ಮೂಡುಬಿದಿರೆ ಕಂಬಳಕ್ಕೆ “ಕಾಂತಾರ’ದ ರಿಷಬ್‌

ಕೋಟಿ ಚೆನ್ನಯ ಕಂಬಳದ ಸಮಾಲೋಚನ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್‌

Team Udayavani, Nov 24, 2022, 7:05 AM IST

ಮೂಡುಬಿದಿರೆ ಕಂಬಳಕ್ಕೆ “ಕಾಂತಾರ’ದ ರಿಷಬ್‌

ಮೂಡುಬಿದಿರೆ: ಕಡಲಕೆರೆಯಲ್ಲಿ ಡಿ. 24ರಂದು ನಡೆಯಲಿರುವ 20ನೇ ವರ್ಷದ ಕೋಟಿ-ಚೆನ್ನಯ ಕಂಬಳಕ್ಕೆ “ಕಾಂತಾರ’ ಖ್ಯಾತಿಯ ನಾಯಕ, ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ಚಿತ್ರ ತಂಡದವರನ್ನು ಕರೆಸಲು ಪ್ರಯತ್ನಿಸಲಾಗುತ್ತಿದೆ.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌, ಮಾಜಿ ಸಚಿವ ಸಿ.ಟಿ.ರವಿ ಕಂಬಳಕ್ಕೆ ಆಗಮಿಸಲಿದ್ದಾರೆ. ಇದೇ ವೇಳೆ, ಮೂಡುಬಿದಿರೆಯಲ್ಲಿ ಡಿ.21ರಿಂದ ವಾರಕಾಲ ನಡೆಯುವ ಅಂತಾರಾಷ್ಟ್ರೀಯ ಸ್ಕೌಟ್‌-ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಗೆ ದೇಶ ವಿದೇಶಗಳ ಆಗಮಿಸಲಿರುವ ಸಹಸ್ರಾರು ವಿದ್ಯಾರ್ಥಿಗಳೂ ಕಂಬಳ ವೀಕ್ಷಣೆ ಮಾಡಲಿದ್ದು ಕಂಬಳವನ್ನು ವಿಶ್ವದ ಮಾತಾಗಿಸುವ ಸಂದರ್ಭ ಒದಗಿ ಬರಲಿದೆ.

ಪ್ರವಾಸಿ ಕೇಂದ್ರ ಮೂಡುಬಿದಿರೆಯಲ್ಲಿ ಭಾರೀ ಸಂಭ್ರಮದ ವಾತಾವರಣ ನಿರ್ಮಾಣವಾಗಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್‌ ಕೋಟ್ಯಾನ್‌ ತಿಳಿಸಿದರು.

ಒಂಟಿಕಟ್ಟೆ ಕಡಲಕೆರೆ ಬಳಿಯ ಸೃಷ್ಟಿ ಗಾರ್ಡನ್‌ ಸಭಾಂಗಣದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ ಸಮಿತಿಯ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಸಾಧಕರನ್ನು ಗೌರವಿಸಲು ನಿರ್ಧರಿಸಲಾಗಿದ್ದು ಹಿಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಕೋಣಗಳು, ಜನರು ಬರುವುದರಿಂದ ಸ್ವಯಂ ಸೇವಕರು, ಕಂಬಳ ಪ್ರೇಮಿಗಳು ಸಹಕರಿಸಬೇಕಾಗಿ ಅವರು ಕೋರಿದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಗುಣಪಾಲ್‌ ಕಡಂಬ ಅವರು ಕಂಬಳ ಸಮಿತಿಗಿದ್ದ 10 ಎಕ್ರೆಯಲ್ಲಿ 1.5 ಎಕ್ರೆ ಹೊರಗಿದೆ, ಅದನ್ನು ಮತ್ತೆ ಸಮಿತಿಗೆ ಸೇರಿಸಿ, ಮ್ಯೂಸಿಯಂ, ಇತರ ಅಭಿವೃದ್ಧಿ ಚಟುವಟಿಕೆಗಳಾಗಬೇಕಾಗಿವೆ ಎಂದರು.

ಕೋಶಾಧಿಕಾರಿ ಭಾಸ್ಕರ್‌ ಎಸ್‌. ಕೋಟ್ಯಾನ್‌ ಮಾತನಾಡಿ, ಕೋಣಗಳನ್ನು ಕಟ್ಟಲು ಕರೆಯ ಬಳಿಯೇ ಸೂಕ್ತ ಜಾಗವನ್ನು ಕಾಯ್ದಿರಿಸಿ, ವಿಳಂಬವಾಗುವುದನ್ನು ತಪ್ಪಿಸುವ, ಸಭಾಕಲಾಪಗಳನ್ನು ಚುಟುಕಿನಲ್ಲಿ ಮುಗಿಸುವ ಬಗ್ಗೆ ಸಲಹೆ ನೀಡಿದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ ಅವರು ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸಿ, ಶೂನ್ಯ ತ್ಯಾಜ್ಯ ಕಂಬಳ ನಡೆಸಲು ಸಿದ್ಧತೆ ನಡೆಯುತ್ತಿದೆ ಎಂದರು.

ಪುರಸಭಾಧ್ಯಕ್ಷ ಪ್ರಸಾದ್‌ ಕುಮಾರ್‌, ಮುಖ್ಯಾಧಿಕಾರಿ ಇಂದು ಎಂ., ಸಮಿತಿಯ ಪ್ರಮುಖರಾದ ಸುನಿಲ್‌ ಆಳ್ವ, ಈಶ್ವರ್‌ ಕಟೀಲ್‌, ಕೆ.ಆರ್‌ ಪಂಡಿತ್‌, ಮೇಘನಾದ ಶೆಟ್ಟಿ, ಗೋಪಾಲ್‌ ಶೆಟ್ಟಿಗಾರ್‌, ಕೇಶವ ಕರ್ಕೇರ, ಕೆ.ಪಿ ಸುಚರಿತ ಶೆಟ್ಟಿ, ಧನಕೀರ್ತಿ ಬಲಿಪ , ಪುರಸಭೆ, ಗ್ರಾ.ಪಂ. ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.