
ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ
Team Udayavani, Jan 26, 2022, 9:28 AM IST

ಮಂಗಳೂರು: ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅವರು ಬುಧವಾರದಂದು (ಜನವರಿ 26) ನಿಧನರಾದರು.
ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರು ಇಂದು ಸಾವನ್ನಪ್ಪಿದ್ದಾರೆ.
ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಶೀಲಾ ದಿವಾಕರ್ ಅನಾರೋಗ್ಯದ ಕಾರಣದಿಂದ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಶೀಲಾ ದಿವಾಕರ್ 3000ಕ್ಕೂ ಅಧಿಕ ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದರು. ಸಂಗೀತ ಕ್ಷೇತ್ರದಲ್ಲಿ ಅವಳಿ ಸಹೋದರಿಯರಾಗಿ ಶೀಲ ಮತ್ತು ಶೈಲ ಅವರು ಪ್ರಸಿದ್ಧಿ ಪಡೆದುಕೊಂಡಿದ್ದರು.
ಇದನ್ನೂ ಓದಿ:ದ.ಕ., ಉಡುಪಿಯ 306 ಗ್ರಾ.ಪಂ.ಗಳಲ್ಲಿ ಡಿಜಿಟಲ್ ಲೈಬ್ರೆರಿ
ಟಾಪ್ ನ್ಯೂಸ್
