ಮಳೆಹಾನಿ,ಕಡಲ್ಕೊರೆತಪ್ರದೇಶಗಳಿಗೆ ಸಚಿವ ದೇಶಪಾಂಡೆ ಭೇಟಿ,ಪರಿಹಾರವಿತರಣೆ


Team Udayavani, Jun 15, 2018, 10:41 AM IST

15-june-2.jpg

ಮಹಾನಗರ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಬಿಜೈ ಆನೆಗುಂಡಿ ಪ್ರದೇಶ ಹಾಗೂ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್‌.ವಿ. ದೇಶಪಾಂಡೆ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿಜೈ ಆನೆಗುಂಡಿ ಎಂಬಲ್ಲಿ ಮರ ಬಿದ್ದು ಬಹುತೇಕವಾಗಿ ಹಾನಿಗೊಳಗಾಗಿರುವ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ತುರ್ತು ಪರಿಹಾರವಾಗಿ ತಲಾ 1ಲಕ್ಷ 19 ಸಾವಿರ ರೂ.ಗಳನ್ನು ಆ ಮನೆಗಳ ಮಾಲಕರಾದ ಭವಾನಿ ಹಾಗೂ ಅನುರಾಧಾ ಎಂಬವರಿಗೆ ಹಸ್ತಾಂತರಿಸಿದರು.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಸಾಕಷ್ಟು ಹಾನಿಯಾಗಿದೆ. ತುರ್ತು ಪರಿಹಾರಕ್ಕಾಗಿ 2 ಜಿಲ್ಲೆಗಳಿಗೆ ತಲಾ 3 ಕೋ. ರೂ. ಬಿಡುಗಡೆ ಮಾಡಿರುವುದಾಗಿ ಹೇಳಿದರು.

5 ಕೋಟಿ ರೂ. ಮೀಸಲಿಡಲು ಸೂಚನೆ
ಪ್ರಾಕೃತಿಕ ವಿಕೋಪದ ಪರಿಹಾರವಾಗಿ ಪ್ರತಿಯೊಂದು ಜಿಲ್ಲಾಧಿಕಾರಿ ಕನಿಷ್ಠ 5 ಕೋಟಿ ರೂ. ಮೀಸಲಿಡುವಂತೆ ಹಾಗೂ ತುರ್ತು ಪರಿಹಾರ ಕ್ರಮಗಳು ಯುದ್ಧೋ ಪಾದಿಯಲ್ಲಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಪ್ರಾಕೃತಿಕ ವಿಕೋಪದಿಂದಾಗಿ ಮನೆಗಳಿಗೆ ಸಂಪೂರ್ಣ ಅಥವಾ ಭಾಗಶಃ ಹಾನಿಯಾಗಿದ್ದಲ್ಲಿ ಪರಿಹಾರವಾಗಿ ಸಿಗುವ ಮೊತ್ತ ಕಡಿಮೆ. ಅದನ್ನು ಯಾವ ರೀತಿಯಲ್ಲಿ ಹೆಚ್ಚಿಸಬಹುದು ಎಂಬ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಕೆಲವರು ಬಾಡಿಗೆ ಮನೆಯಲ್ಲಿದ್ದಾರೆ. ಅವರಿಗೆ ಸಿಕ್ಕಿಲ್ಲ. ಅವರಿಗೂ ಯಾವ ರೀತಿಯಲ್ಲಿ ಸಹಾಯ ಮಾಡಲು ಸಾಧ್ಯ ಎಂಬುದನ್ನು ನಿರ್ಣಯಿಸಲಾಗುವುದು ಎಂದು ಹೇಳಿದರು.

ಚಾರ್ಮಾಡಿ ಘಾಟಿಯಲ್ಲಿ ನಿನ್ನೆ ಮತ್ತೆ ಸಮಸ್ಯೆ ಆಗಿದೆ. ಜಿಲ್ಲಾಧಿಕಾರಿ ಈಗಾಗಲೇ ವಾಹನ ಸಂಚಾರವನ್ನು ನಿಷೇಧಿಸಿ ಆದೇಶಿಸಿದ್ದಾರೆ. ಆ ರಸ್ತೆ ಜನ ಸಂಚಾರಕ್ಕೆ ಸುರಕ್ಷಿತವಾದಾಕ್ಷಣ ಬಂದ್‌ ತೆರವುಗೊಳಿಸಲಾಗುವುದು ಎಂದರು. ನಗರಾಭಿವೃದ್ಧಿ ಸಚಿವ ಖಾದರ್‌, ಮೇಯರ್‌ ಭಾಸ್ಕರ ಮೊಲಿ, ವಿ. ಪ. ಸದಸ್ಯ ಹರೀಶ್‌ ಕುಮಾರ್‌, ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಮನಪಾ ಆಯುಕ್ತ ಮಹಮ್ಮದ್‌ ನಝೀರ್‌, ಶಶಿಧರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಕಡಲ್ಕೊರೆತ ತಡೆ ಕಾಮಗಾರಿ ವೀಕ್ಷಣೆ 
ಬಳಿಕ ಸಚಿವರು ಸೋಮೇಶ್ವರ- ಉಚ್ಚಿಲ ಹಾಗೂ ಉಳ್ಳಾಲದ ಸಮುದ್ರ ತೀರದಲ್ಲಿ ಕಡಲ್ಕೊರೆತ ಸಮಸ್ಯೆ ಪರಿಹಾರಕ್ಕಾಗಿ ನಡೆಸಲಾದ ತಡೆಗೋಡೆ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿದರು.

ಟಾಪ್ ನ್ಯೂಸ್

2shasti

ನಾಗ‌ ಶ್ರೇಷ್ಠ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಇಂದು ಚಂಪಾ ಷಷ್ಠೀ

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

29 ವರ್ಷಗಳ ಹಿಂದೆ ಸಕಲೇಶಪುರದಲ್ಲೂ ಸೇನಾ ಹೆಲಿಕಾಪ್ಟರ್ ಪತನ

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು

ತಮಿಳುನಾಡಿನಲ್ಲಿ ಸೌರ ಘಟಕ ಸ್ಥಾಪನೆಗೆ ಅಮೆರಿಕ ನೆರವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

4toilet

ಶೌಚಾಲಯ ಕಟ್ಟಲು ಇಒ ತಾಕೀತು

3life

ದೈನಂದಿನ ಕಾರ್ಯದಲ್ಲಿ ಬದಲಾವಣೆ ಮಾಡಿ

2shasti

ನಾಗ‌ ಶ್ರೇಷ್ಠ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಇಂದು ಚಂಪಾ ಷಷ್ಠೀ

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.