Mangaluru ಎಂಡಿಎಂಎ ಮಾರಾಟ: ಆರೋಪಿಯ ಬಂಧನ
Team Udayavani, Feb 23, 2024, 10:10 PM IST
ಮಂಗಳೂರು: ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಅಪರಾಧ ಪತ್ತೆದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಮೂಡುಶೆಡ್ಡೆಯ ಮೊಹಮ್ಮದ್ ರಿಜ್ವಾನ್ (34) ಬಂಧಿತ ಆರೋಪಿ.
ಪಡುಶೆಡ್ಡೆ ಗ್ರಾಮದ ಬೊಂದೆಲ್ ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೇ ಅಂಡರ್ಪಾಸ್ ಬಳಿಯಲ್ಲಿ ಒಬ್ಬ ವ್ಯಕ್ತಿ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಆರೋಪಿಯಿಂದ 75,000 ರೂ. ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾ ಸೇರಿದಂತೆ ಒಟ್ಟು 91,280 ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈತನ ಮೇಲೆ ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಠಾಣೆ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ