ಎಸ್ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರಕ್ಕೆ ಮುಹೂರ್ತ?

ಮತ್ತೆ ಗರಿಗೆದರಿತು 9 ವರ್ಷಗಳ ಹಿಂದಿನ ಪ್ರಸ್ತಾವ

Team Udayavani, Sep 10, 2019, 5:00 AM IST

ಗೃಹ ಸಚಿವ ಬೊಮ್ಮಾಯಿ ಜತೆ ಶಾಸಕ ಸಂಜೀವ ಮಠಂದೂರು ಮಾತುಕತೆ ನಡೆಸಿದರು.

ಪುತ್ತೂರು: ದ.ಕ. ಜಿಲ್ಲೆಯ ಗ್ರಾಮಾಂತರದ ಕಾರ್ಯವ್ಯಾಪ್ತಿಯನ್ನು ಹೊಂದಿದ್ದರೂ ತಾಂತ್ರಿಕವಾಗಿ ಮಂಗಳೂರಿನಲ್ಲಿ ದ.ಕ. ಜಿಲ್ಲಾ ಪೊಲೀಸ್‌ ಕಚೇರಿಯನ್ನು ಗ್ರಾಮಾಂತರದ ಕೇಂದ್ರ ಸ್ಥಾನದಲ್ಲಿರುವ ಪುತ್ತೂರಿಗೆ ವರ್ಗಾಯಿಸಬೇಕೆಂಬ ಹಲವು ಸಮಯಗಳ ಬೇಡಿಕೆ ಈಡೇರುವ ದಿನಗಳು ಸನ್ನಿಹಿತವಾಗಿವೆ.

ಎಸ್‌ಪಿ ಕಚೇರಿ ವ್ಯಾಪ್ತಿಯಲ್ಲಿದ್ದ ಮಂಗಳೂರು ಮಹಾನಗರದಲ್ಲಿ 2010ರಲ್ಲಿ ಪೊಲೀಸ್‌ ಕಮಿಷನರೇಟ್‌ ಜಾರಿಗೆ ಬಂದಿತ್ತು. ಅನಂತರದಲ್ಲಿ ಮಂಗಳೂರು ಕಂದಾಯ ವಿಭಾಗ ವ್ಯಾಪ್ತಿಯಲ್ಲಿ ಕಮಿಷನರೆಟ್‌ ಬರುವುದರಿಂದ ಎಸ್ಪಿ ಕಚೇರಿಗೆ ಆ ವ್ಯಾಪ್ತಿಯಲ್ಲಿ ಅಧಿಕಾರ ವ್ಯಾಪ್ತಿ ಇಲ್ಲ. ಕಮಿಷನರೆಟ್‌ ವ್ಯವಸ್ಥೆಯನ್ನು ಉದ್ಘಾಟಿಸಿದ್ದ ಅಂದಿನ ಗೃಹ ಸಚಿವ
ದಿ| ವಿ.ಎಸ್‌. ಆಚಾರ್ಯ ಅವರು ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಭರವಸೆ ನೀಡಿದ್ದರು. ಮಂಗಳೂರಿನಿಂದ ಹೊರ ಭಾಗದ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಹಾಗೂ ಕಡಬ – ಈ ಗ್ರಾಮಾಂತರ ತಾಲೂಕುಗಳು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವ್ಯಾಪ್ತಿಗೆ ಬರುತ್ತವೆ. ಈ ಭಾಗದಲ್ಲಿ ಅಹಿತಕರ ಘಟನೆಗಳು ನಡೆದರೆ ಪೊಲೀಸ್‌ ಉನ್ನತಾಧಿಕಾರಿಗಳು ಮಂಗಳೂರಿನಿಂದ ಬರಬೇಕು ಅಥವಾ ಈ ಭಾಗದ ಠಾಣೆಗಳ ಅಧಿಕಾರಿಗಳು ಎಸ್ಪಿ ಸಭೆಗೆ ಮಂಗಳೂರಿಗೆ ಹೋಗಬೇಕು.

ಮಂಗಳೂರಿನ ಅನಂತರದ ಎರಡನೇ ಅತಿ ದೊಡ್ಡ ಪಟ್ಟಣವಾಗಿರುವ ಪುತ್ತೂರಿನ ಗಡಿ ಭಾಗದಲ್ಲಿ ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಕಡಬ ತಾಲೂಕುಗಳು ಬೆಸೆದುಕೊಂಡಿವೆ. ಫ‌ರಂಗಿಪೇಟೆಯಿಂದ ಸಂಪಾಜೆ ತನಕ ಮತ್ತೂಂದು ಭಾಗದಲ್ಲಿ ಚಾರ್ಮಾಡಿ ಘಾಟಿ ತನಕ ಹಾಗೂ ಕೇರಳ ಗಡಿಭಾಗದ ಈಶ್ವರಮಂಗಲ, ಜಾಲೂರು, ಪಾಣಾಜೆ, ವಿಟ್ಲ ಭಾಗಗಳು ಬರುತ್ತವೆ. ಪುತ್ತೂರು ಕೇಂದ್ರ ಸ್ಥಾನವಾದರೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹೆಚ್ಚು ಪ್ರಯೋಜನವಾಗಲಿದೆ.

ಗೃಹ ಸಚಿವರಿಂದ ಭರವಸೆ
ಪುತ್ತೂರು ಶಾಸಕ ಸಂಜೀವ ಮಠಂದೂರು ಪ್ರಸ್ತಾವದ ಕುರಿತು ಶನಿವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆದಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಗೃಹ ಸಚಿವರು, 10 ದಿನಗಳೊಳಗಾಗಿ ಮಂಗಳೂರಿಗೆ ಬಂದು ಇಲಾಖೆಯ ಸಭೆ ಕರೆದು ಚರ್ಚಿಸಿ, ತೀರ್ಮಾನಿಸುವ ಭರವಸೆ ನೀಡಿರುವುದು ಆಶಾಕಿರಣ ಮೂಡಿಸಿದೆ.ಎಸ್ಪಿ ಕಚೇರಿ ಸ್ಥಳಾಂತರವಾಗಬೇಕೆನ್ನುವ ಹಲವು ವರ್ಷಗಳ ಬೇಡಿಕೆ ಇದ್ದರೂ ರಾಜಕೀಯ ಇಚ್ಛಾಶಕ್ತಿಯ ಕಾರಣದಿಂದ ಬಾಕಿ ಉಳಿದಿತ್ತು. ಈ ಹಿಂದಿನ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಎಸ್ಪಿ ಕಚೇರಿ ಸ್ಥಳಾಂತರಕ್ಕೆ ಹಾಗೂ ಇದಕ್ಕೆ ಪೂರಕವಾಗಿ ಪೊಲೀಸ್‌ ತರಬೇತಿ ಕೇಂದ್ರವನ್ನೂ ಸ್ಥಾಪಿಸುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದರು. ಆದರೆ ಕೈಗೂಡಿರಲಿಲ್ಲ.

ಏನೇನು ಪ್ರಯೋಜನ?
ಗ್ರಾಮಾಂತರ ತಾಲೂಕುಗಳಲ್ಲಿ ಅಪರಾಧ ಪತ್ತೆ, ಕಾನೂನು ಸುವ್ಯವಸ್ಥೆಗೆ ಪ್ರಯೋಜನಕಾರಿ.
ಎಸ್ಪಿ ಕಚೇರಿ ತನ್ನ ಕಾರ್ಯ ವ್ಯಾಪ್ತಿಯಲ್ಲೇ ಇದ್ದರೆ ಜನಸಾಮಾನ್ಯರೊಂದಿಗೂ ನಿಕಟವಾಗಿರಲು ಸಾಧ್ಯ.
ಎಸ್ಪಿ ಕಚೇರಿ ಸ್ಥಳಾಂತರದೊಂದಿಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯೂ ಲಭ್ಯವಾಗುತ್ತದೆ. ಈ ಸಿಬಂದಿ ಬೀಟ್‌ ಪೊಲೀಸ್‌ ಕಾರ್ಯ ನಿರ್ವಹಿಸಬಹುದು.
ಭವಿಷ್ಯದಲ್ಲಿ ಸೈಬರ್‌ ಪೊಲೀಸ್‌ ಠಾಣೆ ಪುತ್ತೂರಿನಲ್ಲಿ ಕಾರ್ಯ ನಿರ್ವಹಿಸಬಹುದು.
ಮಂಗಳೂರಿನಿಂದ ನಿರ್ವಹಿಸ ಬೇಕಾದ ಕಾರ್ಯದೊತ್ತಡ ಕಡಿಮೆಯಾಗುತ್ತದೆ.

 ಉತ್ತಮ ಬೆಳವಣಿಗೆ
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಎಸ್ಪಿ ಕಚೇರಿ ಪ್ರಸ್ತಾವ ಜಾರಿಗೆ ಬಂದರೆ ಪುತ್ತೂರು ಗ್ರಾಮಾಂತರ ಜಿಲ್ಲೆ ರಚನೆಗೂ ಪೂರಕವಾಗಲಿದೆ ಹಾಗೂ ಪ್ರಥಮ ಹಂತ ಎನಿಸಲಿದೆ. ಪುತ್ತೂರಿನ ಶಾಸಕರು ಅಧಿಕಾರಕ್ಕೆ ಬಂದ ಕೆಲವೇ ಸಮಯಗಳಲ್ಲಿ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವುದು ಉತ್ತಮ ಬೆಳವಣಿಗೆ.
 - ಸಂದೀಪ್‌ ಲೋಬೋ , ಪುತ್ತೂರು

 15 ಎಕ್ರೆ ಜಾಗ ಗುರುತಿಸಿದ್ದೇವೆ
ಹಿಂದಿನ ಪ್ರಸ್ತಾವವನ್ನು ಮುಂದಿಟ್ಟಾಗ ಗೃಹ ಸಚಿವರು ಹಾಗೂ ಡಿಜಿ ಅವರಿಂದ ಪೂರಕ ಸ್ಪಂದನೆ ವ್ಯಕ್ತವಾಗಿದೆ. ಎಸ್ಪಿ ಕಚೇರಿಗಾಗಿ ಪುತ್ತೂರು ವ್ಯಾಪ್ತಿಯಲ್ಲಿ 15 ಎಕ್ರೆ ಜಾಗವನ್ನೂ ಗುರುತಿಸಿದ್ದೇವೆ. ಎಸ್ಪಿ ಕಚೇರಿ ಕಮಿಷನರೇಟ್‌ ವ್ಯಾಪ್ತಿಯಿಂದ 30 ಕಿ.ಮೀ. ದೂರದ ಕಾರ್ಯ ವ್ಯಾಪ್ತಿಯಲ್ಲಿಯೇ ಇರ ಬೇಕೆಂದಿದೆ. ಕೆಲವೇ ದಿನಗಳಲ್ಲಿ ಈ ಕುರಿತು ಚರ್ಚಿಸು ವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.
 - ಸಂಜೀವ ಮಠಂದೂರು, ಶಾಸಕರು, ಪುತ್ತೂರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಅಮೆರಿಕ ವಿಶ್ವದ ಶ್ರೀಮಂತ, ಬಲಿಷ್ಠ, ಭವ್ಯ ರಾಷ್ಟ್ರ. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೆ. 24 ಮತ್ತು 25 ರಂದು ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ....

  • ಕುಂಬಳೆ: ಕಾಸರಗೋಡು ಜಿಲ್ಲೆಯ ಪುತ್ತಿಗೆ ಗ್ರಾಮ ಪಂಚಾಯತಿನ ಬಾಡೂರು ಹೊಸಗದ್ದೆ ಮನೆಯ ದೀಲಿಪ್‌ ಕುಮಾರ್‌ ವತ್ಸಲಾ ದಂಪತಿ ಪುತ್ರ ಹೃದಯ್‌ ಹುಟ್ಟಿನಿಂದಲೇ ತೀವ್ರತರವಾದ...

  • ಮಂಗಳೂರು/ಉಡುಪಿ: ರಾಜ್ಯಾದ್ಯಂತ ಎ. 26ರಂದು ನಡೆಯಲಿರುವ "ಸಪ್ತಪದಿ' ಸಾಮೂಹಿಕ ಸರಳ ವಿವಾಹ ಯೋಜನೆಯನ್ನು ಬಡವರಿಗಾಗಿ ರೂಪಿಸಿದ್ದರೂ ಶ್ರೀಮಂತರು ಕೂಡ ಇಲ್ಲಿ ಸರಳ ವಿವಾಹವಾಗುವ...

  • ಜಮ್ಮು: ಕರ್ನಾಟಕ ತಂಡ ರಣಜಿ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಪರಿಸ್ಥಿತಿಯ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತಲ್ಲದೆ ಅನನುಭವಿ ತಂಡವೊಂದರ ವಿರುದ್ಧ ಹಿನ್ನಡೆ...

  • ಜಾಗತಿಕ ತಾಪಮಾನ ಏರಿಕೆ 2050ರ ವೇಳೆಗೆ ಭಾರತದ ಜಿಡಿಪಿ ಬೆಳವಣಿ ಗೆಯ ಮೇಲೆ ಸಾಕಷ್ಟು ಪ್ರತಿಕೂಲ ಪರಿಣಾಮಗಳನ್ನು ಬೀರಲಿದೆ ಎಂದು ಮೆಕಿನ್ಸೆ ಗ್ಲೋಬಲ್‌ ಇನ್‌ಸ್ಟಿಟ್ಯೂಟ್‌...