ವೈದ್ಯಕೀಯ ವಿದ್ಯಾರ್ಥಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
Team Udayavani, Nov 8, 2022, 11:52 PM IST
ಮಂಗಳೂರು: ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿಯೋರ್ವರ ಸಾವಿನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಮಂಗಳೂರಿನಲ್ಲಿ ವಿದಾಭ್ಯಾಸ ಮಾಡುತ್ತಿದ್ದ ರೋಹಿತ್ ರಾಧಾಕೃಷ್ಣನ್ ಅವರ ಮೃತದೇಹ 2014ರ ಮಾ.23ರಂದು ತಣ್ಣೀರುಬಾವಿ ಬೀಚ್‌ನ ರಸ್ತೆ ಬದಿ ಪೊದೆಗಳ ಬಳಿ ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದು ಅಪಘಾತ ಪ್ರಕರಣವೆಂದು ದಾಖಲಾಗಿತ್ತು.
ವಕೀಲರಾಗಿರುವ ರೋಹಿತ್ ಅವರ ತಂದೆ ಕೇರಳ ನಿವಾಸಿ ಎಂ.ಎಸ್.ರಾಧಾಕೃಷ್ಣನ್ ಅವರು ಪ್ರಕರಣದ ಬಗ್ಗೆ ಸಂದೇಹ ವ್ಯಕ್ತಪಡಿಸಿ ಹೆಚ್ಚಿನ ತನಿಖೆಗೆ ಒತ್ತಾಯಿಸಿದ್ದರು. ಬಳಿಕ ಈ ಬಗ್ಗೆ ಸಿಐಡಿ ತನಿಖೆ ನಡೆಸಿತ್ತು. ಸಿಐಡಿ ತನಿಖೆಯ ಬಗ್ಗೆಯೂ ರಾಧಾಕೃಷ್ಣನ್ ಅವರು ಅಸಮಾಧಾನ ವ್ಯಕ್ತಪಡಿಸಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ.
ಸಿಐಡಿ ಸಮರ್ಪಕವಾಗಿ ತನಿಖೆ ನಡೆಸಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ಅರ್ಜಿದಾರ ರಾಧಾಕೃಷ್ಣನ್ ಅವರಿಗೆ ನ್ಯಾಯಾಲಯ ವೆಚ್ಚವಾಗಿ 1 ಲ.ರೂ.ಗಳನ್ನು ನಾಲ್ಕು ವಾರದೊಳಗೆ ಪಾವತಿಸಬೇಕು ಎಂದು ಸಿಐಡಿಗೆ ಆದೇಶ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ
ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ
ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು
ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ