ಮಂಗಳೂರು: ಐ ಫೋನ್ ನೀಡುವುದಾಗಿ ಹಣ ಪಡೆದು ವಂಚನೆ
Team Udayavani, Apr 28, 2023, 6:50 AM IST
ಮಂಗಳೂರು: ಐ ಫೋನ್ ಮಾರಾಟದ ಬಗ್ಗೆ ಫೇಸ್ಬುಕ್ನಲ್ಲಿ ಜಾಹೀರಾತು ನೀಡಿ ಅನಂತರ ಹಣ ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ (ಸೈಬರ್, ಆರ್ಥಿಕ ಮತ್ತು ಮಾದಕದ್ರವ್ಯ ಅಪರಾಧ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ವ್ಯಕ್ತಿ ಫೇಸ್ಬುಕ್ನಲ್ಲಿ ಐ ಫೋನ್ ಮಾರಾಟದ ಕುರಿತು ಜಾಹೀರಾತನ್ನು ನೋಡಿ ಅದನ್ನು ಖರೀದಿಸುವ ಉದ್ದೇಶದಿಂದ ಅದರಲ್ಲಿದ್ದ ಮೊಬೈಲ್ ಸಂಖ್ಯೆ 7548931374 ಕ್ಕೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ ಐ ಪೋನ್ನ್ನು 13,500 ರೂ.ಗಳಿಗೆ ಮಾರಾಟ ಮಾಡುತ್ತಿದ್ದು ಕೆಲವು ಆಫರ್ ನೀಡುವುದಾಗಿಯೂ 13,500 ರೂ.ಗಳನ್ನು ಗೂಗಲ್ ಪೇ ಮೂಲಕ ಪಾವತಿ ಮಾಡುವಂತೆಯೂ ತಿಳಿಸಿದ. ಇದನ್ನು ನಂಬಿದ ದೂರುದಾರ ವ್ಯಕ್ತಿ ಗೂಗಲ್ ಪೇ ಮೂಲಕ ಮೊದಲು 5,150 ರೂ. ವರ್ಗಾಯಿಸಿದರು.
ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಹಣ ಖಾತೆಗೆ ಬಂದಿಲ್ಲವೆಂದು ತಿಳಿಸಿದ್ದಾನೆ. ಮತ್ತೂಮ್ಮೆ ಹಣ ಪಾವತಿಸುವಂತೆ ತಿಳಿಸಿದ್ದಾನೆ. ಆ ಬಳಿಕ ಹಂತ ಹಂತವಾಗಿ ಮೋಸದಿಂದ 44,800 ರೂ. ವರ್ಗಾಯಿಸಿಕೊಂಡು ಐ ಫೋನ್ ನೀಡದೆ ವಂಚಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ