
ಮೇ 3: ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ
Team Udayavani, Jan 31, 2023, 6:50 AM IST

ಬೆಳ್ತಂಗಡಿ : ಧರ್ಮಸ್ಥಳದಲ್ಲಿ 2023ರ ಮೇ 3ರಂದು ಸಂಜೆ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು 1972ರಿಂದ ಉಚಿತ ಸಾಮೂಹಿಕ ವಿವಾಹವನ್ನು ಪ್ರತೀ ವರ್ಷ ನಡೆಸುತ್ತಿದ್ದು, ಈ ತನಕ ಒಟ್ಟು 12,576 ಜೋಡಿ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಇಲ್ಲಿ ಮದುವೆ ಆಗಲಿಚ್ಛಿಸುವವರು ಎ. 20ರೊಳಗೆ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08256-266644 ಸಂಪರ್ಕಿಸುವಂತೆ ಕ್ಷೇತ್ರದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
