ಮರ್ಕಂಜ: ನಾಪತ್ತೆಯಾಗಿದ್ದ ಮಹಿಳೆ ಸುಳ್ಯ ಠಾಣೆ ಹಾಜರು
Team Udayavani, Jan 24, 2023, 11:04 PM IST
ಅರಂತೋಡು: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ನವವಿವಾಹಿತೆ ಮರ್ಕಂಜ ಗ್ರಾಮದ ರಾಜಶೇಖರ ಅವರ ಪತ್ನಿ ಕೀರ್ತಿಶ್ರೀ ಪತ್ತೆಯಾಗಿದ್ದಾರೆ.
ಕೀರ್ತಿಶ್ರೀ ಕಾಣೆಯಾಗಿರುವುದಾಗಿ ಆಕೆಯ ಪತಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ರವಿ ವಾರ ರಾತ್ರಿ ಸುಳ್ಯ ಪೊಲೀಸ್ ಠಾಣೆಗೆ ಹಾಜರಾದ ಕೀರ್ತಿಶ್ರೀ ತನ್ನ ತಾಯಿಯ ಮನೆಗೆ ಹೋಗಿದ್ದಾಗಿ ಹೇಳಿದ ಹಿನ್ನೆಲೆಯಲ್ಲಿ ಮನೆಯವರನ್ನು ಕರೆಸಿ ಅವರೊಂದಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
ಜ. 21ರಂದು ಆರೋಗ್ಯ ಸರಿ ಇಲ್ಲವೆಂದು ಕೀರ್ತಿಶ್ರೀ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಅವರ ಪತಿ ಮನೆಯಿಂದ ಜೀಪಿನಲ್ಲಿ ಬೆಳಗ್ಗೆ 10ಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಎಲಿಮಲೆಯ ಕ್ಲಿನಿಕ್ ಗೆ ಹೋಗುವುದಕ್ಕೆ ಬಸ್ ಹತ್ತಿಸಿದ್ದರು. 10.30ಕ್ಕೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಳಿಕ ಎಲ್ಲ ಕಡೆ, ಆಕೆಯ ಸಂಬಂಧಿಕರ ಮನೆಗಳಲ್ಲಿಯೂ ವಿಚಾರಿಸಿದಾಗ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಹೀಗಾಗಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.
ಇದನ್ನೂ ಓದಿ: ಮದ್ದೂರು ತಾಲೂಕು ಕಚೇರಿ ಹೊರ ಆವರಣದಲ್ಲಿ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ