ಮೂಡಬಿದಿರೆ: ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ

Team Udayavani, Jan 24, 2018, 12:20 PM IST

24-Jan-13.jpg

ಮೂಡಬಿದಿರೆ: ಹಲವಾರು ಶೈಕ್ಷಣಿಕ ಚಟುವಟಿಕೆಗಳನ್ನೂ ನಡೆಸುವ ದೈಹಿಕ ಶಿಕ್ಷಣ ಶಿಕ್ಷಕರು ತಮ್ಮ ವೃತ್ತಿಯಲ್ಲಿ ಯಾವುದೇ ಭಡ್ತಿ ಇಲ್ಲದೆ ಅದೇ ವೃತ್ತಿಯಲ್ಲಿ ನಿವೃತ್ತಿ ಹೊಂದುವ ದುಸ್ಥಿತಿಯಲ್ಲಿದ್ದಾರೆ. ನಾಗರಿಕ ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ನ್ಯಾಯ ಒದಗಿಸಿಬೇಕಾಗಿದೆ ಎಂದು ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಎಚ್‌. ನಾಯಕ್‌ ಆಗ್ರಹಿಸಿದರು.

ಕರ್ನಾಟಕ ರಾಜ್ಯ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮೂಡಬಿದಿರೆ ಇವುಗಳ ಆಶ್ರಯದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್‌ ಅವರ 121ನೇ ಜನ್ಮದಿನದ ಪ್ರಯುಕ್ತ ಮೂಡಬಿದಿರೆ ಸ್ವರಾಜ್ಯ ಮೈದಾನದ ಕ್ರೀಡಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ – ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ 2018ನೇ ಸಾಲಿನ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಧ್ವಜಾರೋಹಣಗೈದರು. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಕ್ರೀಡಾಕೂಟ ಉದ್ಘಾಟಿಸಿದರು. ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸ್ವಾಮಿ ಸೇವಾ ಸಂಸ್ಥೆಯ ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ ಮುಖ್ಯಅತಿಥಿಯಾಗಿದ್ದರು.

ಪ್ರಧಾನ ಅತಿಥಿಗಳಾಗಿ ಜಿ.ಪಂ. ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ಡಿಡಿಪಿಐ ಶಿವರಾಮಯ್ಯ, ಕ್ಷೇತ್ರಶಿಕ್ಷಣಾಧಿಕಾರಿ ಎ. ಬಿ. ಕುಟಿನ್ಹೋ, ಜಿಲ್ಲಾ ದೈ.ಶಿ. ಅಧಿಕಾರಿ ರಘನಾಥ, ಕ್ಷೇತ್ರ ದೈ.ಶಿ. ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಸುವರ್ಣ ಸಂಭ್ರಮದ ರೋಟರಿ ಅಧ್ಯಕ್ಷ ಶ್ರೀಕಾಂತ ಕಾಮತ್‌, ಮೂಡಬಿದಿರೆ ಕ್ಷೇತ್ರ ಜೆಡಿಎಸ್‌ ಅಧ್ಯಕ್ಷ ಅಶ್ವಿ‌ನ್‌ ಜೆ. ಪಿರೇರಾ, ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಸುದರ್ಶನ ಎಂ., ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಕಾರ್ಯದರ್ಶಿ ರುಕ್ಕಯ ಪೂಜಾರಿ, ಕುವೆಂಪು ವಿವಿ ಮಾಜಿ ಸಿಂಡಿಕೇಟ್‌ ಸದಸ್ಯ ಎಸ್‌.ಪಿ. ದಿನೇಶ್‌, ಕೊಡಗು ಟೀಚರ್ ಕೋಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಕೆ. ಕೆ. ಮಂಜುನಾಥ್‌ ಕುಮಾರ್‌ ಕುಶಾಲ್‌ನಗರ, ಉದ್ಯಮಿ ನಾರಾಯಣ ಪೂಜಾರಿ ಬೋರುಗುಡ್ಡೆ, ಪ್ರಸ್‌ಕ್ಲಬ್‌ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ, ನಿವೃತ್ತ ದೈ.ಶಿ.ಶಿ. ನರಸಿಂಹ ಮಡಿವಾಳ, ಧವಲಾ ಕಾಲೇಜಿನ ದೈ.ಶಿ.ನಿ. ಶಾಂತಿ ರಾಜ ಕಾಂಬ್ಳಿ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಮ ಕೃಷ್ಣ ಶಿರೂರು, ಮೂಡಬಿದಿರೆ ಪ್ರಾ. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್‌ ಎಸ್‌., ಎಲ್ಲೈಸಿ ಅಭಿವೃದ್ಧಿ ಅಧಿಕಾರಿ ಮುನ್ನಾರಾವ್‌
ಮುಖ್ಯ ಅತಿಥಿಗಳಾಗಿದ್ದರು.

ದೈ.ಶಿ.ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶೇಖರ ಕಡ್ತಲ, ಕೋಶಾಧಿಕಾರಿ ಅಖೀಲ್‌ ಶೆಟ್ಟಿ, ತಾಲೂಕು ಅಧ್ಯಕ್ಷ ಪ್ರಶಾಂತ್‌ ಜೈನ್‌, ಪ್ರ. ಕಾರ್ಯದರ್ಶಿ ರಾಜೀವ ಶೆಟ್ಟಿ ಎಂ., ಕೋಶಾಧಿಕಾರಿ ಗೋವರ್ಧನ ಎಂ., ಪ್ರಾಂತ್ಯ ಸರಕಾರಿ
ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ರಾಜಶ್ರೀ ಬಿ. ಉಪಸ್ಥಿತರಿದ್ದರು. ಶಿವಾನಂದ ಕಾಯ್ಕಿಣಿ ಸ್ವಾಗತಿಸಿದರು. ನವೀನ್‌ಚಂದ್ರ ಅಂಬೂರಿ ನಿರೂಪಿಸಿದರು. ರಾಜೀವ ಶೆಟ್ಟಿ ವಂದಿಸಿದರು. ಜಿಲ್ಲೆಯ 510 ಮಂದಿ ದೈಹಿಕ ಶಿಕ್ಷಣ ಶಿಕ್ಷಕರು ಕೂಟದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.