ಅಂಚೆಯಣ್ಣನ ಕೈಗೆ ಮೊಬೈಲ್‌; ಪೇಪರ್‌ಲೆಸ್‌ ಬಟವಾಡೆ

Team Udayavani, Feb 14, 2019, 12:30 AM IST

indian-postal-department.jpg

ಮಂಗಳೂರು: ಕರಾವಳಿ ಭಾಗದ ಅಂಚೆ ಅಣ್ಣಂದಿರು ಇನ್ನು ಮುಂದೆ ಸ್ಮಾರ್ಟ್‌ ಆಗಲಿದ್ದಾರೆ. ರಿಜಿಸ್ಟರ್ಡ್‌, ಸ್ಪೀಡ್‌ಪೋಸ್ಟ್‌, ಮನಿ ಆರ್ಡರ್‌, ಪಾರ್ಸೆಲ್‌ನಂಥ ಅಂಚೆಗಳ ಬಟವಾಡೆಗೆ ಸ್ವೀಕೃತಿ ಸಹಿ ಪಡೆಯಲು ಅವರು ಇಲಾಖೆ ನೀಡಿದ ಸ್ಮಾರ್ಟ್‌ ಫೋನ್‌ ಬಳಸಲಿದ್ದಾರೆ.

ಎಟಿಎಂ, ಆನ್‌ಲೈನ್‌ ಬ್ಯಾಂಕಿಂಗ್‌ನಂತಹ ಆಧುನಿಕ ಸೇವೆಗಳನ್ನು ಪರಿಚಯಿಸಿದ ಬಳಿಕ ಭಾರತೀಯ ಅಂಚೆ ಕರಾವಳಿಯಲ್ಲಿ ಇಂತಹದೊಂದು ಬದಲಾವಣೆಗೆ ತೆರೆದುಕೊಳ್ಳುತ್ತಿದೆ.

ಈಗಾಗಲೇ 30ರಷ್ಟು ಅಂಚೆ ಅಣ್ಣಂದಿರು ಈ ಸೌಲಭ್ಯ ಬಳಸುತ್ತಿದ್ದು, ಬಾಕಿ ಇರುವ ಅಂಚೆ ಅಣ್ಣಂದಿರು ಇನ್ನು ಒಂದೆರಡು ತಿಂಗಳಲ್ಲಿ ಬಳಕೆ ಆರಂಭಿಸಲಿದ್ದಾರೆ. ಇದಕ್ಕಾಗಿ ಅವರಿಗೆ ತರಬೇತಿ ನೀಡಲಾಗಿದೆ.

ಕಾರ್ಯ ನಿರ್ವಹಣೆ ಹೇಗೆ ?
ಸದ್ಯ ರಿಜಿಸ್ಟರ್‌ ಪೋಸ್ಟ್‌, ಸ್ಪೀಡ್‌ ಪೋಸ್ಟ್‌, ಮನಿ ಆರ್ಡರ್‌, ಪಾರ್ಸೆಲ್‌ನಂತಹ ಬಟವಾಡೆಗಳನ್ನು ಪೋಸ್ಟ್‌ಮನ್‌ ವಿಳಾಸದಾರರಿಗೆ ಹಸ್ತಾಂತರಿಸಿದ ಬಳಿಕ ಮುದ್ರಿತ ನಮೂನೆಯಲ್ಲಿ ಸಹಿ ಪಡೆದುಕೊಳ್ಳುತ್ತಾರೆ. ಕಚೇರಿಗೆ ಮರಳಿದ ಬಳಿಕ ಆಯಾ ದಿನದ ಒಟ್ಟು ಬಟವಾಡೆ ವಿವರಗಳನ್ನು ಅಂಚೆ ಇಲಾಖೆಯ ದಾಖಲೆಯಲ್ಲಿ ನಮೂದಿಸುತ್ತಾರೆ. ಇನ್ನು ಮುಂದೆ ಬಟವಾಡೆಯ ಬಳಿಕ ಮೊಬೈಲ್‌ನಲ್ಲಿ ಸಹಿ ಮಾಡಿಸಿಕೊಂಡು ಸಂಪರ್ಕ ದೂರವಾಣಿ ಸಂಖ್ಯೆಯನ್ನು ನಮೂದಿಸುತ್ತಾರೆ. ಅನಂತರ ಡೆಲಿವರಿ ಮಾಡಿದ ವಸ್ತು, ಸಮಯ, ವಿಳಾಸ ಮತ್ತಿತರ ಮಾಹಿತಿಗಳನ್ನು ಬಾರ್‌ಕೋಡ್‌ ಮೂಲಕ ಮೊಬೈಲ್‌ ಆ್ಯಪ್‌ನಲ್ಲಿ ನಮೂದಿಸುತ್ತಾರೆ. ವಿವರಗಳು ಪ್ರಧಾನ ಕಚೇರಿಯ ಕಂಪ್ಯೂಟರ್‌ನಲ್ಲಿ ಸೇರ್ಪಡೆಗೊಳ್ಳುತ್ತವೆ. ಇದರಿಂದ ತ್ವರಿತಗತಿಯ ಅಂಚೆ ಸೇವೆ ಸಾಧ್ಯವಾಗಲಿದೆ. ಸಹಿ ಮಾಡುವಂತೆ ಹೆಬ್ಬೆಟ್ಟು ಒತ್ತುವವರಿಗೂ ಆಯ್ಕೆಯಿದೆ.

ಜಿಪಿಎಸ್‌ ಇರಲಿದೆ
ಕೆಲವೆಡೆ ಪೋಸ್ಟ್‌ಮನ್‌ಗಳು ತಾವಿರುವ ಸ್ಥಳಕ್ಕೆ ವಿಳಾಸದಾರರನ್ನು ಕರೆದು ಬಟವಾಡೆ ಮಾಡುವ ಪರಿಸ್ಥಿತಿ ಇದೆ. ಈ ಕಾರಣದಿಂದ ಮುಂದೆ ಇದೇ ಆ್ಯಪ್‌ನಲ್ಲಿ ಜಿಪಿಎಸ್‌ ಅಳವಡಿಕೆ ಕೂಡ ಮಾಡಲಾಗುತ್ತದೆ. ಇದರಿಂದ ಬಟವಾಡೆ ಎಲ್ಲಿ ನಡೆದಿದೆ ಎಂಬ ಮಾಹಿತಿ ದಾಖಲಾಗುತ್ತದೆ. ಇಲಾಖೆಯಲ್ಲಿ ಇದೊಂದು ಮಹತ್ತರ ಬದಲಾವಣೆ ಎಂದು “ಉದಯವಾಣಿ’ ಜತೆಗೆ ಮಾತನಾಡಿದ ಮಂಗಳೂರಿನ ಪೋಸ್ಟ್‌ಮನ್‌ ಒಬ್ಬರು ತಿಳಿಸಿದ್ದಾರೆ. 

3,000 ಪೋಸ್ಟ್‌ಮನ್‌ಗಳು
ದ.ಕ. ಹಾಗೂ ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿ ಅಂಚೆ ಇಲಾಖೆಯಲ್ಲಿ ಮಂಗಳೂರು, ಪುತ್ತೂರು ಹಾಗೂ ಉಡುಪಿ ವಿಭಾಗಗಳಿವೆ. ಮಂಗಳೂರು ಹಾಗೂ ಪುತ್ತೂರು ವಿಭಾಗದಲ್ಲಿ ಮುಖ್ಯ ಅಂಚೆ ಕಚೇರಿ, ಉಪ ವಿಭಾಗದ ಅಂಚೆ ಕಚೇರಿ ಹಾಗೂ ಗ್ರಾಮೀಣ ಅಂಚೆ ಕಚೇರಿ ಸೇರಿ ಒಟ್ಟು 540 ಹಾಗೂ ಉಡುಪಿಯಲ್ಲಿ 263 ಅಂಚೆಕಚೇರಿಗಳು ಸೇರಿ ಕರಾವಳಿಯಲ್ಲಿ ಒಟ್ಟು 803 ಅಂಚೆ ಕಚೇರಿಗಳಿವೆ. ಮಂಗಳೂರು ವಿಭಾಗ ವ್ಯಾಪ್ತಿಯಲ್ಲಿ ಸುಮಾರು 600 ಹಾಗೂ ಪುತ್ತೂರು ವಿಭಾಗ ವ್ಯಾಪ್ತಿಯಲ್ಲಿ ಸುಮಾರು 1,000ರಷ್ಟು ಪೋಸ್ಟ್‌ಮನ್‌ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಉಡುಪಿ ವ್ಯಾಪ್ತಿಯಲ್ಲಿ ಸುಮಾರು 1,500 ಮಂದಿ ಇದ್ದಾರೆ. ಈ ಎರಡು ಜಿಲ್ಲೆಗಳಲ್ಲಿ ಒಟ್ಟು ಸುಮಾರು 3,000ದಷ್ಟು ಪೋಸ್ಟ್‌ಮನ್‌ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. 

ತಂತ್ರಜ್ಞಾನ ಆಧಾರಿತ ಮೊಬೈಲ್‌ ಸೇವೆ
ಗ್ರಾಹಕರಿಗೆ ತ್ವರಿತಗತಿಯಲ್ಲಿ ಅಂಚೆ ವಿಲೇವಾರಿಗೆ ಹಾಗೂ ಅಂಚೆ ಬಟ ವಾಡೆಯ ಬಗ್ಗೆ ಸಕಾಲದಲ್ಲಿ ಮಾಹಿತಿ ಪಡೆ ಯಲು ಮೊಬೈಲ್‌ ಆ್ಯಪ್‌ ಸೇವೆಯನ್ನು ಪರಿಚಯಿಸಲಾಗಿದೆ. ಸದ್ಯ ಮಂಗಳೂರು ವ್ಯಾಪ್ತಿಯ 30ರಷ್ಟುಪೋಸ್ಟ್‌ಮನ್‌ ಈ ಸೇವೆ ಬಳಸುತ್ತಿದ್ದು, ಹಂತ ಹಂತವಾಗಿ ಎಲ್ಲರಿಗೂ ವಿಸ್ತರಿಸಲಾಗುವುದು. 
– ವಿಘ್ನೇಶ್‌ ಪೈ ಪಿ., ಸಿಸ್ಟಮ್‌ ಅಡ್ಮಿನಿಸ್ಟ್ರೇಟರ್‌, ಪ್ರಧಾನ ಅಂಚೆ ಕಚೇರಿ, ಮಂಗಳೂರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.