ನಾಳೆ ಕರಾವಳಿ ಭಾಗದಲ್ಲಿ ಕೊಂಕಣಿ ಕೆಥೋಲಿಕರ ಹಬ್ಬ “ಮೊಂತಿ ಫೆಸ್ತ್’ 


Team Udayavani, Sep 7, 2021, 3:10 AM IST

ನಾಳೆ ಕರಾವಳಿ ಭಾಗದಲ್ಲಿ  ಕೊಂಕಣಿ ಕೆಥೋಲಿಕರ ಹಬ್ಬ “ಮೊಂತಿ ಫೆಸ್ತ್’ 

ಮಹಾನಗರ: ರಾಜ್ಯದ ಕರಾವಳಿ ಭಾಗದ ಕೊಂಕಣಿ ಕೆಥೋಲಿಕ್‌ ಕ್ರೈಸ್ತರಿಗೆ ಸೆ. 8ರಂದು ಹಬ್ಬದ ದಿನ; ಅಂದು ಯೇಸು ಕ್ರಿಸ್ತರ ತಾಯಿ ಮೇರಿ ಅವರ ಜನ್ಮ ದಿನವಾಗಿದ್ದು, ಅದನ್ನು “ಮೊಂತಿ ಫೆಸ್ತ್’ ಹಬ್ಬವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೊಂಕಣಿ ಕೆಥೋಲಿಕರು ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಾರೆ.

ಧಾರ್ಮಿಕ, ಸಾಂಸ್ಕೃತಿಕವಾಗಿ ಈ ಮೊಂತಿ ಫೆಸ್ತ್ ಕೆಥೋಲಿಕ್‌ ಸಮುದಾಯದವರಿಗೆ ವಿಶಿಷ್ಟ ಹಬ್ಬ. ಕಳೆದ ವರ್ಷದಂತೆ ಈ ವರ್ಷವೂ ಕೊರೊನಾ ಸೋಂಕಿನ ಸಂಕಷ್ಟದ ನಡುವೆಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕೊರೊನಾ ಕಾರಣ ಸಂಭ್ರಮ, ಸಡಗರ ಇಲ್ಲದಿದ್ದರೂ ಸರಳವಾಗಿ ಆಚರಿಸಲು ಕರಾವಳಿಯ ಕೆಥೋಲಿಕರು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಹಬ್ಬಕ್ಕೆ ಪೂರ್ವಭಾವಿಯಾಗಿ ಚರ್ಚ್‌ಗಳಲ್ಲಿ 9 ದಿನಗಳ ನವೇನಾ ಪ್ರಾರ್ಥನೆಯ ಕಾರ್ಯಕ್ರಮ ಆ. 30ರಿಂದ ಪ್ರತಿ ದಿನ ಕೊರೊನಾ ಮಾರ್ಗಸೂಚಿಗಳನ್ವಯ ನಡೆದಿದೆ. ಮಕ್ಕಳು ಹೂವುಗಳ ರಾಶಿಯ ಬದಲು ಒಂದೊಂದು ಹೂವುಗಳನ್ನು ಕೊಂಡೊಯ್ದು ಮೇರಿ ಮಾತೆಗೆ ಅರ್ಚನೆ ಮಾಡಿ ಪ್ರಾರ್ಥಿಸಿದ್ದಾರೆ.

ಸಸ್ಯಹಾರಿ ಊಟ :

ಸಸ್ಯಾಹಾರಿ ಭೋಜನ “ಮೊಂತಿ ಫೆಸ್ತ್’ನ ವೈಶಿಷ್ಟ್ಯ. ಕನಿಷ್ಠ 5 ಬಗೆಯ ಸಸ್ಯಾಹಾರಿ ಪದಾರ್ಥಗಳಾದರೂ ಇರಬೇಕೆನ್ನುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯ. ಅದರಲ್ಲೂ “ಅಳು” (ಕೆಸುವಿನ ದಂಟು), “ದೆಂಟೊ’ (ಹರಿವೆ ದಂಟು), ಹೀರೆ, ಬೆಂಡೆ ಕಾಯಿಗೆ ಆದ್ಯತೆ. ಪಾಯಸ ಈ ಭೋಜನದ ಅವಿಭಾಜ್ಯ ಅಂಗ.

ಈ ದಿನ ಕೆಥೋಲಿಕರು ಬೆಳಗ್ಗೆ ಎದ್ದು ಹೂವುಗಳೊಂದಿಗೆ ಚರ್ಚ್‌ಗೆ ತೆರಳಿ, ಬಲಿಪೂಜೆಯಲ್ಲಿ ಪಾಲ್ಗೊಂಡು ಅಲ್ಲಿ ವಿತರಿಸಲಾಗುವ ಭತ್ತದ ತೆನೆಯನ್ನು ಮನೆಗೆ ತಂದು ಬಳಿಕ ಕುಟುಂಬದ ಎಲ್ಲರೂ  ಸಹಭೋಜನ ಮಾಡುತ್ತಾರೆ.  ಇನ್ನೊಂದು ವಿಶೇಷವೆಂದರೆ 9 ದಿನಗಳ ನವೇನಾ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮಕ್ಕಳಿಗೆ ಸಿಹಿ ತಿಂಡಿ ಮತ್ತು ಚರ್ಚ್‌ ವ್ಯಾಪ್ತಿಯ ಎಲ್ಲ ಕುಟುಂಬಗಳಿಗೆ ಚರ್ಚ್‌ ನಲ್ಲಿ ಕಬ್ಬು ವಿತರಿಸಲಾಗುತ್ತದೆ.

ತರಕಾರಿಗಳ ಬೆಲೆಗಳು ತುಸು ಏರಿಕೆ  :

ಈ ವರ್ಷ ಮೊಂತಿ ಹಬ್ಬ ಮತ್ತು ಗಣೇಶೋತ್ಸವ ಒಂದೇ ವಾರದಲ್ಲಿ ಎರಡು ದಿನಗಳ ಆಂತರದಲ್ಲಿ (ಸೆ. 8 ಮತ್ತು ಸೆ. 10) ನಡೆಯುತ್ತಿದ್ದು, ಎರಡೂ ಹಬ್ಬಗಳಲ್ಲಿ ಸ್ಥಳೀಯ ತರಕಾರಿಗಳಿಗೆ ಪ್ರಾಮುಖ್ಯ ಇರುವುದರಿಂದ ಹಾಗೂ ಕೆಲವು ದಿನಗಳಿಂದ ಪ್ರತಿಕೂಲ ಹವಾಮಾನದ ಕಾರಣ ತರಕಾರಿ ಕೃಷಿಯ ಮೇಲೆ ದುಷ್ಪರಿಣಾಮ ಬೀರಿದ್ದರಿಂದ ತರಕಾರಿಗಳ ಬೆಲೆಗಳು ತುಸು ಏರಿಕೆ ಆಗಿವೆ. ಮಂಗಳೂರಿನ ಮಾರುಕಟ್ಟೆಯಲ್ಲಿಯೂ ಆಯ್ದ ಕೆಲವು ತರಕಾರಿ ದರ ಸಹಜವಾಗಿ ಜಾಸ್ತಿಯಾಗಿದೆ.

ಸೆ. 6ದರಗಳು:

ಸ್ಥಳೀಯ ಬೆಂಡೆ 110 ರೂ. (ಸಾಮಾನ್ಯ ದರ 80 ರೂ.), ಹೀರೆಕಾಯಿ 60 ರೂ. (ಸಾಮಾನ್ಯ ದರ 40 ರೂ.), ಮುಳ್ಳು ಸೌತೆ 90 ರೂ. (ಸಾಮಾನ್ಯ ದರ 50/ 60 ರೂ.), ತೊಂಡೆ ಕಾಯಿ 80 ರೂ. (ಸಾಮಾನ್ಯ ದರ 50/60 ರೂ.), ಹರಿವೆ ದಂಟು 35 ರೂ. (ಸಾಮಾನ್ಯ ದರ 25), ಹಾಗಲಕಾಯಿ 70 ರೂ. (ಸಾಮಾನ್ಯ ದರ 50 ರೂ.), ಅಂಬಡೆ 60 ರೂ.

ಮಾರ್ಗಸೂಚಿಯನ್ವಯ ಹಬ್ಬ ಆಚರಣೆ :

ಮೊಂತಿ ಹಬ್ಬ ಆಚರಣೆಗೆ ಸಂಬಂಧಿಸಿ ಮಂಗಳೂರು ಧರ್ಮ ಪ್ರಾಂತದ ಬಿಷಪ್‌ ವಂ| ಪೀಟರ್‌ ಪಾವ್‌É ಸಲ್ಡಾನ್ಹಾ ಅವರು ಸರಕಾರದ ಆದೇಶಗಳನ್ನು ಗಮನದಲ್ಲಿರಿಸಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ಆಚರಣೆ ನಡೆಯಲಿದೆ.

ಹಬ್ಬದ ಹಿನ್ನೆಲೆ :

ಸೆಪ್ಟಂಬರ್‌ ಮಳೆಗಾಲದ ಕೊನೆಯ ತಿಂಗಳಾಗಿದ್ದು, ಈ ಸಂದರ್ಭ ಪ್ರಕೃತಿಯ ಎಲ್ಲೆಡೆ ಹಸುರುಮಯ ವಾತಾವರಣ ಕಂಡು ಬರುತ್ತದೆ. ಬೆಳೆಗಳು ಹುಲುಸಾಗಿ ಬೆಳೆದು, ನಳ ನಳಿಸಿ, ಕೊಯ್ಲಿಗೆ ಸಿದ್ಧವಾಗಿರುತ್ತವೆ. ಪ್ರಕೃತಿಯ ಈ ಕೊಡುಗೆಗಾಗಿ ಕೃತಜ್ಞತೆ ಸಲ್ಲಿಸಲು ವಿವಿಧ ಆಚರಣೆಗಳು ನಡೆಯುತ್ತವೆ. ಕರಾವಳಿಯಲ್ಲಿ ಪ್ರಕೃತಿ ಮಾತೆಯನ್ನು ವಿಶಿಷ್ಟ ರೀತಿಯಲ್ಲಿ ವಂದಿಸಲಾಗುತ್ತದೆ. ಕೊಂಕಣಿ ಕೆಥೋಲಿಕರು ಇದನ್ನು “ಮೊಂತಿ ಫೆಸ್ತ್’ ಆಗಿ ಆಚರಿಸಿ ಸಂಭ್ರಮಿಸುತ್ತಾರೆ.  ಅಂದು ಮೇರಿ ಮಾತೆಯ ಜಯಂತಿಯ ಜತೆಗೆ ಕೌಟುಂಬಿಕ ಸಮ್ಮಿಲನ, ಹೊಸ ಬೆಳೆಯ ಹಬ್ಬ ಹಾಗೂ ಹೆಣ್ಣು ಮಕ್ಕಳ ದಿನವನ್ನಾಗಿಯೂ ಆಚರಿಸುವುದು ಸಂಪ್ರದಾಯ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.