Mangaluru ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 6 ವರ್ಷ ಕಠಿನ ಸಜೆ
Team Udayavani, Nov 28, 2023, 10:14 PM IST
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್ಟಿಎಸ್ಸಿ-1) ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 6 ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ವಿಜಯ್ ಪ್ರವೀಣ್ ಕುಟಿನ್ಹಾ (29) ಶಿಕ್ಷೆಗೊಳಗಾದವನು. 2022ರ ಎ.20ರಂದು ಸಂಜೆ 4ಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿ ಕೊಣಾಜೆ ಠಾಣಾ ವ್ಯಾಪ್ತಿಯ ಅಂಬ್ಲಿಮೊಗರು ಗ್ರಾಮದ ಅಂಗಡಿಯೊಂದಕ್ಕೆ ತಿಂಡಿ ಖರೀದಿಸಲೆಂದು ಬಂದಿದ್ದಳು. ಆಗ ಬೀಡಿ ಖರೀದಿಸಲು ಬಂದಿದ್ದ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಶರಣಪ್ಪ ಭಂಡಾರಿ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಆರೋಪಿಗೆ ಪೋಕ್ಸೋ ಕಾಯಿದೆಯ ಕಲಂ 10ರ ಅಡಿಯಲ್ಲಿ 6 ವರ್ಷಗಳ ಕಠಿನ ಸಜೆ ಹಾಗೂ 20,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ, ಭಾರತೀಯ ದಂಡ ಸಂಹಿತೆಯ ಕಲಂ 354ರ ಅಡಿಯಲ್ಲಿ 3 ವರ್ಷಗಳ ಕಠಿನ ಸಜೆ ಮತ್ತು 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 3 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಸಂತ್ರಸ್ತ ಬಾಲಕಿಗೆ ಸರಕಾರ 1 ಲ.ರೂ.ಗಳನ್ನು ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೋಕೊÕà ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು
Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ
Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ
Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್