ರಾಜೇಶ್‌, ಅಶ್ವಿ‌ನ್‌ ಸನಿಲ್‌ ಅವರಿಗೆ ಸಮ್ಮಾನ


Team Udayavani, Sep 20, 2018, 12:03 PM IST

20-sepctember-9.jpg

ಮಹಾನಗರ: ದಕ್ಷಿಣ ಕೊರಿಯಾದ ಚಿಂಗ್‌ಜುನಲ್ಲಿ ಸೆ. 9ರಿಂದ 17ರ ವರೆಗೆ ನಡೆದ ಅಂತಾರಾಷ್ಟ್ರೀಯ ಅಗ್ನಿಶಾಮಕ ಕ್ರೀಡಾಕೂಟದಲ್ಲಿ ಪದಕ ಜಯಿಸಿದ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಸಿಬಂದಿ ರಾಜೇಶ್‌ ಕೆ. ಮಡಿವಾಳ ಹಾಗೂ ಅಶ್ವಿ‌ನ್‌ ಸನಿಲ್‌ ಅವರನ್ನು ಮಂಗಳೂರಿನ ಪಾಂಡೇಶ್ವರದಲ್ಲಿ ಅಗ್ನಿಶಾಮಕ ಠಾಣೆಯಲ್ಲಿ ಬುಧವಾರ ಸಮ್ಮಾನಿಸಲಾಯಿತು.

ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ನಿರ್ದೇಶಕ ಎಚ್‌.ಎಸ್‌. ವರದರಾಜನ್‌ ಅಧ್ಯಕ್ಷತೆ ವಹಿಸಿ ಸಮ್ಮಾನ ನೆರವೇರಿಸಿದರು. ಕ್ರೀಡಾಕೂಟದಲ್ಲಿ ದೇಶಕ್ಕೆ 15 ಪದಕ ಲಭ್ಯವಾಗಿದ್ದು, ಅದರಲ್ಲಿ ಮೂರು ಪದಕಗಳನ್ನು ಕರ್ನಾಟಕ ಪಡೆದುಕೊಂಡಿದೆ. ಆ ಮೂರೂ ಪದಕಗಳು ಮಂಗಳೂರಿನ ಸಿಬಂದಿ ಪಡೆದಿರುವುದು ಹೆಮ್ಮೆಯ ವಿಚಾರ ಎಂದರು.

ನಾಗಪುರದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ರಾಜೇಶ್‌ ಹಾಗೂ ಅಶ್ವಿ‌ನ್‌ ಸನಿಲ್‌ ಅವರು ಪದಕ ಜಯಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಅರ್ಹತೆ ಪಡೆದ ಬಳಿಕವಷ್ಟೆ ಅವರನ್ನು ಸ್ಪರ್ಧೆಗೆ ಕಳುಹಿಸಲು ತೀರ್ಮಾನಿಸಿ ತಯಾರಿ ನಡೆಸಲಾಯಿತು. ಈವರೆಗೆ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಕಾಶ ಕರ್ನಾಟಕ ಅಗ್ನಿಶಾಮಕ ಇಲಾಖೆ ಸಿಬಂದಿಗೆ ದೊರಕಿರಲಿಲ್ಲ. ಈ ಬಾರಿಯ ಯಶಸ್ಸು ಮುಂದೆ ಇನ್ನಷ್ಟು ಕ್ರೀಡಾ ಪ್ರತಿಭೆಗಳನ್ನು ಕ್ರೀಡಾಕೂಟಕ್ಕೆ ಕಳುಹಿಸಲು ಹಾಗೂ ಪದಕಗಳನ್ನು ಜಯಿಸಲು ಪ್ರೇರಣೆ ನೀಡಿದೆ ಎಂದರು.

ಅಂತಾರಾಷ್ಟ್ರೀಯ ಅಗ್ನಿಶಾಮಕ 13ನೇ ಕ್ರೀಡಾಕೂಟದಲ್ಲಿ ಅಶ್ವಿ‌ನ್‌ ಸನಿಲ್‌ ಅವರು 100 ಮೀಟರ್‌ ಓಟದಲ್ಲಿ 4ನೇ ಸ್ಥಾನ ಹಾಗೂ ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ. ರಾಜೇಶ್‌ ಕೆ. ಮಡಿವಾಳ ಅವರು ಬೆಂಚ್‌ಪ್ರಸ್‌ನ 135 ಕೆಜಿ ವಿಭಾಗದಲ್ಲಿ ಹಾಗೂ ಪವರ್‌ ಲಿಫ್ಟಿಂಗ್ ನ 435 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಅಶ್ವಿ‌ನ್‌ ಸನಿಲ್‌ ಅವರು, ಪದಕ ಜಯಿಸಿ ಬಂದ ತಮಗೆ ಇಲಾಖೆಯ ವತಿಯಿಂದ ನೀಡಿದ ಪ್ರೋತ್ಸಾಹದಿಂದ ಇನ್ನೂ ಹೆಚ್ಚಿನ ಸಾಧನೆಗೆ ಹುಮ್ಮಸ್ಸು ನೀಡಿದೆ ಎಂದರು. ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ತಿಪ್ಪೇಸ್ವಾಮಿ ಸ್ವಾಗತಿಸಿದರು. ಉಡುಪಿಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

1-rwr

ಭಟ್ಕಳ : ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿಯಾದ ಅಂಬುಲೆನ್ಸ್ ;ರೋಗಿ ಪಾರು

ಎರತಯುಇಒಇಕಜಹಗ್

ಐತಿಹಾಸಿಕ ನೆಲೆಗಳ ಸಂರಕ್ಷ ಣೆ ಅಗತ್ಯ: ಎಡಿಸಿ ಬಾಲಕೃಷ್ಣ

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

ದ್ತಯುಇ9ಇಯತಗ್ಸದಷ

ಮೆಕ್ಕೆಜೋಳ ಇ-ಟೆಂಡರ್‌ಗೆ ಭರಪೂರ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.