ಲೇಡಿಗೋಶನ್‌ ಆಸ್ಪತ್ರೆ:ಹೊಸ ಕಟ್ಟಡಕ್ಕೆಇನ್ನೂಸಿಕ್ಕಿಲ್ಲಉದ್ಘಾಟನೆಭಾಗ್ಯ


Team Udayavani, Feb 17, 2019, 4:37 AM IST

17-february-1.jpg

ಮಹಾನಗರ: ಸೇವಾರಂಭಕ್ಕೆ ಸಿದ್ಧವಾಗಿದ್ದರೂ ಅಗ್ನಿಶಾಮಕ ಕಚೇರಿಯಿಂದ ಭದ್ರತೆಗೆ ಸಂಬಂಧಿಸಿದ ಕ್ಲಿಯರೆನ್ಸ್‌ ಪ್ರಮಾಣಪತ್ರ ಸಿಗದ ಹಿನ್ನೆಲೆಯಲ್ಲಿ ಲೇಡಿಗೋಶನ್‌ ಆಸ್ಪತ್ರೆಯ ಹೊಸ ಕಟ್ಟಡ ಲೋಕಾರ್ಪಣೆಗೊಳಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪ್ರಮಾಣಪತ್ರ ಲಭ್ಯವಾದ ಬಳಿಕ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ.

ಲೇಡಿಗೋಶನ್‌ ಆಸ್ಪತ್ರೆಯ ನೂತನ ಕಟ್ಟಡದ ಎಲ್ಲ ಕೆಲಸಗಳು ಮುಗಿದಿದ್ದು, ಉದ್ಘಾಟನೆಗೆ ಸಿದ್ಧವಾಗಿವೆ. ಈಗಾಗಲೇ ವೈದ್ಯಕೀಯ ಸೇವೆಗೆ ಬೇಕಾದ ಬಹುತೇಕ ಉಪಕರಣಗಳನ್ನು ಸ್ಥಳಾಂತರ ಮಾಡಲಾಗಿದೆ. ಅಲ್ಲದೆ, ಸಹಜ ಹೆರಿಗೆಯಾದ ತಾಯಂದಿರ ಉಪಚಾರವನ್ನು ಕಳೆದ ಜೂನ್‌ ತಿಂಗಳಿನಿಂದಲೇ ಆಸ್ಪತ್ರೆಯ ಮೊದಲ ಮಹಡಿಯಲ್ಲಿ ಮಾಡಲಾಗುತ್ತಿದೆ. ಆದರೆ, ಆಸ್ಪತ್ರೆಯ ಇತರ ವಿಭಾಗಗಳ ಕಾರ್ಯಾರಂಭ ಮಾಡುವ ಮುನ್ನ ಅಗ್ನಿಶಾಮಕ ಕಚೇರಿಯಿಂದ ಭದ್ರತೆಗೆ ಸಂಬಂಧಿಸಿದ ಪ್ರಮಾಣಪತ್ರ ಪಡೆದು ಕೊಳ್ಳಬೇಕಿದೆ. ಪ್ರಮಾಣಪತ್ರ ಸಿಗದ ಹಿನ್ನೆಲೆಯಲ್ಲಿ ನೂತನ ಕಟ್ಟಡವನ್ನು ಸೇವೆಗಾಗಿ ಬಳಸಿಕೊಳ್ಳುವುದು ಅಸಾಧ್ಯವಾಗುತ್ತಿದೆ. ಅಗ್ನಿ ಆಕಸ್ಮಿಕಗಳನ್ನು ತಡೆಯಲು, ಮುನ್ನೆಚ್ಚರಿಕೆ ವಹಿಸಲು ಆಸ್ಪತ್ರೆಯಲ್ಲಿ ಅಳವಡಿಸಲಾದ ವ್ಯವಸ್ಥೆಗಳನ್ನು ಪರಿಶೀಲಿಸಿ ಮಂಗಳೂರಿನಿಂದ ಕಳೆದ ಜನವರಿ 29ರಂದು ಬೆಂಗಳೂರು ಅಗ್ನಿಶಾಮಕ ಕಚೇರಿಗೆ ಪತ್ರ ಕಳುಹಿಸಲಾಗಿದೆ. ಅಲ್ಲಿ ವರದಿ ಪರಿಶೀಲಿಸಿ, ಬಳಿಕ ಪ್ರಮಾಣಪತ್ರವನ್ನು ನೀಡಬೇಕು. ಆದರೆ, ಇನ್ನೂ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಹೊಸ ಕಟ್ಟಡ ಉದ್ಘಾಟನೆ ತಡವಾಗುತ್ತಿದೆ.

ಸಮಯಾವಕಾಶ ಅಗತ್ಯ
ಆಸ್ಪತ್ರೆಯ ಹೊಸ ಕಟ್ಟಡದಲ್ಲಿ ತೀವ್ರ ನಿಗಾ ಘಟಕವಿದೆ. ಅಲ್ಲದೆ, ವಿದ್ಯುತ್‌ ಚಾಲಿತ ಕೆಲವು ಯಂತ್ರಗಳನ್ನೂ ಅಳವಡಿಸಲಾಗಿರುವುದರಿಂದ ಪ್ರಮಾಣಪತ್ರ ಸಿಗದೆ, ಕಾರ್ಯಾರಂಭ ಮಾಡುವುದು ಸಮಸ್ಯೆಯಾಗುತ್ತದೆ. ಈ ಬಗ್ಗೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ಸವಿತಾ ಅವರನ್ನು ಸಂಪರ್ಕಿಸಿದಾಗ, ‘ವರದಿ ಪರಿಶೀಲನೆಗೆ ಸಮಯಾವಕಾಶ ಬೇಕಾಗುತ್ತದೆ. ಕೆಲವೇ ದಿನಗಳಲ್ಲಿ ಪ್ರಮಾಣಪತ್ರ ಸಿಗಬಹದು. ಪ್ರಮಾಣಪತ್ರ ಲಭ್ಯವಾದ ಬಳಿಕ ಆಸ್ಪತ್ರೆ ಲೋಕಾರ್ಪಣೆಗೊಳ್ಳಲಿದೆ’ ಎಂದರು.

ಒದಗದ ಲೋಕಾರ್ಪಣೆ ಭಾಗ್ಯ
ಪ್ರತಿ ಬಾರಿ ಸಭೆ, ಪರಿಶೀಲನೆ ನಡೆದಾಗಲೂ ಶೀಘ್ರ ಕಟ್ಟಡ ಲೋಕಾರ್ಪಣೆಯಾಗಲಿದೆ ಎಂದು ಬಂಧಪಟ್ಟವರು ಹೇಳುತ್ತಲೇ ಬಂದಿದ್ದರು. 2017ರ ಮಾರ್ಚ್‌ನಲ್ಲಿ ಆಸ್ಪತ್ರೆ ಲೋಕಾರ್ಪಣೆಗೊಳ್ಳಲಿದೆ ಎಂದಿದ್ದರು ಆದರೆ, ಆಗ ಆಗಿರಲಿಲ್ಲ. ಬಳಿಕ 2018ರ ಜೂನ್‌, ಜುಲೈ, ಡಿಸೆಂಬರ್‌ನಲ್ಲಿ ಕಟ್ಟಡ ಲೋಕಾರ್ಪಣೆಯಾಗಲಿದೆ ಎಂದು ಹೇಳಲಾಗಿತ್ತಾದರೂ ಕಟ್ಟಡಕ್ಕೆ ಲೋಕಾರ್ಪಣೆ ಭಾಗ್ಯ ಒದಗಿ ಬಂದಿರಲಿಲ್ಲ.

 ತಿಂಗಳು ಬೇಕಾಗಬಹುದು
ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಅಗ್ನಿಶಾಮಕ ವ್ಯವಸ್ಥೆಗೆ ಸಂಬಂಧಿಸಿದಂತೆ ಕ್ಲಿಯರೆನ್ಸ್‌ ಪತ್ರ ನೀಡಲು ಕೋರಿಕೆ ಪತ್ರ ಈಗಾಗಲೇ ದೊರಕಿದ್ದು, ಅನುಮೋದನೆಗೆ ಡಿಜಿಯವರಿಗೆ ಕಳುಹಿಸಲಾಗುವುದು. ಚಲನ್‌ ಮೂಲಕ ಹಣ ಪಾವತಿಸಿದ ಬಳಿಕ ಕ್ಲಿಯರೆನ್ಸ್‌ ಪ್ರಮಾಣಪತ್ರ ನೀಡಲಾಗುತ್ತದೆ. ಈ ಪ್ರಕ್ರಿಯೆಗೆ ಒಂದು ತಿಂಗಳು ಬೇಕಾಗುತ್ತದೆ.
 – ಶಿವಕುಮಾರ್‌,
ಉಪ ನಿರ್ದೇಶಕರು ಅಗ್ನಿಶಾಮಕ ಕಚೇರಿ, ಬೆಂಗಳೂರು

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.