ತು. ಎಸಿಪಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.